Manipur violence: ಇಂಫಾಲ್‌ನಲ್ಲಿ ಪೊಲೀಸರ ವಿರುದ್ಧ ತಿರುಗಿಬಿದ್ದ ವಿದ್ಯಾರ್ಥಿಗಳು- ಹಿಂಸಾಚಾರದಲ್ಲಿ ಹಲವರಿಗೆ ಗಂಭೀರ ಗಾಯ

ಇಂಫಾಲ್, ಸೆಪ್ಟೆಂಬರ್‌ 27: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಸಂಘರ್ಷ ಉಂಟಾಗಿದೆ. ಮೈತೇಯಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಹತ್ಯೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಉದ್ರಿಕ್ತ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಸಿಡಿಸಿದ್ದಾರೆ.

ಸಿಎಂ ಕಚೇರಿಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ಇಂಫಾಲ್‌ನ ಮೊಯಿರಾಂಗ್‌ಖೋಮ್‌ನಲ್ಲಿ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಗುಂಪನ್ನು ಚದುರಿಸಲು ಭದ್ರತಾ ಪಡೆಗಳು ಹಲವು ಸುತ್ತಿನ ಅಶ್ರುವಾಯು ಶೆಲ್‌ಗಳನ್ನು ಹಾರಿಸಿವೆ. ಈ ವೇಳೆ, ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Manipur violence: Protesters, Cops Clash In Imphal, Tear Gas Fired Over Killing Of 2 Teens

ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳನ್ನು ಅಪಹರಿಸಿ ಹತ್ಯೆಗೈಯ್ಯಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳನ್ನು ಕೊಲೆ ಮಾಡಿರುವ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ. ಈ ಹತ್ಯೆಯನ್ನು ಖಂಡಿಸಿ ನಿನ್ನೆಯಿಂದ ವಿದ್ಯಾರ್ಥಿಗಳು ಇಂಪಾಲ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

'ನಮಗೆ ನ್ಯಾಯ ಬೇಕು' ಎಂಬ ಘೋಷಣೆಗಳನ್ನು ಕೂಗುತ್ತಿದ್ದ ವಿದ್ಯಾರ್ಥಿಗಳು ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಬಂಗಲೆಯತ್ತ ತೆರಳುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Manipur violence: Protesters, Cops Clash In Imphal, Tear Gas Fired Over Killing Of 2 Teens

ಪ್ರತಿಭಟನೆಯ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಮುಖಂಡ ಲಂತೆಂಗ್ಬಾ ಮಾತನಾಡಿ, 'ಇಬ್ಬರು ವಿದ್ಯಾರ್ಥಿಗಳ ಹಂತಕರನ್ನು 24 ಗಂಟೆಗಳ ಒಳಗೆ ಬಂಧಿಸಬೇಕು. ವಿದ್ಯಾರ್ಥಿಗಳ ಮೃತದೇಹಗಳನ್ನು ಪಡೆಯಬೇಕು. ಗೌರವಯುತವಾಗಿ ಅಂತ್ಯಕ್ರಿಯೆ ಮಾಡಬೇಕು ಎಂಬುದಾಗಿ ನಾವು ಒತ್ತಾಯಿಸುತ್ತೇವೆ' ಎಂದು ಹೇಳಿದ್ದಾರೆ.

ನಮ್ಮ ಸಮಸ್ಯೆಗಳ ಪರಿಹಾರಕ್ಕೆ ನಾವು ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಬಯಸುತ್ತೇವೆ. ನಮ್ಮ ಸ್ನೇಹಿತರು ಮತ್ತು ಸಹಪಾಠಿಗಳು ಕೊಲೆಯಾದಾಗ ನಾವು ನಮ್ಮ ಅಧ್ಯಯನವನ್ನು ಮುಂದುವರಿಸಬಹುದೇ ಎಂದು ಪ್ರಶ್ನಿಸಿದ್ದಾರೆ.

'ವಿದ್ಯಾರ್ಥಿ ಮುಖಂಡರು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರನ್ನು ಭೇಟಿ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

Manipur violence: Protesters, Cops Clash In Imphal, Tear Gas Fired Over Killing Of 2 Teens

ಪ್ರತಿಭಟನೆ ವೇಳೆ, ಪರಿಸ್ಥಿತಿ ಇದ್ದಕ್ಕಿದ್ದಂತೆ ವಿಕೋಪಕ್ಕೆ ತಿರುಗಿತು. ಕೆಲವು ವಿದ್ಯಾರ್ಥಿಗಳು ಕಲ್ಲು ತೂರಾಟವನ್ನು ಪ್ರಾರಂಭಿಸಿದರು. ಭದ್ರತಾ ಪಡೆಗಳು ಅವರನ್ನು ಚದುರಿಸಲು ಹಲವಾರು ಸುತ್ತಿನ ಅಶ್ರುವಾಯು ಶೆಲ್‌ಗಳು ಸಿಡಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆಯಲ್ಲಿ ಸುಮಾರು 45 ವಿದ್ಯಾರ್ಥಿಗಳು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಮಣಿಪುರದಲ್ಲಿ ಮೈತೇಯಿ ಹಾಗೂ ಕೂಕಿ ಸಮುದಾಯದ ನಡುವೆ ಮೇ ತಿಂಗಳಿಂದ ಜನಾಂಗೀಯ ಘರ್ಷಣೆ ನಡೆಯುತ್ತಿದೆ. ಈ ಸಂಘರ್ಷದಲ್ಲಿ 180 ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದಾರೆ. 50,000 ಕ್ಕೂ ಅಧಿಕ ಮಂದಿ ಮನೆ ತೊರೆದು ಹೋಗಿದ್ದಾರೆ. ಹಿಂಸಾಚಾರಕ್ಕೆ ಬಿಜೆಪಿಯೇ ಕಾರಣವೆಂದು ವಿರೋಧ ಪಕ್ಷಗಳು ಆರೋಪಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+