ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿರುವ ಮನೋಹರ್ ಪರಿಕ್ಕರ್

|
Google Oneindia Kannada News

ಪಣಜಿ, ಮಾರ್ಚ್ 07: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ.

ನಿನ್ನೆ(ಮಾ.06) ಮುಂಬೈಯ ಲೀಲಾವತಿ ಆಸ್ಪತ್ರೆಗೆ ತೆರಳಿದ್ದ ಪರಿಕ್ಕರ್ ಅವರ ಆರೋಗ್ಯ ತಪಾಸಣೆ ಮಾಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳುವಂತೆ ಸೂಚಿಸಿದ್ದಾರೆ ಎಂದು ಪರಿಕ್ಕರ್ ಅವರ ಆಪ್ತ ಕಾರ್ಯದರ್ಶಿ ರೂಪೇಶ್ ಕಾಮತ್ ತಿಳಿಸಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ವಿಡಿಯೋದಲ್ಲಿ ಮಾತನಾಡಿದ ಪರಿಕ್ಕರ್ ತಮ್ಮ ಆರೋಗ್ಯದ ಬಗ್ಗೆ ವಿಡಿಯೋದಲ್ಲಿ ಮಾತನಾಡಿದ ಪರಿಕ್ಕರ್

ನಿನ್ನೆ ತಾನೆ ಟ್ವಿಟ್ಟರ್ ನಲ್ಲಿ ವಿಡಿಯೋ ಮೆಸೇಜ್ ನೀಡಿದ್ದ ಪರಿಕ್ಕರ್, ತಾವು ಹೆಚ್ಚಿನ ಚಿಕಿತ್ಸೆಗಾಗಿ ವಿದೇಶಕ್ಕೆ ಹೋಗಬೇಕಾಗಬಹುದು. ನಿಮ್ಮೆಲ್ಲರ ಆಶೀರ್ವಾದ, ಹಾರೈಕೆ ನನ್ನ ಮೇಲಿರಲಿ ಎಂದು ಗೋವಾ ಜನತೆಗೆ ಮನವಿ ಮಾಡಿದ್ದರು.

Manohar Parrikar to leave for US for medical treatment

ಫೆ. 15 ರಂದು ಅನಾರೋಗ್ಯದ ಕಾರಣ ಆಸ್ಪತ್ರೆ ಸೇರಿದ್ದ ಪರಿಕ್ಕರ್ ಪೆ.22 ರಂದು ಡಿಸ್ಚಾರ್ಜ್ ಆಗಿ, ಅದೇ ದಿನ ಬಜೆಟ್ ಮಂಡಿಸಿದ್ದರು.

ಪರಿಕ್ಕರ್ ಅವರು ನಾಲ್ಕನೆ ಹಂತದ ಪ್ಯಾನ್ ಕ್ರಿಯಾಟಿಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ಕುರಿತು ಆಸ್ಪತ್ರೆಯಿಂದಾಗಲೀ, ಪರಿಕ್ಕರ್ ಅವರ ಆಪ್ತ ಮೂಲದಿಂದಾಗಲೀ ಯಾವುದೇ ನಿಖರ ಮಾಹಿತಿ ದೊರಕಿಲ್ಲ. ಅವರು ಕೇವಲ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದ್ದು, ಯಾವುದೇ ಗಂಭೀರ ಸಮಸ್ಯೆಯಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಮತ್ತೆ ಆಸ್ಪತ್ರೆಗೆ ದಾಖಲಾದ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲಾದ ಗೋವಾ ಸಿಎಂ ಮನೋಹರ್ ಪರಿಕ್ಕರ್

English summary
Goa Chief Minister Manohar Parrikar has been released from Mumbai's Lilavati Hospital and is set to travel to the United States of America (U.S.A.) in the early hours of Wednesday(March 7th) for further medical treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X