"ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಸ್ಟರ್ ಪ್ಲ್ಯಾನ್"
ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಯ ಶುರುವಾಗುವ ಲಕ್ಷಣಗಳು ಕಾಣಿಸುತ್ತಿವೆ. ಬಿಜೆಪಿ ಮುಖಂಡ ಕೆ. ಅಣ್ಣಾಮಲೈ ಅವರು ತಮಿಳುನಾಡಿನಲ್ಲಿ ಖಾತೆ ತೆರೆಯಲಿದ್ದಾರೆ. ಅಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ ಎನ್ನುವ ಲೆಕ್ಕಾಚಾರಗಳೆಲ್ಲವೂ ತಲೆಕೆಳಗಾಗಿವೆ. ಲೋಕಸಭೆ ಚುನಾವಣೆಯಲ್ಲಿ ಒಂದೇ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ದಾಖಲಿಸಿರಲಿಲ್ಲ. ಇನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆ ಅಣ್ಣಾಮಲೈ ಅವರನ್ನು ಕೆಳಗೆ ಇಳಿಸಲಾಗಿದೆ. ಈ ರೀತಿ ಇರುವಾಗಲೇ ಅವರು, ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಬಗ್ಗೆ ಸ್ಫೋಟಕ ಹೇಳಿಕೆಯನ್ನು ಕೊಟ್ಟಿದ್ದಾರೆ. ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರುವ ಬಗ್ಗೆ ಮಾಡಿಕೊಂಡಿರುವ ಮಾಸ್ಟರ್ ಪ್ಲ್ಯಾನ್ ಏನು ಎನ್ನುವ ವಿವರ ಇಲ್ಲಿದೆ.
ತಮಿಳುನಾಡಿನಲ್ಲಿ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ನಡುವೆ ನೇರ ಹಣಾಹಣಿ ಇದೆ. ಒಂದು ಕಾಲದಲ್ಲಿ ತಮಿಳುನಾಡು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆದರೆ ಹಿಂದಿ ಹೇರಿಕೆಯಿಂದಾಗಿ ಹಾಗೂ ಬೇರೆ ಬೇರೆ ಕಾರಣಗಳಿಂದಾಗಿ ಕ್ರಮೇಣ ತಮಿಳುನಾಡಿನಲ್ಲಿ ಪ್ರದೇಶಿಕ ಪಕ್ಷಗಳ ಉದಯವಾಯಿತು. ಅಲ್ಲಿಂದಾಚೆಗೆ ತಮಿಳುನಾಡಿನಲ್ಲಿ ರಾಷ್ಟ್ರೀಯ ಪಕ್ಷಗಳು ಅಧಿಕಾರಕ್ಕೆ ಬಂದಿದ್ದೇ ಇಲ್ಲ. ಆದರೆ, ಇದೀಗ ಬಿಜೆಪಿಯನ್ನು ತಮಿಳುನಾಡಿನಲ್ಲಿ ಅಧಿಕಾರಕ್ಕೆ ತರುವುದಕ್ಕೆ ಏನೆಲ್ಲಾ ಮಾಸ್ಟರ್ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ ಎನ್ನುವ ವಿಷಯವನ್ನು ಅಣ್ಣಾಮಲೈ ಅವರು ವಿವರಿಸಿದ್ದಾರೆ. ತಮಿಳುನಾಡಿನಲ್ಲಿ ಮುಂದಿನ ವರ್ಷ ಅಂದರೆ 2026ರಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ಇದೆ. ಹೀಗಾಗಿ, ಅಣ್ಣಾಮಲೈ ಅವರ ಹೇಳಿಕೆಯು ಮಹತ್ವ ಪಡೆದುಕೊಂಡಿದೆ.

ತಮಿಳುನಾಡಿನಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಈಗಾಗಲೇ ಇಲ್ಲಿ ಹೊಸ ಪಕ್ಷಗಳ ಉದಯವಾಗಿದೆ. ಸಿನಿಮಾ ನಟರು ರಾಜಕೀಯಕ್ಕೆ ಬರುತ್ತಿದ್ದಾರೆ. ಇದೀಗ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬರುವ ಬಗ್ಗೆ ಅಣ್ಣಾಮಲೈ ಮಾತನಾಡಿದ್ದು. ನಾವು ಅಧಿಕಾರಕ್ಕೆ ಬಂದೇ ಬರಲಿದ್ದೇವೆ. ನಮ್ಮದು ಲಾಂಗ್ ಟರ್ಮ್ ಪ್ಲ್ಯಾನ್ ಇದೆ ಅಂತ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಪಕ್ಕಾ ಬರಲಿದೆ. ಈಗಾಗಲೇ ಮಹಾರಾಷ್ಟ್ರ, ಬಿಹಾರ ಹಾಗೂ ಒಡಿಶಾ ರಾಜ್ಯಗಳನ್ನು ನೋಡಿದ್ದೇವೆ. ಇಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸುತ್ತಿದೆ. ಬಿಜೆಪಿ ಅಲ್ಲಿನ ಸ್ಥಳೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರಕ್ಕೆ ಬಂದಿದೆ. ಅದೇ ರೀತಿ ತಮಿಳುನಾಡಿನಲ್ಲೂ ಪ್ರಯೋಗ ನಡೆದಿದೆ ಎಂದು ಅಣ್ಣಾಮಲೈ ಅವರು ಹೇಳಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದೊಂದಿಗೆ ಹೊಂದಾಣಿಕೆ ಯಾಕೆ ಆಗುತ್ತಿದೆ ಅಂತ ವಿವರಿಸಿದ್ದಾರೆ.
ತಮಿಳುನಾಡಿನಲ್ಲಿ 20 - 30 ವರ್ಷಗಳಾದರೂ ನಾವು ಅಧಿಕಾರಕ್ಕೆ ಬರುತ್ತೇವೆ. ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎನ್ನುವುದು ದೀರ್ಘ ಅವಧಿಯ ಲೆಕ್ಕಾಚಾರವಾಗಿದೆ ಅಂತ ಅವರು ಹೇಳಿದ್ದಾರೆ. ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ಬರೋಬ್ಬರಿ 24 ವರ್ಷಗಳೇ ಆಗಿವೆ. ಪ್ರಮಾಣಿಕ ಪ್ರಯತ್ನ ಮಾಡಿ ಅಲ್ಲಿ ಅಧಿಕಾರಕ್ಕೆ ಬಂದೆವು. ಅದೇ ರೀತಿ ತಮಿಳುನಾಡಿನಲ್ಲೂ ನಾವು ಅಧಿಕಾರಕ್ಕೆ ಬರುವುದಕ್ಕೆ ಪ್ರಮಾಣಿಕ ಪ್ರಯತ್ನ ನಡೆಸಲಿದ್ದೇವೆ ಎಂದು ಅವರು ಹೇಳಿದರು.
ಬಿಜೆಪಿ ಹೈಕಮಾಂಡ್ ರಾಷ್ಟ್ರಮಟ್ಟದಲ್ಲಿ ಪರಿಸ್ಥಿತಿ ಹೇಗೆ ಎನ್ನುವುದನ್ನು ಗಮನಿಸುತ್ತದೆ. ಇನ್ನು ತಮಿಳುನಾಡಿನಲ್ಲಿ ಡಿಎಂಕೆ ಗಲೀಜು ರಾಜಕೀಯವನ್ನು ಮಾಡುತ್ತಿದೆ. ಮಕ್ಕಳು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. 13 ಜನ ಸಚಿವರ ಮೇಲೆ ಭ್ರಷ್ಟಾಚಾರ ಪ್ರಕರಣಗಳು ಇವೆ ಎಂದರು.












Click it and Unblock the Notifications