ರಾಹುಲ್ ಗಾಂಧಿ ಇಫ್ತಾರ್ ಕೂಟದಲ್ಲಿ ಗಣ್ಯರ ದಂಡು
Recommended Video

ನವ ದೆಹಲಿ, ಜೂನ್ 13: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
ದೆಹಲಿಯ ತಾಜ್ ಹೊಟೆಲ್ನಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಕಾಂಗ್ರೆಸ್ನ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಬಿಜೆಪಿಯ ರಾಜನಾಥ್ ಸಿಂಗ್, ಸಿಪಿಎಂನ ಸೀತಾರಾಮ್ ಯೆಚೂರಿ ಇನ್ನೂ ಹಲವು ಮುಖಂಡರು ಭಾಗವಹಿಸಿದ್ದರು.

ಎಐಸಿಸಿ ಅಧ್ಯಕ್ಷರಾದ ಬಳಿಕ ಇದು ರಾಹುಲ್ ಗಾಂಧಿ ಅವರಿಗೆ ಮೊದಲ ಇಫ್ತಾರ್ ಕೂಟವಾಗಿದ್ದು, ಲೋಕಸಭೆ ಚುನಾವಣೆ ಸಮೀಪದಲ್ಲಿದ್ದು, ಕಾಂಗ್ರೆಸ್ ಪಕ್ಷವು ಮಹಾಘಟಬಂಧನ್ ಕಡೆ ವಾಲಿರುವುದರಿಂದ ಈ ಇಫ್ತಾರ್ ಕೂಟ ರಾಜಕೀಯ ಪ್ರಾಮುಖ್ಯತೆಯನ್ನೂ ಪಡೆದಿದೆ.

ಪ್ರಣಬ್ ಮುಖರ್ಜಿ ಹಾಜರು
ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಣಬ್ ಮುಖರ್ಜಿ ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸುವುದಿಲ್ಲ ಎಂಬ ಸುದ್ದಿ ಹರಿದಾಡಿತ್ತು ಆದರೆ ಪ್ರಣಬ್ ಮುಖರ್ಜಿ ಅವರು ಇಫ್ತಾರ್ನಲ್ಲಿ ಭಾಗವಹಿಸಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ವಿವಿಧ ಪಕ್ಷಗಳ ಮುಖಂಡರು ಭಾಗಿ
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ನೊಂದಿಗೆ ಕೈಜೋಡಿಸಿರುವ ಮಹಾಘಟಬಂಧನ್ನ ವಿವಿಧ ಪಕ್ಷಗಳ ಪ್ರಮುಖರು ಇಫ್ತಾರ್ ಕೂಟದಲ್ಲಿ ಭಾಗಹಿಸಿದ್ದರು. ಸಿಪಿಎಂನ ಸೀತಾರಾಮ್ ಯೆಚೂರಿ, ಶರದ್ ಪವಾರ್, ಡಿಎಂಕೆಯ ಕನಿಮೋಳಿ, ಆರ್ಜೆಡಿಯ ಶರದ್ ಯಾದವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್ಪಿಯ ಮಾಯಾವತಿ, ಜೆಡಿಎಸ್ನ ಡ್ಯಾನಿಶ್ ಅಲಿ ಇನ್ನೂ ಹಲವು ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

ಮನಮೋಹನ್ ಸಿಂಗ್ ಭಾಗಿ
ಕಾಂಗ್ರೆಸ್ನ ಹಿರಿಯರಾದ ಮನಮೋಹನ್ ಸಿಂಗ್, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ದಾರಿ, ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ಇನ್ನೂ ಹಲವು ಮುಖಂಡರು ಭಾಗವಹಿಸಿದ್ದರು.

ಕೇಜ್ರಿವಾಲ್ಗಿಲ್ಲ ಕರೆ
ಎಎಪಿಯ ಅರವಿಂದ್ ಕೇಜ್ರಿವಾಲ್, ತೆಲಂಗಾಣದ ಸಿಎಂ ಕೆ.ಚಂದ್ರಶೇಖರ ರಾವ್, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications