Breaking: ಗುವಾಹಟಿಯಲ್ಲಿ ಸರಣಿ ಸಿಲಿಂಡರ್ ಸ್ಫೋಟ, ಮನೆಗಳಿಗೆ ಬೆಂಕಿ
ಗುವಾಹಟಿ, ಡಿಸೆಂಬರ್ 09: ಗುವಾಹಟಿಯ ಫಟಾಸಿಲ್ ಅಂಬಾರಿ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಇದುವರೆಗೆ ಯಾವುದೇ ಸಾವು-ನೋವಿನ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಲವಾರು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಈ ಪ್ರದೇಶದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ ಘಟನೆಗೆ ಸಂಬಂಧಿಸಿದ ದೃಶ್ಯದ ವಿಡಿಯೋದಲ್ಲಿ ಹಲವಾರು ಜನರು ಹೊತ್ತಿ ಉರಿಯುತ್ತಿರುವ ಮನೆಗಳನ್ನು ವೀಕ್ಷಿಸುತ್ತಿರುವುದು ಕಂಡು ಬಂದಿದೆ.

ಸಂತ್ರಸ್ತರಿಗೆ ಆಹಾರ ಮತ್ತು ವಸತಿ ಸೇರಿದಂತೆ ಪರಿಹಾರ ಕ್ರಮಗಳನ್ನು ಒದಗಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಘಟನಾ ಸ್ಥಳಕ್ಕೆ ಕನಿಷ್ಠ ಇಬ್ಬರು ಸಚಿವರು ಕೂಡ ಧಾವಿಸಿ ಪರಿಶೀಲನೆ ನಡೆಸಿದರು. ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಗುವಾಹಟಿ ಪೊಲೀಸ್ ಕಮಿಷನರ್ ಕೂಡ ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲಿಸಿದ್ದಾರೆ.












Click it and Unblock the Notifications