ಮಣಿಪುರ ಹಿಂಸಾಚಾರ: ಕೆಲ ಗಂಟೆಗಳ ಕಾಲ ಕರ್ಫ್ಯೂ ಸಡಿಲಿಕೆ, ಜನ ಗುಂಪು ಸೇರುವುದು ನಿಷೇಧ!
ಮಣಿಪುರದಲ್ಲಿ ಪರಿಸ್ಥಿತಿ ಚಿಂತಾಜನಕವಾಗಿದೆ. ಅಲ್ಲಿ ಮತ್ತೆ ಹಿಂಸಾಚಾರ ನಡೆದ ಕಾರಣ ಸರ್ಕಾರ ಹಲವು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿತ್ತು. ಆದರೆ ಇಂದು ಅಂದರೆ ಮೇ 26ರಂದು ಕೆಲ ಗಂಟೆಗಳ ಕಾಲ ಕರ್ಫ್ಯೂ ಸಡಿಲಗೊಳಿಸಲಾಗಿದೆ. ಇದರಿಂದ ಜನರು ಮನೆಯಿಂದ ಹೊರಬಂದು ಅಗತ್ಯ ವಸ್ತುಗಳನ್ನು ಖರೀದಿಸಲು ಅನುವು ಮಾಡಿಕೊಡಲಾಗಿದೆ. ಆದರೆ ಜನರು ಒಟ್ಟಿಗೆ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಮಾಹಿತಿಯ ಪ್ರಕಾರ, ಆಡಳಿತ ಪೂರ್ವ ಮತ್ತು ಪಶ್ಚಿಮ ಮಣಿಪುರದಲ್ಲಿ ಕರ್ಫ್ಯೂ ಅನ್ನು ಬೆಳಿಗ್ಗೆ 5 ರಿಂದ 12 ರವರೆಗೆ ಸಡಿಲಗೊಳಿಸಲಾಗಿತ್ತು. ಅಧಿಕಾರಿಗಳ ಪ್ರಕಾರ, ಜನರು ತಮ್ಮ ಮನೆಯಿಂದ ಹೊರಬಂದು ಸರಕುಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ಕೆಲವು ಗಂಟೆಗಳ ಕಾಲ ಕರ್ಫ್ಯೂ ಸಡಿಲಗೊಳಿಸಲಾಗಿತ್ತು. ಅಗತ್ಯ ಔಷಧಿಗಳು ಮತ್ತು ಆಹಾರ ಪದಾರ್ಥಗಳ ಖರೀದಿ ಮಾಡಲು ಜನ ಮನೆಯಿಂದ ಹೊರಬಂದಿದ್ದು ಎಲ್ಲೆಡೆ ಕಂಡು ಬಂದಿದೆ.

ಯಾವ ಪ್ರದೇಶಗಳಲ್ಲಿ ಹಿಂಸಾಚಾರ?
ಮಾಹಿತಿ ಪ್ರಕಾರ, ಮಣಿಪುರದಲ್ಲಿ ಬುಧವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ದುಷ್ಕರ್ಮಿಗಳು ಇಂಫಾಲದಲ್ಲಿರುವ ಸಚಿವರ ಮನೆಗೂ ನುಗ್ಗಿದ್ದಾರೆ. ಮತ್ತೊಂದೆಡೆ, ಬಿಷ್ಣುಪುರ ಜಿಲ್ಲೆಯಲ್ಲಿ ಶಂಕಿತ ಉಗ್ರನೊಬ್ಬ ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಘಟನೆಯ ನಂತರ ಆಡಳಿತವು ಬಿಷ್ಣುಪುರ್, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಿದೆ. ಮಂಗಳವಾರ ರಾತ್ರಿ ಟ್ರಾಂಗ್ಲೋಬಿ ಮತ್ತು ಬಿಷ್ಣುಪುರ್ ಜಿಲ್ಲೆಗಳಲ್ಲಿ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಕೆಲವು ವರದಿಗಳು ಹೇಳಿವೆ.
