Manipur violence: ಮಣಿಪುರದಲ್ಲಿ ಮುಂದುವರಿದ ರಕ್ತಪಾತ- ಕುಕಿ ಸಮುದಾಯದ ಮೂವರ ಹತ್ಯೆ
ಇಂಪಾಲ, ಆಗಸ್ಟ್ 18: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಕುಕಿ ಸಮುದಾಯದ ಮೂವರನ್ನು ಶುಕ್ರವಾರ ಬೆಳಗ್ಗೆ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೊಲೀಸರ ಪ್ರಕಾರ, ನಾಗಾ ಬುಡಕಟ್ಟು ಜನಾಂಗದ ತಂಗ್ಖುಲ್‌ಗಳ ಪ್ರಾಬಲ್ಯವಿರುವ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕುಕಿ ಬುಡಕಟ್ಟು ಜನಾಂಗದವರು ವಾಸಿಸುವ ತೌವೈ ಕುಕಿ ಎಂಬ ಗ್ರಾಮದಲ್ಲಿ ಈ ಘಟನೆಯು ಮುಂಜಾನೆ 4:30 ರ ಸುಮಾರಿಗೆ ನಡೆದಿದೆ. ಜಿಲ್ಲೆಯ ಉಖ್ರುಲ್ ಪಟ್ಟಣದಿಂದ ಸುಮಾರು 47 ಕಿಮೀ ದೂರದಲ್ಲಿ ಈ ಗ್ರಾಮವಿದೆ.

'ನಮ್ಮ ಮಾಹಿತಿಯ ಪ್ರಕಾರ, ಶಸ್ತ್ರಸಜ್ಜಿತ ದುಷ್ಕರ್ಮಿಗಳ ಗುಂಪು ಗ್ರಾಮದ ಪೂರ್ವಕ್ಕೆ ಇರುವ ಬೆಟ್ಟಗಳಿಂದ ಗ್ರಾಮವನ್ನು ಸಮೀಪಿಸಿತು. ಗ್ರಾಮದ ಗಾರ್ಡ್‌ಗಳ ಮೇಲೆ ಗುಂಡು ಹಾರಿಸಲು ಪ್ರಾರಂಭಿಸಿತು. ಘಟನೆಯಲ್ಲಿ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ. ಯಾವುದೇ ಗಾಯಗಳ ವರದಿಯಾಗಿಲ್ಲ' ಎಂದು ಉಖ್ರುಲ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಎನ್ ವಶುಮ್ ಹೇಳಿದ್ದಾರೆ.
ಘಟನೆಯ ನಂತರ, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾದವರನ್ನು ಹಿಡಿಯಲು ರಾಜ್ಯ ಪೊಲೀಸರು ಮತ್ತು ಭಾರತೀಯ ಸೇನೆಯು ಜಂಟಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಈ ಘಟನೆಯು ಮೈತೇಯಿ ಮತ್ತು ಕುಕಿಗಳ ನಡುವೆ ನಡೆಯುತ್ತಿರುವ ಘರ್ಷಣೆಗೆ ಸಂಬಂಧಿಸಿದೆ ಎಂದು ಎಸ್ಪಿ ಹೇಳಿದ್ದಾರೆ. ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದರೂ ದುಷ್ಕರ್ಮಿಗಳು ಈಗಾಗಲೇ ಪರಾರಿಯಾಗಿದ್ದಾರೆ. ಆದರೆ ದಾಳಿಕೋರರ ಪತ್ತೆಗಾಗಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 5 ರಂದು, ಬಿಷ್ಣುಪುರ್ ಮತ್ತು ಚುರಾಚಂದ್‌ಪುರ ಜಿಲ್ಲೆಗಳಲ್ಲಿ ಎರಡು ಸಮುದಾಯಗಳ ನಡುವೆ ಗುಂಡಿನ ದಾಳಿ ನಡೆದಿತ್ತು. ಈ ಪ್ರತ್ಯೇಕ ಘಟನೆಗಳಲ್ಲಿ ಐವರು ಸಾವನ್ನಪ್ಪಿದ್ದರು. ಅದರಲ್ಲಿ ಮೂವರು ಮೈತೇಯಿ ಮತ್ತು ಇಬ್ಬರು ಕುಕಿಗಳು ಸಾವನ್ನಪ್ಪಿದ್ದರು.
ಮಣಿಪುರದಲ್ಲಿ ಮೊದಲ ಬಾರಿಗೆ ಮೇ 3 ರಂದು ಚುರಾಚಂದ್‌ಪುರ ಪಟ್ಟಣದಲ್ಲಿ ಘರ್ಷಣೆಗಳು ಪ್ರಾರಂಭವಾದವು. ಮೈತೀಸ್‌ಗೆ ಘೋಷಿಸಿದ ಮೀಸಲಾತಿಯನ್ನು ವಿರೋಧಿಸಿ ಕುಕಿ ಗುಂಪುಗಳು ಪ್ರತಿಭಟನೆ ನಡೆಸಿದ್ದವು. ಇದು ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಯಿತು.
ಈ ವರೆಗೂ ನಡೆದ ಘರ್ಷಣೆಗಳು 160 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಸುಮಾರು 50,000 ಜನರನ್ನು ಸ್ಥಳಾಂತರಿಸಲಾಗಿದೆ. ರಾಜ್ಯದ ಜನಸಂಖ್ಯೆಯ ಸುಮಾರು ಶೇ 53 ರಷ್ಟು ಮೈತೇಯಿ ಜನರಿದ್ದರೆ, ಕುಕಿಗಳು ಸುಮಾರು ಶೇ 16 ರಷ್ಟಿದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications