ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ಗೆ ಬಿಗ್ ಶಾಕ್ ಕೊಟ್ಟ ಮಾಯಾವತಿಯ ಸ್ವತಂತ್ರ ನಿರ್ಧಾರ

|
Google Oneindia Kannada News

Recommended Video

ಮಧ್ಯಪ್ರದೇಶದಲ್ಲಿ ಮಾಯಾವತಿ ನಿರ್ಧಾರದಿಂದ ಕಾಂಗ್ರೆಸ್ ಗೆ ಆಘಾತ | Oneindia Kannada

ನವದೆಹಲಿ, ಸೆಪ್ಟೆಂಬರ್ 21: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಕಳೆದ ಐದು ತಿಂಗಳಿನಿಂದ ಬಿಎಸ್ ಪಿ ಜತೆ ಮೈತ್ರಿ ಮಾತುಕತೆ ನಡೆಸುತ್ತಿದೆ. ಆದರೆ ಇಲ್ಲಿ ಈ ವರ್ಷಾಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 22 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ತನ್ನ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಮಾಯಾವತಿ ಕಾಂಗ್ರೆಸ್ ಗೆ ಮತ್ತೊಂದು ಶಾಕ್ ನೀಡಿದ್ದಾರೆ.

ಉತ್ತರ ಪ್ರದೇಶ ಲೋಕಸಭೆ ಸೀಟು ಹಂಚಿಕೆ ಪ್ರಕ್ರಿಯೆಗೆ ತಗಾದೆ ತೆಗೆಇರುವ ಬಿಎಸ್ ಪಿ, ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಹಾಗೂ ಮಹಾಮೈತ್ರಿಗೆ ಅಚ್ಚರಿ ನೀಡಿದೆ. ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ನಿಂದ ಹೊರಬಂದು ಹೊಸ ಪಕ್ಷ ಸ್ಥಾಪಿಸಿರುವ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿಗೆ ಬಿಎಸ್ ಪಿ ನಿರ್ಧರಿಸಿದೆ.

ಛತ್ತೀಸ್ ಗಢದಲ್ಲಿ ಜನತಾ ಕಾಂಗ್ರೆಸ್- ಬಿಎಸ್ ಪಿ ದೋಸ್ತಿ: ಮಾಯಾವತಿ ಛತ್ತೀಸ್ ಗಢದಲ್ಲಿ ಜನತಾ ಕಾಂಗ್ರೆಸ್- ಬಿಎಸ್ ಪಿ ದೋಸ್ತಿ: ಮಾಯಾವತಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೋಗಿ ನೇತೃತ್ವದ ಜನತಾ ಕಾಂಗ್ರೆಸ್ 55 ಹಾಗೂ ಬಿಎಸ್ ಪಿ 35 ಸೀಟುಗಳಲ್ಲಿ ಸ್ಪರ್ಧಿಸಲಿವೆ. ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಹೇಳಿದೆ. ಈ ಪೈಕಿ ಕೆಲವು ಸ್ಥಾನಗಳು ಕಾಂಗ್ರೆಸ್ ನ ರಾಜ್ಯಾಧ್ಯಕ್ಷ ಜ್ಯೋತಿರಾಧಿತ್ಯ ಸಿಂಧ್ಯಾ ಪ್ರಾಬಲ್ಯ ಹೊಂದಿರುವ ಮೊರೆನ ಮತ್ತು ಶಿವಪುರಿಯಲ್ಲಿದೆ. ಮಾಯಾವತಿ ಈ ರೀತಿ ಮಾಡಿದ್ದಾರೆ ಎಂದು ತಿಳಿದಿಲ್ಲ, ಈಗಲೂ ನಾವು ಬಿಎಸ್ ಪಿ ಜೊತೆ ಮಾತುಕತೆ ಮುಂದುವರೆಸಿದ್ದೇವೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

Mayawati unpredictable move shocks Congress in Madhya Pradesh

ವಿಶ್ಲೇಷಣೆ : ಮಧ್ಯಪ್ರದೇಶದಲ್ಲಿ ಮಣ್ಣುಮುಕ್ಕುವವರು ಯಾರು? ಕಾಂಗ್ರೆಸ್, ಬಿಜೆಪಿ?ವಿಶ್ಲೇಷಣೆ : ಮಧ್ಯಪ್ರದೇಶದಲ್ಲಿ ಮಣ್ಣುಮುಕ್ಕುವವರು ಯಾರು? ಕಾಂಗ್ರೆಸ್, ಬಿಜೆಪಿ?

ಕಳೆದ ಕೆಲ ತಿಂಗಳಿನಿಂದ ಕಾಂಗ್ರೆಸ್ , ಬಿಎಸ್ ಪಿ ನಡುವೆ ಚುನಾವಣಾ ಪೂರ್ವ ಮೈತ್ರಿಯ ಮಾತುಕತೆ ನಡೆದಿತ್ತು. ಆದರೆ ಕಡಿಮೆ ಸೀಟು ನೀಡಲು ಕಾಂಗ್ರೆಸ್ ನಿರ್ಧರಿಸಿದ ಕಾರಣ ಬಿಎಸ್ ಪಿ ಈ ನಿರ್ಧಾರ ಮಾಡಿದೆ. ಇದರ ಮಧ್ಯೆ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ಗೆ ಮಾಯಾವತಿ ಕೈಕೊಡುವ ಸೂಚನೆ ನೀಡಿದ್ದು, ಏಕಪಕ್ಷೀಯವಾಗಿ 22 ಸೀಟುಗಳಿಗೆ ಅಭ್ಯರ್ಥಿ ಘೋಷಿಸಿದ್ದಾರೆ.

English summary
BSP supremo Mayawathi has declared 22 candidates for parliament constituencies in Madhya Pradesh without consulting Congress party. The decision likely to be adverse on the Congress and regional parties alliance in upcoming parliament election
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X