• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಹುಲ್ ಗಾಂಧಿ ಇಫ್ತಾರ್ ಕೂಟದಲ್ಲಿ ಗಣ್ಯರ ದಂಡು

|
   ರಾಹುಲ್ ಗಾಂಧಿ ಇಫ್ತಾರ್ ಕೂಟದಲ್ಲಿ ಗಣ್ಯರ ದಂಡು | Oneindia kannada

   ನವ ದೆಹಲಿ, ಜೂನ್ 13: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

   ದೆಹಲಿಯ ತಾಜ್ ಹೊಟೆಲ್‌ನಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಪ್ರಣಬ್ ಮುಖರ್ಜಿ, ಬಿಜೆಪಿಯ ರಾಜನಾಥ್ ಸಿಂಗ್, ಸಿಪಿಎಂನ ಸೀತಾರಾಮ್ ಯೆಚೂರಿ ಇನ್ನೂ ಹಲವು ಮುಖಂಡರು ಭಾಗವಹಿಸಿದ್ದರು.

   ಎಐಸಿಸಿ ಅಧ್ಯಕ್ಷರಾದ ಬಳಿಕ ಇದು ರಾಹುಲ್ ಗಾಂಧಿ ಅವರಿಗೆ ಮೊದಲ ಇಫ್ತಾರ್ ಕೂಟವಾಗಿದ್ದು, ಲೋಕಸಭೆ ಚುನಾವಣೆ ಸಮೀಪದಲ್ಲಿದ್ದು, ಕಾಂಗ್ರೆಸ್‌ ಪಕ್ಷವು ಮಹಾಘಟಬಂಧನ್ ಕಡೆ ವಾಲಿರುವುದರಿಂದ ಈ ಇಫ್ತಾರ್ ಕೂಟ ರಾಜಕೀಯ ಪ್ರಾಮುಖ್ಯತೆಯನ್ನೂ ಪಡೆದಿದೆ.

   ಪ್ರಣಬ್ ಮುಖರ್ಜಿ ಹಾಜರು

   ಪ್ರಣಬ್ ಮುಖರ್ಜಿ ಹಾಜರು

   ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಣಬ್ ಮುಖರ್ಜಿ ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸುವುದಿಲ್ಲ ಎಂಬ ಸುದ್ದಿ ಹರಿದಾಡಿತ್ತು ಆದರೆ ಪ್ರಣಬ್ ಮುಖರ್ಜಿ ಅವರು ಇಫ್ತಾರ್‌ನಲ್ಲಿ ಭಾಗವಹಿಸಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

   ವಿವಿಧ ಪಕ್ಷಗಳ ಮುಖಂಡರು ಭಾಗಿ

   ವಿವಿಧ ಪಕ್ಷಗಳ ಮುಖಂಡರು ಭಾಗಿ

   ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿರುವ ಮಹಾಘಟಬಂಧನ್‌ನ ವಿವಿಧ ಪಕ್ಷಗಳ ಪ್ರಮುಖರು ಇಫ್ತಾರ್‌ ಕೂಟದಲ್ಲಿ ಭಾಗಹಿಸಿದ್ದರು. ಸಿಪಿಎಂನ ಸೀತಾರಾಮ್ ಯೆಚೂರಿ, ಶರದ್ ಪವಾರ್, ಡಿಎಂಕೆಯ ಕನಿಮೋಳಿ, ಆರ್‌ಜೆಡಿಯ ಶರದ್ ಯಾದವ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಿಎಸ್‌ಪಿಯ ಮಾಯಾವತಿ, ಜೆಡಿಎಸ್‌ನ ಡ್ಯಾನಿಶ್ ಅಲಿ ಇನ್ನೂ ಹಲವು ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

   ಮನಮೋಹನ್ ಸಿಂಗ್ ಭಾಗಿ

   ಮನಮೋಹನ್ ಸಿಂಗ್ ಭಾಗಿ

   ಕಾಂಗ್ರೆಸ್‌ನ ಹಿರಿಯರಾದ ಮನಮೋಹನ್ ಸಿಂಗ್, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ದಾರಿ, ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಶಶಿ ತರೂರ್ ಇನ್ನೂ ಹಲವು ಮುಖಂಡರು ಭಾಗವಹಿಸಿದ್ದರು.

   ಕೇಜ್ರಿವಾಲ್‌ಗಿಲ್ಲ ಕರೆ

   ಕೇಜ್ರಿವಾಲ್‌ಗಿಲ್ಲ ಕರೆ

   ಎಎಪಿಯ ಅರವಿಂದ್ ಕೇಜ್ರಿವಾಲ್, ತೆಲಂಗಾಣದ ಸಿಎಂ ಕೆ.ಚಂದ್ರಶೇಖರ ರಾವ್, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಇಫ್ತಾರ್‌ ಕೂಟದಲ್ಲಿ ಭಾಗವಹಿಸಿದ್ದರು.

   English summary
   AICC president Rahul Gandhi organized Iftar party today in Delhi. Former president pranab mukherjee, BJP leader Rajanath Singh, Mamata banerjee many other party leaders attended the program.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X