ಉಪ್ರದ ಕಾನ್ಪುರದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಸಾವು

Posted By:
Subscribe to Oneindia Kannada

ಕಾನ್ಪುರ, ಫೆಬ್ರವರಿ 1: ನಿರ್ಮಾಣ ಹಂತದ ಕಟ್ಟಡ ಕುಸಿದು ಕನಿಷ್ಠ ನಾಲ್ವರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬುಧವಾರ ಸಂಭವಿಸಿದೆ. ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಗಳಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಂಭವವಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಹಲವರು ಗಾಯಗೊಂಡಿದ್ದಾರೆ. ಕನಿಷ್ಠ ಮೂವತ್ತು ಮಂದಿ ಅವಶೇಷಗಳಡಿ ಸಿಲುಕಿದ ಸಾಧ್ಯತೆಗಳಿವೆ. ರಾಷ್ಟ್ರೀಯ ಪ್ರಕೃತಿ ವಿಕೋಪ ರಕ್ಷಣಾ ತಂಡ ಮತ್ತು ಸೇನೆಯು ಅಪಘಾತ ನಡೆದ ಸ್ಥಳ ತಲುಪಿದ್ದು, ರಕ್ಷಣಾ ಕಾರ್ಯಚರಣೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.[ಬೆಳ್ಳಂದೂರು ಕಟ್ಟಡ ಕುಸಿತ: ಓನರ್, ಕಂಟ್ರ್ಯಾಕ್ಟರ್ ಬಂಧನ]

Many Feared dead In Building Collapse In Uttar Pradesh's Kanpur

ಮೂಲಗಳ ಪ್ರಕಾರ, ದುರ್ಘಟನೆ ಸಂಭವಿಸಿದ ವೇಳೆಯಲ್ಲಿ ನಿರ್ಮಾಣ ಕಾರ್ಮಿಕರು ಕಟ್ಟಡದ ಆರನೇ ಅಂತಸ್ತಿನಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯಕ್ಕೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಘಟನೆ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
At least four people have died after an under-construction building collapsed in Uttar Pradesh's Kanpur. Many are feared trapped under the debris, a senior official said.
Please Wait while comments are loading...