• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: 13 ಮಂದಿ ಸಾವು

|
   ಹಿಮಾಚಲ ಪ್ರದೇಶ ಪ್ರವಾಹದ ಭಯಾನಕ ವಿಡಿಯೋಗಳು ವೈರಲ್

   ಮನಾಲಿ, ಸೆಪ್ಟೆಂಬರ್ 25: ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಉಂಟಾದ ಪ್ರವಾಹಕ್ಕೆ ಒಟ್ಟು 13 ಜನ ಮೃತರಾಗಿದ್ದು, ಈ ಭಾಗದ 378 ರಸ್ತೆಗಳನ್ನು ಮುಚ್ಚಲಾಗಿದೆ.

   ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಪಂಜಾಬ್ ನಲ್ಲಿ ರಜಾ

   ಪ್ರಮುಖ ಪ್ರವಾಸೀ ತಾಣವಾದ ಹಿಮಾಚಲ ಪ್ರದೇಶದಲ್ಲಿ ಮುನ್ನೂರೈವತ್ತಕ್ಕೂ ಹೆಚ್ಚು ರಸ್ತೆಗಳನ್ನು ಮುಚ್ಚಿರುವುದು ಪ್ರವಾಸಿಗರಲ್ಲಿ ಆತಂಕ ಸೃಷ್ಟಿಸಿದೆ.

   ಬೆಂಗಳೂರಲ್ಲಿ 3 ದಿನಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

   ಹಿಮಾಚಲ ಪ್ರದೇಶದ 10-12 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಗುಡ್ಡಗಾಡು ಪ್ರದೇಶದವಾದ ಹಿಮಾಚಲ ಪ್ರದೇಶದಲ್ಲಿ ಭೂಕುಸಿತದಿಂದ ಉಂಟಾಗುವ ಹಾನಿಯನ್ನು ತಪ್ಪಿಸುವ ಸಲುವಾಗಿ ರಸ್ತೆಗಳನ್ನು ಮುಚ್ಚಲಾಗಿದೆ.

   ನದಿ ತೀರ ಪ್ರದೇಶಗಳಲ್ಲಿ ವಾಸಿಸುತ್ತಿದ್ದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಸೆಪ್ಟೆಂಬರ್ ಅಂತ್ಯದವರೆಗೂ ಈ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿಯಲಿದೆ.

   ಹವಾಮಾನ ಇಲಾಖೆಯ ಮುನ್ಸೂಚನೆಯ ಮೇರೆಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗಿದೆಯಾದರೂ, ಕೆಲವು ಅನಾಹುತಗಳನ್ನು ತಪ್ಪಿಸುವಲ್ಲಿ ಇಲ್ಲಿನ ಸರ್ಕಾರ ವಿಫಲವಾಗಿದ್ದು, ಸಾವಿಗೀಡಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ.

   English summary
   As the heavy rainfall continued to remain disastrous on Monday in Himachal Pradesh, 13 people were died. And motre than 350 roads are closed to avoid landslides.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X