ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮುಂಬೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮನೋಹರ್ ಪರಿಕ್ಕರ್
ಪಣಜಿ, ಫೆಬ್ರವರಿ 22: ಕಳೆದ ವಾರ ತೀವ್ರ ಅನಾರೋಗ್ಯದಿಂದ ಮುಂಬೈಯ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ಇಂದು(ಫೆ.22) ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಅವರ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಆಸ್ಪತ್ರೆಗೆ ಮೋದಿ ಭೇಟಿ, ಪರಿಕ್ಕರ್ ಆರೋಗ್ಯ ಪರಿಸ್ಥಿತಿ ಇನ್ನೂ ನಿಗೂಢ
ಫೆಬ್ರವರಿ 15 ರಂದು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮನೋಹರ್ ಪರಿಕ್ಕರ್ ಅವರು ನಾಲ್ಕನೆ ಹಂತದ ಪ್ಯಾನ್ ಕ್ರಿಯಾಟಿಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಕುರಿತು ಆಸ್ಪತ್ರೆಯಿಂದಾಗಲೀ, ಪರಿಕ್ಕರ್ ಅವರ ಆಪ್ತ ಮೂಲದಿಂದಾಗಲೀ ಯಾವುದೇ ನಿಖರ ಮಾಹಿತಿ ಸಿಕ್ಕಿಲ್ಲ.
ಇಂದು ಗೋವಾ ರಾಜ್ಯದ ವಾರ್ಷಿಕ ಬಜೆಟ್ ಮಂಡನೆಯಾಗಲಿದ್ದು, ಬಜೆಟ್ ಅನ್ನು ಮನೋಹರ್ ಪರಿಕ್ಕರ್ ಅವರೇ ಮಂಡಿಸುತ್ತಾರೆ ಎಂದು ಹೇಳಲಾಗುತ್ತಿದೆಯಾದರೂ, ಈ ಬಗ್ಗೆ ಖಚಿತ ಮಾಹಿತಿ ತಿಳಿದುಬಂದಿಲ್ಲ.