Akash Anand: ಬಿಎಸ್ಪಿಯಲ್ಲಿ ಸಂಚಲನ ಮೂಡಿಸಿದ ಮಾಯಾವತಿ ನಡೆ
ಲಕ್ನೋ, ಮಾರ್ಚ್ 02: ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಮುಂಬರುವ ಚುನಾವಣೆಗಳು, ಪಕ್ಷ ಸಂಘಟನೆಯ ಹಿನ್ನಲೆಯಲ್ಲಿ ಅವರು ಹಲವಾರು ಘೋಷಣೆಗಳನ್ನು ಮಾಡಿದ್ದಾರೆ. ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಿದ್ದು, ಮಾಯಾವತಿ ನಿರ್ಧಾರ ಪಕ್ಷದಲ್ಲಿ ಸಂಚಲನವನ್ನು ಉಂಟು ಮಾಡಿದೆ.
ಭಾನುವಾರ ಲಕ್ನೋದಲ್ಲಿ ಬಹುಜನ ಸಮಾಜವಾದಿ ಪಕ್ಷದ ಅಖಿಲ ಭಾರತ ಮಟ್ಟದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪಕ್ಷದ ವರಿಷ್ಠೆ ಮಾಯಾವತಿ ಹಲವು ತೀರ್ಮಾನವನ್ನು ಪ್ರಕಟಿಸಿದ್ದಾರೆ. "ತಾವು ಬದುಕಿರುವ ತನಕ ಪಕ್ಷದಲ್ಲಿ ಯಾರೂ ಸಹ ತಮ್ಮ ಉತ್ತರಾಧಿಕಾರಿಯಾಗುವುದಿಲ್ಲ" ಎಂದು ಘೋಷಣೆ ಮಾಡಿದ್ದಾರೆ.

ಬಿಎಸ್‌ಪಿ ಪಕ್ಷಕ್ಕೆ ಮಯಾವತಿ ಬಳಿಕ ಸೋದರಳಿಯ ಆಕಾಶ್ ಆನಂದ್ ಉತ್ತರಾಧಿಕಾರಿ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ ಭಾನುವಾರ ಮಾಯಾವತಿ ಸೋದರಳಿಯ ಆಕಾಶ್ ಆನಂದ್ ಅವರನ್ನು ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕ ಸೇರಿದಂತೆ ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಿದ್ದಾರೆ.
ಪ್ರಭಾವವನ್ನು ಬೀರುತ್ತಿದ್ದಾರೆ: ಫೆಬ್ರವರಿಯಲ್ಲಿ ಗುಂಪುಗಾರಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡ ಆರೋಪದ ಮೇಲೆ ಆಕಾಶ್ ಆನಂದ್ ಅವರ ಮಾವ ಅಶೋಕ್ ಸಿದ್ದಾರ್ಥ್ ಅವರನ್ನು ಬಿಎಸ್‌ಪಿ ಪಕ್ಷದಿಂದ ಮಾಯಾವತಿ ಉಚ್ಛಾಟಿಸಿದ್ದರು. ಈಗ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಲಾಗಿದೆ.
"ಆಕಾಶ್ ಆನಂದ್ ರಾಜಕೀಯ ಜೀವನದ ಮೇಲೆ ಅಶೋಕ್ ಸಿದ್ದಾರ್ಥ್ ಪ್ರಭಾವ ಬೀರಿದ್ದಾರೆ. ಆಕಾಶ್ ಆನಂದ್ ಪತ್ನಿ ಪ್ರಜ್ಞಾ ಮೂಲಕ ಅಶೋಕ್ ಸಿದ್ದಾರ್ಥ್ ಪ್ರಭಾವನ್ನು ಉಂಟು ಮಾಡುತ್ತಿದ್ದಾರೆ" ಎಂದು ಮಾಯಾವತಿ ಹೇಳಿದ್ದಾರೆ.
ಭಾನುವಾರದ ಸಭೆಯಲ್ಲಿ ಮಾಯಾವತಿ ರಾಜ್ಯಸಭಾ ಸದಸ್ಯ ರಾಮ್‌ಜಿ ಗೌತಮ್ ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕರಾಗಿ ನೇಮಕ ಮಾಡಿದ್ದಾರೆ. 2019ರರ ತನಕ ರಾಮ್‌ಜಿ ಗೌತಮ್ ಈ ಹುದ್ದೆಯನ್ನು ನಿಭಾಯಿಸಿದ್ದರು. ಮಾಯಾವತಿ ಕಿರಿಯ ಸಹೋದರ ಆನಂದ್ ಕುಮಾರ್ ಜೊತೆ ಗೌತಮ್ ಈ ಹುದ್ದೆಯನ್ನು ಹಂಚಿಕೊಂಡಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಮಾಯಾವತಿ ಆಕಾಶ್ ಆನಂದ್ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ವಜಾಗೊಳಿಸಿದ್ದರು. ಜುಲೈ ತಿಂಗಳಿನಲ್ಲಿ ಮತ್ತೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿತ್ತು. ಈಗ 2ನೇ ಬಾರಿಗೆ ಆಕಾಶ್ ಆನಂದ್ ವಜಾಗೊಂಡಿದ್ದಾರೆ.
ಇತ್ತೀಚೆಗೆ ನಡೆದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಗಳು ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲಿಯೂ ಠೇವಣಿ ಕಳೆದುಕೊಂಡಿದ್ದರು. ಇದರಿಂದಾಗಿ ಪಕ್ಷದ ಸಂಘಟನೆಯಲ್ಲಿ ಮಾಯಾವತಿ ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದಾರೆ.
ಉತ್ತರ ಪ್ರದೇಶದ ಬಿಎಸ್‌ಪಿ ಘಟಕ ಪಕ್ಷದ ಚುಟುವಟಿಕೆಗಳ ಕುರಿತು ಮಾಯಾವತಿ, ಆಕಾಶ್ ಆನಂದ್ ಇಬ್ಬರಿಗೂ ವರದಿಯನ್ನು ಮಾಡಿಕೊಳ್ಳುತ್ತಿತ್ತು. ಆಕಾಶ್ ಆನಂದ್ ರಾಜ್ಯ ಮಟ್ಟದ ಕಾರ್ಯಾಚರಣೆಯನ್ನು ಮುನ್ನಡೆಸಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. 2027ರಲ್ಲಿ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಎಸ್‌ಪಿ ಪಕ್ಷದ ಚುನಾವಣಾ ತಯಾರಿಯನ್ನು ಪ್ರಾರಂಭಿಸಿದೆ.
ಮಯಾವತಿ ಆಕಾಶ್ ಆನಂದ್ ತಮ್ಮ ಉತ್ತರಾಧಿಕಾರಿ ಎಂದು ಘೋಷಣೆ ಮಾಡಿದ್ದರು. ಆದ್ದರಿಂದ ರಾಜ್ಯದಲ್ಲಿ ಪಕ್ಷ ಸಂಘಟನೆಯನ್ನು ಅವರೇ ನೋಡಿಕೊಳ್ಳಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಈಗ ಪಕ್ಷದ ಎಲ್ಲಾ ಹುದ್ದೆಗಳಿಂದ ಅವರನ್ನು ವಜಾಗೊಳಿಸಲಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications