ಹಿಜಾಬ್ ತೀರ್ಪಿನ ಬಗ್ಗೆ ಪಿಡಿಪಿ ಅಧ್ಯಕ್ಷೆ ಮುಫ್ತಿ ಪ್ರತಿಕ್ರಿಯೆ ಏನು?
ನವದೆಹಲಿ, ಮಾರ್ಚ್ 15: ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಉಡುಪಿಯ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಎದ್ದಿದ್ದ ಪ್ರಮುಖ ನಾಲ್ಕು ಪ್ರಶ್ನೆಗೆ ನ್ಯಾಯಾಲಯ ತನ್ನ ಆದೇಶದಲ್ಲಿ ಇಂದು ಪ್ರತಿಕ್ರಿಯೆ ನೀಡಿದೆ.
ಕರ್ನಾಟಕದಲ್ಲಿ ಹಿಜಾಬ್ ಸರಣಿಯ ಬಹುನಿರೀಕ್ಷಿತ ತೀರ್ಪಿನ ನಂತರ, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸುವ ಪರವಾಗಿ ತೀರ್ಪು ನೀಡಲು ಹೈಕೋರ್ಟ್ ನಿರ್ಧರಿಸಿತು, ಕೋರ್ಟ್ ಆದೇಶದ ನಂತರ ಪ್ರಮುಖ ರಾಜಕೀಯ ನಾಯಕರಿಂದ ಪ್ರತಿಕ್ರಿಯೆಗಳು ಬಂದಿವೆ. ಮಂಗಳವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ತ್ರಿ ಸದಸ್ಯ ಪೀಠ ತೀರ್ಪು ಪ್ರಕಟಿಸಿತು. ಈ ಮೂಲಕ ಕರ್ನಾಟಕದಲ್ಲಿ ನಡೆಯುತ್ತಿದ್ದ ಹಿಜಾಬ್ ಚರ್ಚೆಗೆ ತೆರೆ ಬಿದ್ದಿದೆ. 12 ದಿನಗಳ ಕಾಲ ನಿರಂತರವಾಗಿ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಫೆಬ್ರವರಿ 25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ತೀರ್ಪು ಪ್ರಕಟಿಸಿದೆ.
Very disappointed by the verdict of the Karnataka High Court. Regardless of what you may think about the hijab it’s not about an item of clothing, it’s about the right of a woman to choose how she wants to dress. That the court didn’t uphold this basic right is a travesty.
— Omar Abdullah (@OmarAbdullah) March 15, 2022
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ಮಂಗಳವಾರ ಕರ್ನಾಟಕ ಹೈಕೋರ್ಟ್‌ನ ಕಾಲೇಜುಗಳು ಮತ್ತು ಶಾಲೆಗಳಲ್ಲಿ ಹಿಜಾಬ್‌ಗಳ ಮೇಲಿನ ನಿಷೇಧವನ್ನು ಎತ್ತಿಹಿಡಿಯುವ ನಿರ್ಧಾರವನ್ನು ಟೀಕಿಸಿದ್ದಾರೆ, ಪೀಠದ ನಿರ್ಧಾರವು "ತೀವ್ರ ನಿರಾಶಾದಾಯಕವಾಗಿದೆ" ಎಂದು ಹೇಳಿದ್ದಾರೆ.

ಪಿಡಿಪಿ ಅಧ್ಯಕ್ಷರು ಟ್ವೀಟ್ ಮಾಡಿ, "ಹಿಜಾಬ್ ನಿಷೇಧವನ್ನು ಎತ್ತಿಹಿಡಿಯುವ ಕರ್ನಾಟಕ ಹೈಕೋರ್ಟ್‌ನ ನಿರ್ಧಾರವು ತೀವ್ರ ನಿರಾಶಾದಾಯಕವಾಗಿದೆ. ಒಂದೆಡೆ, ನಾವು ಮಹಿಳೆಯರಿಗೆ ಅಧಿಕಾರ ನೀಡುವ ಬಗ್ಗೆ ಮಾತನಾಡುತ್ತೇವೆ. ಆದರೆ ನಾವು ಅವರಿಗೆ ಸರಳ ಆಯ್ಕೆಯ ಹಕ್ಕನ್ನು ನಿರಾಕರಿಸುತ್ತಿದ್ದೇವೆ. ಇದು ಕೇವಲ ಧರ್ಮದ ಬಗ್ಗೆ ಅಲ್ಲ ಆದರೆ ಆಯ್ಕೆ ಮಾಡುವ ಸ್ವಾತಂತ್ರ್ಯ,'' ಎಂದಿದ್ದಾರೆ.
Karnataka HC’s decision to uphold the Hijab ban is deeply disappointing. On one hand we talk about empowering women yet we are denying them the right to a simple choice. Its isn’t just about religion but the freedom to choose.
— Mehbooba Mufti (@MehboobaMufti) March 15, 2022
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರ ಗುಂಪು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಈ ರೀತಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿದ್ದಾರೆ.
ಮುಫ್ತಿಯವರ ಹೇಳಿಕೆಯ ಕೆಲವು ನಿಮಿಷಗಳ ನಂತರ, ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ ಅವರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿ, ಇದು "ಅಪಹಾಸ್ಯ" ಎಂದು ಹೇಳಿದರು, ಅವರು ಉಡುಗೆ ಹೇಗೆ ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದರ ಕುರಿತು ನ್ಯಾಯಾಲಯವು ಮಹಿಳೆಯರ ಹಕ್ಕನ್ನು ಎತ್ತಿಹಿಡಿಯಲಿಲ್ಲ. ಇಲ್ಲಿ ಪ್ರಶ್ನೆ ಉಡುಪು ಧರಿಸುವುದರ ಬಗ್ಗೆ ಅಲ್ಲ, ಆಯ್ಕೆಯ ಹಕ್ಕನ್ನು ನಿರಾಕರಿಸುವುದಾಗಿದೆ, ಇದಕ್ಕೆ ಕೋರ್ಟ್ ಗಮನ ನೀಡದಿರುವುದು ಹಾಸ್ಯಾಸ್ಪದ ಎಂದಿದ್ದಾರೆ.
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಆದರೆ ಸಂವಿಧಾನಬದ್ಧವಾಗಿ ಕಾನೂನು ಹೋರಾಟ ಮಾಡಲಾಗುವುದು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಫಿ ಸಅದಿ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications