• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೇಘಾಲಯ:ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯಲ್ಲಿ 2 ರೂ. ಕಡಿತ

|

ಶಿಲ್ಲಾಂಗ್,ಫೆಬ್ರವರಿ 08: ದೇಶಾದ್ಯಂತ ದಿನದಿಂದ ದಿನಕ್ಕೆ ತೈಲಬೆಲೆಯಲ್ಲಿ ಏರಿಕೆಯಾಗುತ್ತಿದೆ.ಇಂತಹ ಸಂದರ್ಭದಲ್ಲಿ ಮೇಘಾಲಯ ಸರ್ಕಾರವು ಪೆಟ್ರೋಲ್, ಡೀಸೆಲ್ ತೆರಿಗೆ ಮೇಲೆ 2 ರೂ. ಕಡಿತ ಮಾಡಿದೆ.

ಇತ್ತೀಚೆಗಷ್ಟೇ ತೈಲೋತ್ಪನ್ನಗಳ ದರಗಳನ್ನು ಇಳಿಸಬೇಕು ಎಂದು ಮೇಘಾಲಯ ರಾಜಧಾನಿ ಶಿಲ್ಲಾಂಗ್ ನಲ್ಲಿ ಸ್ಥಳೀಯ ಟ್ಯಾಕ್ಸಿ ನಿರ್ವಾಹಕರು ಪ್ರತಿಭಟನೆ ನಡೆಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ ಮೇಘಾಲಯ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಫೆ.7ರಂದು ದೇಶದ ವಿವಿಧೆಡೆ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ಇನ್ನು ಮೇಘಾಲಯದ ರಾಜಧಾನಿ ಶಿಲ್ಲಾಂಗ್ ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 90 ರೂ. ಗೆ ಏರಿಕೆಯಾಗಿತ್ತು.ಈ ಬಗ್ಗೆ ಸ್ವತಃ ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ಅವರು ಮಾಹಿತಿ ನೀಡಿದ್ದು, ರಾಜ್ಯದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಸೋಮವಾರ ಮಧ್ಯರಾತ್ರಿಯಿಂದ 2 ರೂ.ಗೆ ಇಳಿಸಲು ಮೇಘಾಲಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

'ಮೇಘಾಲಯದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಎರಡರ ದರವನ್ನೂ ಪ್ರತಿ ಲೀಟರ್ ಗೆ ತಲಾ 2 ರೂಪಾಯಿ ಕಡಿತಗೊಳಿಸಲಾಗುವುದು.

ಇದಕ್ಕಾಗಿ ರಾಜ್ಯ ಸರ್ಕಾರ ತೆರಿಗೆಯಲ್ಲಿ 2 ರೂಕಡಿತ ಮಾಡಿದೆ. ನೂತನ ದರಗಳು ಇದು 2021 ಫೆಬ್ರವರಿ 8 ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಸಂಗ್ಮಾ ಮಾಡಿದ್ದಾರೆ.

English summary
The Meghalaya government has decided to reduce the tax on petrol and diesel in the state by Rs 2 per litre from Monday midnight, Chief Minister Conrad K Sangma.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X