ಗೃಹ ಸಚಿವರು ಮಣಿಪುರಕ್ಕೆ ಭೇಟಿ
ಮಣಿಪುರ ಹಿಂಸಾಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರವಾಗಿದ್ದು, ಶೀಘ್ರದಲ್ಲೇ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು-ಮೂರು ದಿನಗಳ ಕಾಲ ಅಲ್ಲಿಯೇ ಇದ್ದು ಪರಿಸ್ಥಿತಿಯನ್ನು ತಿಳಿದುಕೊಳ್ಳಲಿದ್ದಾರೆ.

ಮತ್ತೊಂದೆಡೆ, ಗುರುವಾರ ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶಾ ಭಾಗವಹಿಸಿದ್ದರು. ಅಲ್ಲಿ ಅವರು ಮಣಿಪುರ ಹಿಂಸಾಚಾರದ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿದರು. ಹೈಕೋರ್ಟ್ ಆದೇಶದಿಂದಾಗಿ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದರು. ಈ ಹಿಂದೆ ಸುಪ್ರೀಂ ಕೋರ್ಟ್ ಕೂಡ ಮಣಿಪುರ ಹೈಕೋರ್ಟ್ ತೀರ್ಪನ್ನು ತಪ್ಪು ಎಂದು ಬಣ್ಣಿಸಿತ್ತು. ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿದರು.
ಮಣಿಪುರ ಹಿಂಸಾಚಾರಕ್ಕೆ ಕಾರಣವೇನು?
ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ. ಈಗಾಗಲೇ ಎಪ್ಪತ್ತಕ್ಕೂ ಹೆಚ್ಚು ಜನರು ಹಿಂಸಾಚಾರದಲ್ಲಿ ಸಾವಿಗೀಡಾಗಿದ್ದಾರೆ. ಇಂಫಾಲ ಸುತ್ತಮುತ್ತ ನೆಲೆಗೊಂಡಿರುವ ಮೈಟೈಸ್ ಸಮುದಾಯ ಹಾಗೂ ಮಣಿಪುರ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿರುವ ಕುಕಿ ಹಾಗೂ ನಾಗಾ ಸಮುದಾಯಗಳ ನಡುವೆ ನಡೆಯುತ್ತಿರುವ ಸಂಘರ್ಷದಿಂದ ಈಶಾನ್ಯ ರಾಜ್ಯ ನಲುಗುತ್ತಿದೆ. ನಾಗಾಗಳು, ಕುಕಿಗಳು ಮತ್ತು ಮೈಟೈಸ್ ಸೇರಿದಂತೆ ರಾಜ್ಯದ ವಿವಿಧ ಜನಾಂಗೀಯ ಗುಂಪುಗಳು ಈ ಸಂಘರ್ಷದಲ್ಲಿ ತೊಡಗಿಕೊಂಡಿವೆ. ಇದು ಕೇವಲ ಮೀಸಲಾತಿ ಸಮಸ್ಯೆಯಿಂದ ನಡೆದಿರುವ ಸಂಘರ್ಷವಲ್ಲ. ಇದರ ಆಳದಲ್ಲಿ ಅಸ್ಮಿತೆಗಾಗಿ ನಡೆಸುತ್ತಿರುವ ಸುದೀರ್ಘ ಹೋರಾಟವೂ ಇದೆ.
ಮಣಿಪುರ ಸೇರಿದಂತೆ ಸುತ್ತಮುತ್ತಲಿನ ನಾಗಾ ಜನಾಂಗದವರು ಪ್ರತ್ಯೇಕ ರಾಜ್ಯಕ್ಕಾಗಿ ಸುದೀರ್ಘ ಹೋರಾಟವನ್ನೇ ನಡೆಸುತ್ತಿದ್ದಾರೆ. ಇದು ಹಲವು ಬಾರಿ ಹಿಂಸಾತ್ಮಕ ಸ್ವರೂಪ ಪಡೆದುಕೊಂಡು ಹಲವಾರು ಸಮಸ್ಯೆಗಳನ್ನು ಹುಟ್ಟಿಹಾಕಿದೆ. ಮಣಿಪುರದ ಅತಿ ದೊಡ್ಡ ಜನಾಂಗವಾದ ಮೈಟೈಸ್ ಸಮುದಾಯವು ಪ್ರತ್ಯೇಕ ನಾಗಾಲ್ಯಾಂಡ್ ರಾಜ್ಯದ ಬೇಡಿಕೆಯನ್ನು ವಿರೋಧಿಸುತ್ತಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications