ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಘಾಲಯ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ಗೆ ರಾಜಿನಾಮೆ

|
Google Oneindia Kannada News

ಶಿಲ್ಲಾಂಗ್, ಸೆಪ್ಟೆಂಬರ್ 14: ಐದು ಬಾರಿ ಮೇಘಾಲಯದ ಮುಖ್ಯಮಂತ್ರಿ ಆಗಿದ್ದ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಡಿ.ಡಿ.ಲಫಾಂಗ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಪಕ್ಷದಿಂದ ಹೊರಬಂದಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್‌ನ ಪರಿಚಿತ ನಾಯಕ ಎಂದೇ ಕರೆಸಿಕೊಂಡಿದ್ದ ಲಫಾಂಗ್ ಅವರು ಕಾಂಗ್ರೆಸ್ ಪಕ್ಷದ ನಾಯಕತ್ವದಿಂದ ಬೇಸತ್ತು ಈ ನಿರ್ಣಯ ಕೈಗೊಂಡಿದ್ದಾರೆ ಎನ್ನಲಾಗಿದೆ.

'ಪಿಎಂ ಮೋದಿ ಸೂಚಿಸದೆ ಮಲ್ಯನನ್ನು ಬಿಟ್ಟು ಕಳಿಸುತ್ತಿತ್ತೇ ಸಿಬಿಐ?''ಪಿಎಂ ಮೋದಿ ಸೂಚಿಸದೆ ಮಲ್ಯನನ್ನು ಬಿಟ್ಟು ಕಳಿಸುತ್ತಿತ್ತೇ ಸಿಬಿಐ?'

ತಾವು ಭಾರವಾದ ಹೃದಯದಿಂದ ಈ ನಿರ್ಣಯ ಕೈಗೊಂಡಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ಅದರಲ್ಲೂ ಮೇಘಾಲಯದಲ್ಲಿ ಅವರು ಕಾಂಗ್ರೆಸ್‌ನ ಹಿರಿಯ ಮತ್ತು ಪ್ರಮುಖ ಮುಖಂಡರಾಗಿದ್ದರು. ಅವರಿಗೆ ಇತ್ತೀಚೆಗೆ ಆರೋಗ್ಯ ಸಮಸ್ಯೆ ಉಂಟಾಗಿತ್ತು.

 Meghalaya former CM resigns to Congress

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಲಫಾಂಗ್ ಕಳುಹಿಸಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿರುವಾಗ ಲಫಾಂಗ್ ಅವರ ಈ ನಡೆ ಮೇಘಾಲಯದಲ್ಲಿ ಕಾಂಗ್ರೆಸ್‌ಗೆ ಭಾರಿ ಹಿನ್ನಡೆ ಉಂಟು ಮಾಡಲಿದೆ.

ಲಫಾಂಗ್ ಅವರು ಐದು ಬಾರಿ ಮೇಘಾಲಯದ ಮುಖ್ಯಮಂತ್ರಿ ಆಗಿದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಗೆಲ್ಲಿಸಲು ವಿಫಲರಾಗಿದ್ದರು. ಕಳೆದ ಡಿಸೆಂಬರ್‌ ನಲ್ಲಿ ಲಫಾಂಗ್ ಅವರನ್ನು ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿತ್ತು.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಲಫಾಂಗ್ ಅವರು, ಹಿರಿಯರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನವಿಲ್ಲ. ಪಕ್ಷಕ್ಕೆ ಹಿರಿಯರ ಸೇವೆ ಅವಶ್ಯಕತೆ ಇಲ್ಲ ಹಾಗಾಗಿ ಪಕ್ಷದಿಂದ ಹೊರಬರುತ್ತಿದ್ದೇನೆ ಎಂದು ಹೇಳಿದ್ದಾರೆ.

English summary
Meghalaya former CM DD Lapang resigns to congress party. He was 5 times CM of Meghalaya. He said to media that seniors service no longer useful for congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X