ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ

|
Google Oneindia Kannada News

ನವದೆಹಲಿ, ಜುಲೈ 17; ಕೇಂದ್ರದ ಮಾಜಿ ಸಚಿವೆ, ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ. ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ಭಾನುವಾರ ದೆಹಲಿಯಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಿತು. ಸಭೆಯ ಬಳಿಕ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗರೇಟ್ ಆಳ್ವ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.

Biography: ಉಪ ರಾಷ್ಟ್ರಪತಿ ಕಣದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಬದುಕಿನ ಹಾದಿBiography: ಉಪ ರಾಷ್ಟ್ರಪತಿ ಕಣದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧಂಖರ್ ಬದುಕಿನ ಹಾದಿ

ಶನಿವಾರ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಗದೀಪ್ ಧನ್ಖರ್‌ ಹೆಸರು ಘೋಷಣೆ ಮಾಡಲಾಗಿತ್ತು. ವಿರೋಧ ಪಕ್ಷಗಳು ದೆಹಲಿಯಲ್ಲಿ ಭಾನುವಾರ ಸಭೆ ನಡೆಸಿ, ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿವೆ.

ಉಪ ರಾಷ್ಟ್ರಪತಿ ಚುನಾವಣೆಯ ಬಿಜೆಪಿ ಅಭ್ಯರ್ಥಿ ಆಗುತ್ತಾರಾ ಜಗದೀಪ್ ಧಂಖರ್? ಉಪ ರಾಷ್ಟ್ರಪತಿ ಚುನಾವಣೆಯ ಬಿಜೆಪಿ ಅಭ್ಯರ್ಥಿ ಆಗುತ್ತಾರಾ ಜಗದೀಪ್ ಧಂಖರ್?

Margaret Alva Opposition Party Candidate For Vice President Of India

ಕಾಂಗ್ರಸ್‌ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ ಕೇಂದ್ರದ ಸಚಿವರಾಗಿ ಕೆಲಸ ಮಾಡಿದ್ದಾರೆ. ರಾಜಸ್ಥಾನದ ರಾಜ್ಯಪಾಲರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ. ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿರುವ ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿವೆ.

Breaking: ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ಯಶ್ವಂತ್‌ ಸಿನ್ಹಾ ಬೆಂಬಲಕ್ಕೆ ನಿಂತ ಎಎಪಿBreaking: ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿ ಯಶ್ವಂತ್‌ ಸಿನ್ಹಾ ಬೆಂಬಲಕ್ಕೆ ನಿಂತ ಎಎಪಿ

ಉಪ ರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅವಧಿ ಆಗಸ್ಟ್ 10ರಂದು ಅಂತ್ಯಗೊಳ್ಳಲಿದೆ. ಅದಕ್ಕೂ ಮೊದಲು ಹೊಸ ಉಪ ರಾಷ್ಟ್ರಪತಿ ಆಯ್ಕೆಯಾಗಬೇಕಿದೆ. ಈ ಹಿನ್ನಲೆಯಲ್ಲಿ ಆಗಸ್ಟ್‌ 6ರಂದು ಚುನಾವಣೆ ನಡೆಯಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಜುಲೈ 19 ಕೊನೆಯ ದಿನವಾಗಿದೆ.

ಜಗದೀಪ್ ಧನ್ಖರ್‌; ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿರುವ ಜಗದೀಪ್ ಧನ್ಖರ್‌ ಎನ್‌ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ. ಇವರಿಗೆ ಮಾರ್ಗರೇಟ್ ಆಳ್ವ ಎದುರಾಳಿಯಾಗಿದ್ದಾರೆ.

ಅಧಿಸೂಚನೆ ಪ್ರಕಟ; ಉಪರಾಷ್ಟ್ರಪತಿ ಚುನಾವಣೆಯ ಅಧಿಸೂಚನೆಯನ್ನು ನಿಯಮ 1952ರ 4ನೇ ನಿಯಮದ, ಉಪನಿಯಮ [1]ರ ಅಡಿ ಹೊರಡಿಸಲಾಗಿದೆ.

ನಾಮಪತ್ರಗಳನ್ನು ಅಭ್ಯರ್ಥಿ ಅಥವಾ ಯಾವುದೇ ಸೂಚಕರು ಅಥವಾ ಎರಡನೇಯವರಾಗಿ ಸಹಿ ಮಾಡಿರುವವರು, ನವದೆಹಲಿಯ ಸಂಸತ್ ಭವನದ ನೆಲಮಹಡಿಯ ಕೊಠಡಿ ಸಂಖ್ಯೆ 18ರಲ್ಲಿ ಸಹಿ ಮಾಡಿದವರಿಗೆ ಅಥವಾ ಅನಿವಾರ್ಯವಾಗಿ ಗೈರು ಹಾಜರಾದಲ್ಲಿ ಸಹಾಯಕ ಚುನಾವಣಾಧಿಕಾರಿಗಳಿಗೆ, ಲೋಕಸಭೆಯ ಜಂಟಿ ಕಾರ್ಯದರ್ಶಿ ಪಿ.ಸಿ. ತ್ರಿಪಾಠಿ ಅಥವಾ ಸದರಿ ಕಚೇರಿಯ ರಾಜು ಶ್ರೀವಾಸ್ತವ, ಲೋಕಸಭಾ ಸಚಿವಾಲಯದ ನಿರ್ದೇಶಕರಿಗೆ ಸಲ್ಲಿಸಬಹುದಾಗಿದೆ.

ಪ್ರತಿಯೊಂದು ನಾಮಪತ್ರದಲ್ಲಿ ಅಭ್ಯರ್ಥಿಯು ಸಂಸತ್ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಮತದಾರನಾಗಿ ನೋಂದಾಯಿಸಲ್ಪಟ್ಟಿರುವ ಸಂಬಂಧ ದೃಢೀಕೃತ ಪ್ರತಿಯೊಂದಿಗೆ ಸಲ್ಲಿಸಬೇಕು. ಪ್ರತಿಯೊಬ್ಬ ಅಭ್ಯರ್ಥಿಯು ಕನಿಷ್ಠ 15 ಸಾವಿರ ರೂಪಾಯಿ ಮೊತ್ತವನ್ನು ಠೇವಣಿ ರೂಪದಲ್ಲಿ ಸಲ್ಲಿಸಬೇಕು.

ನಾಮಪತ್ರ ಸಲ್ಲಿಸುವಾಗ ಚುನಾವಣಾಧಿಕಾರಿಗಳಿಗೆ ಈ ಮೊತ್ತವನ್ನು ನಗದು ರೂಪದಲ್ಲಿ ಅಥವಾ ಇದಕ್ಕೂ ಮುನ್ನ ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಠೇವಣಿ ಮಾಡಿರಬೇಕು ಅಥವಾ ಸರ್ಕಾರಿ ಖಜಾನೆ ಮತ್ತು ಈ ಸಂದರ್ಭದಲ್ಲಿ ಸದರಿ ಮೊತ್ತವನ್ನು ಠೇವಣಿ ಮಾಡಲಾಗಿದೆ ಎಂದು ತೋರಿಸುವ ರಸೀದಿ ಸಲ್ಲಿಸಬೇಕು.

ಆಗಸ್ಟ್ 6 ರ ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಿಯಮಗಳ ಅಡಿಯಲ್ಲಿ ನಿಗದಿಪಡಿಸಿದ ಮತದಾನ ಕೇಂದ್ರದಲ್ಲಿ ಮತದಾನ ನಡೆಯಲಿದೆ.

English summary
Opposition party candidate for the post of vice president of India to be Margaret Alva said NCP chief Sharad Pawar after opposition party meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X