Hyderabad: ಕೆಮಿಕಲ್ ಗೋದಾಮಿಗೆ ಬೆಂಕಿ, 6 ಸಾವು, ಘಟನೆ ಪೂರ್ಣ ವಿವರ

ಹೈದರಾಬಾದ್, ನವೆಂಬರ್ 13: ತೆಲಂಗಾಣದ ಹೈದರಾಬಾದ್‌ನ ನಾಂಪಲ್ಲಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿರುವ ರಾಸಾಯನಿಕ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನಾಂಪಲ್ಲಿಯಲ್ಲಿ ನೆಲ ಮಹಡಿಯಲ್ಲಿರುವ ಗೋಡೌನ್‌ನಲ್ಲಿ ಕಾರಿನ ರಿಪೇರಿ ಕೆಲಸ ನಡೆಯುತ್ತಿತ್ತು. ಗೋಡೌನ್‌ನಲ್ಲಿ ರಸಾಯನಿಕ ಇರಿಸಲಾಗಿತ್ತು. ಕಾರಿನ ಕೆಲಸದ ವೇಳೆ ಕೆಮಿಕಲ್ ಬ್ಯಾರೆಲ್‌ಗೆ ಕಿಡಿ ತಾಗಿ ಬೆಂಕಿ ಹೊತ್ತಿಕೊಂಡಿದೆ. ಆರು ಮಂದಿ ಸಾವಿಗೀಡಾಗಿದ್ದು, ಮೂವರಿಗೆ ಗಾಯಗಳಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Massive Fire Breaks Out in Chemical Godown in Hyderabad: 6 Days and 3 Injured, Know details

ನೋಡ ನೋಡುತ್ತಿದ್ದಂತೆ ಕೆಲವೇ ಕ್ಷಣಗಳಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿಕೊಂಡಿದೆ. ಗಾಯಗೊಂಡ ಮೂವರನ್ನು ಆಸ್ಪತ್ರೆ ರವಾನಿಸಲಾಗಿದೆ. ಅಗ್ನಿ ನಂದಿಸುವ ಕೆಲಸ ನಡೆಯುತ್ತಿದೆ ಎಂದು ಹೈದರಾಬಾದ್‌ನ ಕೇಂದ್ರ ವಲಯದ ಡಿಸಿಪಿ ವೆಂಕಟೇಶ್ವರ್ ರಾವ್ ಮಾಹಿತಿ ನೀಡಿದ್ದಾರೆ.

ಎಲೆಕ್ಟ್ರಾನಿಕ್ಸ್ ಅಂಗಡಿಗೆ ಬೆಂಕಿ

ಹೈದರಾಬಾದ್‌ನ ಶಾಲಿಬಂಡಾದಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಸೋಮವಾರ ಬೆಳ್ಳಂಬೆಳ್ಳಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಸದ್ಯ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 30 ಸದಸ್ಯರನ್ನು ಒಳಗೊಂಡ ಆರು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾದರು ಎಂದು ಎಎನ್‌ಐ ವರದಿ ಮಾಡಿದೆ.

ನಿರಂತರ ಮೂರು ಗಂಟೆಗಳ ಕಾರ್ಯಾಚರಣೆಯ ನಂತರ ನಾವು ಬೆಂಕಿಯ ಜ್ವಾಲೆ ತಣ್ಣಗಾಯಿತು. ಸೋಮವಾರ ಬೆಳಗ್ಗೆ ಮುಂಜಾನೆ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೈದರಾಬಾದ್‌ನ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.

Massive Fire Breaks Out in Chemical Godown in Hyderabad: 6 Days and 3 Injured, Know details

ಭಾನುವಾರ 2 ಸ್ಥಳಗಳಲ್ಲಿ ದುರಂತ

ಹಿಂದಿನ ಭಾನುವಾರ, ಒಡಿಶಾದ ಸಂಬಲ್‌ಪುರ ನಗರದ ಖೇತ್ರಜ್‌ಪುರ ಪ್ರದೇಶದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಗಮನಾರ್ಹ ಬೆಂಕಿ ಸಂಭವಿಸಿದೆ. ಗೋದಾಮಿನಲ್ಲಿ ಹಾಗೂ ವಸತಿ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ದುರಂತಗಳು ನಡೆದಿದೆ. ಅದೃಷ್ಟವಶಾತ್ ಯಾವ ಹಾನಿಯು ಆಗಿಲ್ಲ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+