Manmohan Singh: ಶನಿವಾರ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ಗುರುವಾರ ರಾತ್ರಿ ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಾಳೆ (ಶನಿವಾರ) ನಡೆಸಲು ತೀರ್ಮಾನಿಸಲಾಗಿದೆ. ಶನಿವಾರ ಬೆಳಿಗ್ಗೆ 11.45 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ನಿಗಮಬೋಧ್ ಘಾಟ್‌ನಲ್ಲಿ ನೆರವೇರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಗೃಹಸಚಿವಾಲಯ ನಿರ್ಧರಿಸಿದೆ.
ಶುಕ್ರವಾರ ಅವರ ಪಾರ್ಥೀವ ಶರೀರವನ್ನು ದರ್ಶನಕ್ಕೆ ಇಡಲಾಗಿತ್ತು. ಹಲವು ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದರು. "ಡಾ. ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ್ ನಡೆಸಲು ನಿರ್ಧರಿಸಳಾಗಿದೆ. ಶನಿವಾರ ಬೆಳಿಗ್ಗೆ 11.45ಕ್ಕೆ ನವದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ" ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಸೇನಾ ಗೌರವಗಳ ಜೊತೆ ಅಂತ್ಯ ಸಂಸ್ಕಾರ ಮಾಡಲು ವ್ಯವಸ್ಥೆ ಮಾಡುವಂತೆ ರಕ್ಷಣಾ ಸಚಿವಾಲಯವನ್ನು ಕೋರಿದೆ. ಎಲ್ಲಾ ರೀತಿಯ ಸರ್ಕಾರಿ ಗೌರವಗಳ ಜೊತೆ ಅಂತ್ಯಕ್ರಿಯೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಸ್ಮಾರಕ ನಿರ್ಮಿಸಲು ಕಾಂಗ್ರೆಸ್ ಮನವಿ
ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲೇ ಅವರ ಸ್ಮಾರಕ ನಿರ್ಮಾಣ ಮಾಡುವ ಸಾಧ್ಯತೆಯನ್ನು ಪರಿಶೀಲನೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಮನವಿ ಮಾಡಿದ್ದಾರೆ.
2004 ರಿಂದ 2014ರವರೆಗೆ ಯುಪಿಎ ಸರ್ಕಾರದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ದೇಶದ ಅಭಿವೃದ್ಧಿಗೆ ಹಲವು ಕೊಡುಗೆ ನೀಡಿದ್ದಾರೆ. 92 ವರ್ಷ ವಯಸ್ಸಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಮಲ್ಲಿಕಾರ್ಜುನ್ ಖರ್ಗೆ ಪತ್ರ ಬರೆದಿದ್ದು, "ಡಾ. ಮನಮೋಹನ್ ಸಿಂಗ್ ಅವರ ಅಂತಿಮ ವಿಧಿ ವಿಧಾನಗಳನ್ನು ಶನಿವಾರ ನಡೆಸಲು ತೀರ್ಮಾನಿಸಿದ್ದು, ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲೇ ಸ್ಮಾರಕ ನಿರ್ಮಾಣಕ್ಕೆ ಮನವಿ ಮಾಡಿದ್ದೇನೆ" ಎಂದು ಮನವಿ ಮಾಡಿದ್ದು ಈ ಪತ್ರವನ್ನು ಕಾಂಗ್ರೆಸ್ ಎಕ್ಸ್‌ನಲ್ಲಿ ಹಂಚಿಕೊಂಡಿದೆ.
ಇದೇ ಜಾಗದಲ್ಲಿ ರಾಜಕಾರಣಿಗಳು ಮತ್ತು ಮಾಜಿ ಪ್ರಧಾನ ಮಂತ್ರಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿ ಸ್ಮಾರಕಗಳನ್ನು ಹೊಂದಿದೆ. ಸಂಪ್ರದಾಯವನ್ನು ಮುಂದುವರಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
"ದೇಶವು ತೀವ್ರ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿದ್ದಾಗ ಭಾರತವನ್ನು ಬಿಕ್ಕಟ್ಟಿನಿಂದ ಹೊರಬರುವಂತೆ ಮಾಡಿದರು. ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಮತ್ತು ಸ್ಥಿರವಾದ ಅಭಿವೃದ್ಧಿ ಸಾಧಿಸುವಲ್ಲಿ ಅವರು ಮುಖ್ಯಪಾತ್ರ ವಹಿಸಿದರು. ದೇಶದ ಪ್ರಧಾನಿಯಾಗಿ ಅವರು ಮಾಡಿದ ಕೆಲಸಗಳು ಅವರನ್ನು ವಿಶ್ವದ ಪ್ರಮುಖ ರಾಜಕಾರಣಿಗಳ ಸಾಲಿನಲ್ಲಿ ನಿಲ್ಲಿಸಿದೆ ಎಂದು ಹೇಳಿದರು.












Click it and Unblock the Notifications