Manipur violence: ಮಣಿಪುರ ಹಿಂಸಾಚಾರ: 8 ಜಿಲ್ಲೆಗಳಲ್ಲಿ ಕರ್ಫ್ಯೂ- ಇಂಟರ್ನೆಟ್ ಸೇವೆ ಸ್ಥಗಿತ
ಮಣಿಪುರದಲ್ಲಿ ಬುಧವಾರ (ಮೇ 3) ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸುವ ಬೇಡಿಕೆಯನ್ನು ವಿರೋಧಿಸಿ ಬುಡಕಟ್ಟು ಗುಂಪುಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಈ ವೇಳೆ ಹಿಂಸಾಚಾರ ಭುಗಿಲೆದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿರುವುದು ವರದಿಗಳಾಗಿವೆ.
ಬುಡಕಟ್ಟು ಆಂದೋಲನದ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದು ಪರಿಸ್ಥಿತಿ ನಿಯಂತ್ರಣಕ್ಕೆ ಬಾರದಿದ್ದಾಗ ಎಂಟು ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಇದರಿಂದಾಗಿ ರಾಜ್ಯದಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಘಟನೆಯಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಗೊಳಗಾಗಿದೆ. 4000 ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.

ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ವರ್ಗಕ್ಕೆ ಸೇರಿಸುವ ಬೇಡಿಕೆಯನ್ನು ವಿರೋಧಿಸಿ ಬುಧವಾರ (ಮೇ 3) ಪ್ರತಿಭಟಿಸಲು ವಿದ್ಯಾರ್ಥಿಗಳ ಸಂಘಟನೆ ಕರೆ ನೀಡಿತ್ತು. ರಾಜ್ಯದ ಎಲ್ಲಾ ಹತ್ತು ಗುಡ್ಡಗಾಡು ಜಿಲ್ಲೆಗಳ ಜನರನ್ನು ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿತ್ತು.
My state Manipur is burning, kindly help @narendramodi @PMOIndia @AmitShah @rajnathsingh @republic @ndtv @IndiaToday pic.twitter.com/VMdmYMoKqP
— M C Mary Kom OLY (@MangteC) May 3, 2023
ಈ 'ಆದಿವಾಸಿ ಏಕತಾ ಮಾರ್ಚ್' ವೇಳೆ ಹಿಂಸಾಚಾರ ಭುಗಿಲೆದ್ದಿದೆ. ಈ ಸಂದರ್ಭದಲ್ಲಿ ಚುರಾಚಂದ್‌ಪುರದಲ್ಲಿ ಉದ್ವಿಗ್ನತೆಯ ನಡುವೆ ಗುಂಪು ಮನೆಗಳಿಗೆ ನುಗ್ಗಿದೆ. ಇದರಿಂದಾಗಿ ಘರ್ಷಣೆ ಹಿಂಸಾಚಾರ ತೀವ್ರತೆ ಪಡೆದುಕೊಂಡಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ.

ರ್‍ಯಾಲಿಯಲ್ಲಿ ಸಾವಿರಾರು ಆಂದೋಲನಕಾರರು ಭಾಗವಹಿಸಿದ್ದರು. ಈ ವೇಳೆ ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ವೇಳೆಗೆ ಪರಿಸ್ಥಿತಿ ತಿಳಿಯಾಗಿದೆ.
ಐದು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸ್ಥಗಿತ
ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬುಡಕಟ್ಟು ಪ್ರಾಬಲ್ಯವಿರದ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ತೌಬಲ್, ಜಿರಿಬಾಮ್ ಮತ್ತು ಬಿಷ್ಣುಪುರ್ ಜಿಲ್ಲೆಗಳಲ್ಲಿ ಮತ್ತು ಬುಡಕಟ್ಟು ಪ್ರಾಬಲ್ಯವಿರುವ ಚುರಾಚಂದ್‌ಪುರ, ಕಾಂಗ್‌ಪೋಕ್ಪಿ ಮತ್ತು ತೆಂಗನೌಪಾಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ದಿನಗಳ ಕಾಲ ರಾಜ್ಯದಾದ್ಯಂತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಬ್ರಾಡ್‌ಬ್ಯಾಂಡ್ ಸೇವೆಗಳು ಕಾರ್ಯನಿರ್ವಹಿಸುತ್ತಿವೆ.

ಮೇಟಿಯನ್ನು ST ಗೆ ಸೇರಿಸುವುದರ ವಿರುದ್ಧ ಪ್ರತಿಭಟನೆ
ರಾಜ್ಯದ ಸಾರ್ವಜನಿಕ ಪ್ರತಿನಿಧಿಗಳು ಮೇಟಿಯ ಬೇಡಿಕೆಯನ್ನು ಬಹಿರಂಗವಾಗಿ ಬೆಂಬಲಿಸುತ್ತಿದ್ದು, ಬುಡಕಟ್ಟು ಹಿತಾಸಕ್ತಿಗಳನ್ನು ಸಾಮೂಹಿಕವಾಗಿ ರಕ್ಷಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ. ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೈತೇಯ್ (ಮೇಟಿ) ವಾಸಿಸುತ್ತಿದ್ದಾರೆ. ಇದು ರಾಜ್ಯ ಪ್ರದೇಶದ ಸುಮಾರು ಹತ್ತು ಪ್ರತಿಶತವನ್ನು ಹೊಂದಿದೆ. ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶೀಯರ ದೊಡ್ಡ ಪ್ರಮಾಣದ ಅಕ್ರಮ ವಲಸೆಯಿಂದಾಗಿ ಸಂಕಷ್ಟವನ್ನು ಎದುರಿಸುತ್ತಿರುವುದಾಗಿ ಸಮುದಾಯವು ಹೇಳಿಕೊಂಡಿದೆ. ಹೀಗಾಗಿ ಬೇರೆ ಜಾತಿಯನ್ನು ಮೇಟಿ ಸಮುದಾಯಕ್ಕೆ ಸೇರಿಸುವುದನ್ನು ಸಮುದಾಯ ತರಸ್ಕರಿಸಿದೆ.











Click it and Unblock the Notifications