ದಗದಗಿಸುತ್ತಲೇ ಇದೆ ಮಣಿಪುರ: ಈಗ ಶುರುವಾಗಿದೆ ನೇರ ಗುಂಡಿನ ಸಂಘರ್ಷ- ಅಂತ್ಯಕಾಣದ ಸಾವು ನೋವು
ಇಂಫಾಲ್, ಜುಲೈ 03: ಮಣಿಪುರದ ಕೆಲವು ಸ್ಥಳಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ. ಇಂದು ನಡೆದ ಗುಂಡಿನ ಸಂಘರ್ಷದಲ್ಲಿ ನಾಲ್ವರು ಬಲಿಯಾಗಿದ್ದಾರೆ. ಇದು ಕಣಿವೆ ರಾಜ್ಯವನ್ನು ಮತ್ತಷ್ಟು ಉದ್ವಿಗ್ನ ಪರಿಸ್ಥಿತಿಗೆ ತಳ್ಳಿದೆ. ಕಳೆದ 24 ಗಂಟೆಗಳಲ್ಲಿ ಗುಂಡಿನ ದಾಳಿ, ದೊಂಬಿ, ಗಲಭೆಗಳು ನಡೆದಿರುವ ವರದಿಯಾಗಿದೆ ನಡೆದಿವೆ ಎಂದು ಪೊಲೀಸರು ಇಂದು ಮಾಹಿತಿ ನೀಡಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡವಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ. ಈ ಕಾರಣ ರಾಜ್ಯದಾದ್ಯಂತ ಸುಮಾರು 118 ಚೆಕ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ. ಈ ವರೆಗೆ 326 ಜನರನ್ನು ಬಂಧಿಸಲಾಗಿದೆ.

ರಾಜ್ಯ ಪೊಲೀಸರು ಮತ್ತು ಕೇಂದ್ರ ಪಡೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಕಳೆದ 24 ಗಂಟೆಗಳಲ್ಲಿ ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿನ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
'ಜುಲೈ 1 ಮತ್ತು ಜುಲೈ 2 ರ ಮಧ್ಯರಾತ್ರಿಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಈ ಗುಂಡಿನ ದಾಳಿಯು ಚುರಾಚಂದ್‌ಪುರ ಜಿಲ್ಲೆಯ ಸಮುಲಮ್ಲಂ ಬ್ಲಾಕ್‌ನ ಚಿಂಗ್ಲಾಂಗ್‌ಮೇ ಮತ್ತು ಲ್ಯಾಂಗ್ಜಾದ ಪಕ್ಕದ ಹಳ್ಳಿಗಳಲ್ಲಿ ವರದಿಯಾಗಿದೆ.
ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಭದ್ರತಾ ಪಡೆಗಳು ತಕ್ಷಣವೇ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳನ್ನು ಹಿಮ್ಮೆಟ್ಟಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಜುಲೈ 2 ರಂದು ಕಕ್ಚಿಂಗ್‌ನ ಖೌಬುಕ್ ಮತ್ತು ತಂಗಿಯೆಂಗ್ ಖುಂಜಾವೊ ಪ್ರದೇಶಗಳ ಕಡೆಗೆ ಸಾಗುತ್ತಿದ್ದರು. ಅವರು ನಾಪತ್ ಗ್ರಾಮ ಮತ್ತು ತಾಂಗ್ಜೆಂಗ್ ಅಹಲ್ಲುಪ್ ಪ್ರದೇಶಗಳಲ್ಲಿ ಗುಂಡು ಹಾರಿಸಿದರು. ಆದರೆ ಜುಲೈ 2 ಮತ್ತು ಜುಲೈ 3 ರ ಮಧ್ಯರಾತ್ರಿಯಲ್ಲಿ ಫೌಗಕ್ಚಾವೋ ಅವಾಂಗ್ ಲೈಕೈ ಮತ್ತು ಕ್ವಾಕ್ತಾ ಗ್ರಾಮಗಳ ಕಡೆಗೆ ಗುಂಡು ಹಾರಿಸಲು ಆರಂಭಿಸಿದರು ಎಂದು ಪೊಲೀಸರು ಹೇಳಿದರು.
'ಗುಂಡಿನ ದಾಳಿಯಲ್ಲಿ ಕ್ವಾಕ್ತಾ ಗ್ರಾಮದ ಒಬ್ಬ ವ್ಯಕ್ತಿಗೆ ಗಾಯವಾಗಿದೆ. ಭದ್ರತಾ ಪಡೆಗಳು ಫ್ರಿಂಜ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಅಲ್ಲಿಯೂ ದುಷ್ಕರ್ಮಿಗಳನ್ನು ಹಿಮ್ಮೆಟ್ಟಿಸಲಾಗಿದೆ ಎಂದು ತಿಳಿದುಬಂದಿದೆ.
ಇಂದು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಂಫಾಲ್ ಪಶ್ಚಿಮದ ಲೈಕಿಂತಬಿ ಮತ್ತು ಚಿರಿಕ್ ಗ್ರಾಮಗಳ ಕಡೆಗೆ ಗುಂಡು ಹಾರಿಸಿದ್ದಾರೆ. ಅವರಲ್ಲಿ ಕೆಲವರು ಚಿರಿಕ್ ಗ್ರಾಮದಲ್ಲಿನ ತೋಟದ ಮನೆಗಳನ್ನು ಸುಟ್ಟುಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೇ 3 ರಿಂದ ಮಣಿಪುರವು ವ್ಯಾಪಕ ರಕ್ತಪಾತಕ್ಕೆ ಸಾಕ್ಷಿಯಾಗಿದೆ. ಇಲ್ಲಿನ ಮೀಟೈ ಹಾಗೂ ಕುಕಿ ಸಮದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications