ಮರಾಠರ ಮೇಲೆ ಲಾಠಿ ಚಾರ್ಚ್: ಕ್ಷಮೆಯಾಚಿಸಿದ ಫಡ್ನವೀಸ್- ಪವಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ
ಪುಣೆ, ಸೆಪ್ಟೆಂಬರ್ 04: ಜಲ್ನಾ ಜಿಲ್ಲೆಯಲ್ಲಿ ಮರಾಠ ಮೀಸಲಾತಿ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದಕ್ಕಾಗಿ ರಾಜ್ಯ ಸರ್ಕಾರ ವಿಷಾದಿಸುತ್ತದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ಹೇಳಿದರು.
'ಪೊಲೀಸರಿಂದ ಲಾಠಿಚಾರ್ಜ್ ಸರಿಯಲ್ಲ. ನಾನು ಸರ್ಕಾರದ ಪರವಾಗಿ ಕ್ಷಮೆಯಾಚಿಸುತ್ತಿದ್ದೇನೆ. ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಸಿಎಂ ಶಿಂಧೆ ಹೇಳಿದ್ದಾರೆ' ಎಂದು ಫಡ್ನವೀಸ್ ಸುದ್ದಿಗಾರರಿಗೆ ತಿಳಿಸಿದರು.

ಕಳೆದ ವಾರ ಜಲ್ನಾ ಪೊಲೀಸರಿಗೆ ಲಾಠಿ ಚಾರ್ಜ್ ಆದೇಶವನ್ನು ಯಾವುದೇ ಉನ್ನತ ಅಧಿಕಾರಿಗಳು ನೀಡಿಲ್ಲ ಎಂದು ಅವರು ತಿಳಿಸಿದರು.
'ಇಂತಹ ನಿರ್ಧಾರಗಳನ್ನು (ಪೊಲೀಸ್ ಬಲದ ಬಳಕೆ) ಸ್ಥಳೀಯ ಮಟ್ಟದಲ್ಲಿ ತೆಗೆದುಕೊಳ್ಳಲಾಗುತ್ತದೆ' ಎಂದು ಗೃಹ ಸಚಿವರೂ ಆಗಿರುವ ಫಡ್ನವೀಸ್ ಹೇಳಿದರು.
'ಕೆಲವು ದಿನಗಳ ಹಿಂದೆ ಜಲ್ನಾ ಜಿಲ್ಲೆಯಲ್ಲಿ ಪೊಲೀಸರು ಬಲಪ್ರಯೋಗ ಮಾಡಿದ್ದಕ್ಕಾಗಿ ಮಹಾರಾಷ್ಟ್ರ ಸರ್ಕಾರ ವಿಷಾದ ವ್ಯಕ್ತಪಡಿಸುತ್ತದೆ' ಎಂದು ತಿಳಿಸಿದರು.
ಈ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಏಕನಾಥ ಶಿಂಧೆ, 'ಇಂದು ನಾವು ಮರಾಠ ಮೀಸಲಾತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ್ದೇವೆ. ನಾನು ಈಗಾಗಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿದ್ದೇನೆ. ನಾವು ಈ ಸಮಸ್ಯೆಯನ್ನು ವ್ಯವಸ್ಥಿತವಾಗಿ ಪರಿಹರಿಸುತ್ತೇವೆ. ಮರಾಠಾ ಮೀಸಲಾತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಗಂಭೀರ ಕಾರ್ಯನಿರ್ವಹಿಸುತ್ತಿದೆ' ಎಂದು ಹೇಳಿದರು.

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ
ಈ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನಾ ( ಯುಬಿಟಿ ) ನಾಯಕ ಸಂಜಯ್ ರಾವುತ್, 'ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಕಚೇರಿಯಿಂದ ಮಾಡಿದ ಫೋನ್ ಕರೆಯಲ್ಲಿ ಲಾಠಿ ಚಾರ್ಜ್ ಆದೇಶವನ್ನು ನೀಡಲಾಗಿದೆ' ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಗೃಹ ಸಚಿವಾಲಯದಿಂದ ದೂರವಾಣಿ ಕರೆ ಮಾಡಿದ ನಂತರ ಜಲ್ನಾ ಜಿಲ್ಲೆಯಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಎನ್‌ಸಿಪಿ ಹಿರಿಯ ನಾಯಕ, ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ.
ಜಲ್ನಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿದವರು ಯಾರು, ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಲು ಆದೇಶಿಸಿದವರು ಯಾರು ಎಂದು ಕಂಡುಹಿಡಿಯಲು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಶುಕ್ರವಾರ ಜಲ್ನಾ ಜಿಲ್ಲೆಯ ಅಂತರವಾಲಿ ಸಾರಥಿ ಗ್ರಾಮದಲ್ಲಿ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ 40 ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. 15 ಕ್ಕೂ ಹೆಚ್ಚು ರಾಜ್ಯ ಸಾರಿಗೆ ಬಸ್ಸುಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ
ಅಜಿತ್ ಪವಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ
ಇದೇ ವೇಳೆ, ಮಹಾರಾಷ್ಟ್ರ ಸರ್ಕಾರದ ಭಾಗವಾಗಿರುವ ಎನ್‌ಸಿಪಿ ನಾಯಕ, ಉಪ ಮುಖ್ಯಮಂತ್ರಿ ಅಜಿತ್ ಪವಾರ್ ರಾಜೀನಾಮೆಗೆ ಮರಾಠ ಸಂಘಟನೆಗಳು ಒತ್ತಾಯಿಸಿವೆ.












Click it and Unblock the Notifications