ಮಣಿಪುರ ಮಹಿಳೆಯರ ಬೆತ್ತಲೆ ವಿಡಿಯೋ ಹಂಚಿಕೊಳ್ಳದಂತೆ ಕೇಂದ್ರದ ಆದೇಶ: ಓರ್ವ ಆರೋಪಿ ಬಂಧನ!
ಮಣಿಪುರ ಜುಲೈ 20: ಅಂತರ್ಜಾಲದಲ್ಲಿ ಕಾಣಿಸಿಕೊಂಡ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೊವನ್ನು ಹಂಚಿಕೊಳ್ಳದಂತೆ ಕೇಂದ್ರ ಸರ್ಕಾರ ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಆದೇಶ ಹೊರಡಿಸಿದೆ. ಸರ್ಕಾರ ತನ್ನ ಸೂಚನೆಗಳಲ್ಲಿ ಭಾರತೀಯ ಕಾನೂನುಗಳಿಗೆ ಬದ್ಧವಾಗಿರುವುದು ಕಡ್ಡಾಯವಾಗಿದೆ ಮತ್ತು ಈ ವಿಷಯ ತನಿಖೆಯಲ್ಲಿದೆ ಎಂದು ಹೇಳಿದೆ.
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕುಕಿ-ಜೋಮಿ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ನೇತೃತ್ವದ ಜನಸಮೂಹವು ಬೆತ್ತಲೆಯಾಗಿ ಮೆರವಣಿಗೆ ಮಾಡುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೊ ಎರಡು ತಿಂಗಳ ಹಳೆಯದು ಎಂದು ಹೇಳಲಾಗಿದೆ. ಬಲಿಪಶುಗಳ ಮೇಲೆ ಮೊದಲು ಪುರುಷರಿಂದ ಸಾಮೂಹಿಕವಾಗಿ ಅತ್ಯಾಚಾರವೆಸಗಲಾಯಿತು. ನಂತರ ವಿವಸ್ತ್ರಗೊಳಿಸಿ ಸಾರ್ವಜನಿಕವಾಗಿ ಅಡ್ಡಾಡುವಂತೆ ಒತ್ತಾಯಿಸಲಾಯಿತು ಎಂದು ಮಂಗಳವಾರ ತಡವಾಗಿ ದೃಢಪಡಿಸಲಾಗಿದೆ. ಮೇ 4 ರಂದು ಈ ವಿದ್ರಾವಕ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಲಿಪಶುಗಳಲ್ಲಿ ಒಬ್ಬರು 19 ವರ್ಷ ವಯಸ್ಸಿನವರಾಗಿದ್ದು, ಮಧ್ಯಪ್ರವೇಶಿಸಲು ಪ್ರಯತ್ನಿಸಿದ ನಂತರ ಆಕೆಯ ಸಹೋದರ ಕೊಲ್ಲಲ್ಪಟ್ಟರು. ಪ್ರತಿಪಕ್ಷಗಳು ಲೈಂಗಿಕ ದೌರ್ಜನ್ಯದ ಬಗ್ಗೆ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದರೆ, ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಘಟನೆಯನ್ನು ಟೀಕಿಸಿದರು. ಇದು "ಮಾನವೀಯತೆಯ ವಿರುದ್ಧದ ಅಪರಾಧ" ಎಂದು ಬಣ್ಣಿಸಿದ್ದಾರೆ.
ವಿಡಿಯೋಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಟ್ವಿಟರ್‌ನಲ್ಲಿ ಘಟನೆಯನ್ನು "ಖಂಡನೀಯ ಮತ್ತು ಅಮಾನವೀಯ" ಎಂದು ಕರೆದಿದ್ದಾರೆ. ಸ್ಮೃತಿ ಇರಾನಿ ಅವರು ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ಕರೆ ಮಾಡಿ, "ದುಷ್ಕರ್ಮಿಗಳನ್ನು ನ್ಯಾಯಾಂಗಕ್ಕೆ ತರಲು ಯಾವುದೇ ಪ್ರಯತ್ನವನ್ನು ಬಿಡುವುದಿಲ್ಲ" ಎಂದು ಭರವಸೆ ನೀಡಿದರು.
ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಆರೋಪಿ ಬಂಧನ
ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಳೆಯ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡ ಒಂದು ದಿನದ ನಂತರ, ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಹೆರಾದಾಸ್ (32) ಎಂದು ಗುರುತಿಸಲಾಗಿದೆ. ವೀಡಿಯೊದ ಸಹಾಯದಿಂದ ಹಸಿರು ಶರ್ಟ್ ಧರಿಸಿದ್ದ ಈ ಆರೋಪಿಯನ್ನು ತೌಬಲ್ ಜಿಲ್ಲೆಯಿಂದ ಬಂಧಿಸಲಾಗಿದೆ.
ಮಣಿಪುರದ ಗುಡ್ಡಗಾಡು ಪ್ರದೇಶಗಳಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ಎರಡು ತಿಂಗಳ ಹಳೆಯ ವೀಡಿಯೊ ಬುಧವಾರ ಅಂತರ್ಜಾಲದಲ್ಲಿ ಕಾಣಿಸಿಕೊಂಡು ಆಕ್ರೋಶಕ್ಕೆ ಗುರಿಯಾಗಿದೆ. ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ಒಂದು ದಿನದ ನಂತರ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ4 ರಂದು ಈ ಘಟನೆ ನಡೆದಿದ್ದು ಆರೋಪಿಗಳ ಬಂಧನಕ್ಕೆ ಒತ್ತಾಯ ಹೆಚ್ಚಾಗಿತ್ತು.
ಪೊಲೀಸರು ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಬಂಧಿಸಲು ಸರ್ವಪ್ರಯತ್ನ ನಡೆಸಲಾಗುತ್ತಿದೆ. ಆರೋಪಿಗಳನ್ನು ಬಂಧಿಸಲು 12 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.












Click it and Unblock the Notifications