ಟ್ರಂಪ್ ಜೊತೆ ಔತಣಕೂಟಕ್ಕೆ ಕಾಂಗ್ರೆಸ್ ನಾಯಕರು ಗೈರು

ನವದೆಹಲಿ, ಫೆಬ್ರವರಿ 24 : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜೊತೆಗಿನ ಔತಣಕೂಟಕ್ಕೆ ಗೈರಾಗಲಿದ್ದಾರೆ. ಕಾಂಗ್ರೆಸ್ ನಾಯಕರು ಔತಣಕೂಟದಿಂದ ದೂರವುಳಿಯಲಿದ್ದು, ಇದು ಚರ್ಚೆಗೆ ಕಾರಣವಾಗಿದೆ.

ಮನಮೋಹನ್ ಸಿಂಗ್, ರಾಜ್ಯಸಭಾ ಸದಸ್ಯ ಗುಲಾಮ್ ನಬಿ ಆಜಾದ್ ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ನಡೆಯುವ ಔತಣಕೂಟದಿಂದ ದೂರವುಳಿಯಲಿದ್ದಾರೆ. ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಔತಣಕೂಟಕ್ಕೆ ಆಹ್ವಾನ ಕೊಟ್ಟಿಲ್ಲ.

ರಾಷ್ಟ್ರಪತಿ ಭವನದಿಂದ ಸೋಮವಾರ ಬೆಳಗ್ಗೆ ಮನಮೋಹನ್ ಸಿಂಗ್‌ಗೆ ಆಹ್ವಾನ ನೀಡಲಾಗಿದೆ. ಆದರೆ, ಔತಣಕೂಟದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗುಲಾಮ್ ನಬಿ ಆಜಾದ್ ಸಹ ಪಾಲ್ಗೊಳ್ಳುವುದಿಲ್ಲ.

Manmohan Singh To Skip Banquet Hosted For Donald Trump

ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಹ ಔತಣಕೂಟದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಹೇಳಿದ್ದರು. ರಾಜ್ಯಸಭೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಔತಣಕ್ಕೆ ಆಹ್ವಾನಿಸಲಾಗಿದೆ. ಆದರೆ, ಡೊನಾಲ್ಡ್ ಟ್ರಂಪ್ ವಿರೋಧ ಪಕ್ಷದ ಯಾವುದೇ ನಾಯಕರನ್ನು ಭೇಟಿಯಾಗುತ್ತಿಲ್ಲ.

ಡೊನಾಲ್ಡ್ ಟ್ರಂಪ್ ಎರಡು ದಿನದ ಭಾರತ ಭೇಟಿಯ ವೇಳೆ ವಿರೋಧ ಪಕ್ಷದ ಯಾವ ನಾಯಕರನ್ನು ಭೇಟಿಯಾಗುತ್ತಿಲ್ಲ. ಈ ಬಗ್ಗೆ ಶುಕ್ರವಾರ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+