Breaking: ಜಮ್ಮು-ಕಾಶ್ಮೀರದ ಜಾಮಿಯಾ ಮಸೀದಿಯಲ್ಲಿ ಭಾರೀ ಬೆಂಕಿ
ಶ್ರೀನಗರ ನವೆಂಬರ್ 16: ಜಮ್ಮು ಮತ್ತು ಕಾಶ್ಮೀರದ ದ್ರಾಸ್‌ನಲ್ಲಿರುವ ಜಾಮಿಯಾ ಮಸೀದಿಯಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಭಾರತೀಯ ಸೇನೆ, ಪೊಲೀಸ್ ಮತ್ತು ಅಗ್ನಿಶಾಮಕ ಹಾಗೂ ತುರ್ತು ವಿಭಾಗದ ಸಹಾಯದಿಂದ ಬೆಂಕಿಯನ್ನು ನಂದಿಸಲಾಗಿದೆ.
ಜಾಮಿಯಾ ಮಸೀದಿಯ ಉಸ್ತುವಾರಿಯೊಬ್ಬರು ಘಟನೆಯ ಬಗ್ಗೆ ಮಾತನಾಡಿ, "ದ್ರಾಸ್‌ನ ಅತ್ಯಂತ ಹಳೆಯ ಮಸೀದಿಯೊಂದರಲ್ಲಿ ಬೆಂಕಿಯ ಘಟನೆಯ ಬಗ್ಗೆ ಕೇಳಿ ಬೇಸರವಾಯಿತು. ದ್ರಾಸ್ ಸೂಕ್ಷ್ಮ ಪ್ರದೇಶವಾಗಿದೆ. ಆದರೆ ದುರದೃಷ್ಟಕರ ಸಂಗತಿಯೆಂದರೆ ಒಂದೇ ಒಂದು ಅಗ್ನಿಶಾಮಕ ಸೇವೆ ಇಲ್ಲಿಲ್ಲ. ಹಿಂದೆಯೂ ಸಹ ಇಂತಹ ಘಟನೆಗಳು ನಡೆದಿವೆ. ಆದರೆ ಕೇಂದ್ರಾಡಳಿತ ಪ್ರದೇಶದ ಆಡಳಿತವು ಯಾವ ಕ್ರಮವೂ ಕೈಗೊಂಡಿಲ್ಲ'' ಎಂದಿದ್ದಾರೆ.

ಮೂಲಗಳ ಪ್ರಕಾರ ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ.
A massive fire completely damaged Jamia Masjid in Drass area of Kargil. The fire was later doused with the help of Army, Police and Fire and Emergency department, however, it caused massive damage to the Masjid. pic.twitter.com/898bUbYdik
— ANI (@ANI) November 16, 2022












Click it and Unblock the Notifications