ಕಣಿವೆ ರಾಜ್ಯ ಕಾಶ್ಮೀರಕ್ಕೆ ಮೊದಲ ಮಹಿಳಾ ಮುಖ್ಯಮಂತ್ರಿ

Posted By:
Subscribe to Oneindia Kannada

ಶ್ರೀನಗರ, ಏಪ್ರಿಲ್ 04 : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಸೋಮವಾರ ರಾಜ್ಯಪಾಲ ಎನ್.ಎನ್.ವೋಹ್ರಾ ಅವರು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಉಪ ಮುಖ್ಯಮಂತ್ರಿ ಬಿಜೆಪಿಯ ನಿರ್ಮಲ್ ಸಿಂಗ್ ಸೇರಿದಂತೆ 25 ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಜಿತೇಂದ್ರ ಸಿಂಗ್ ಸೇರಿದಂತೆ ಹಲವು ಗಣ್ಯರು ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾದರು. [ಮುಫ್ತಿ ಮೊಹಮದ್ ಸಯೀದ್ ವಿಧಿವಶ]

mehbooba mufti

ಮೊದಲು ಕಾಶ್ಮೀರದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿತ್ತು. ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ (79) ಅವರು 2016ರ ಜನವರಿ 7ರಂದು ವಿಧಿವಶರಾದ ನಂತರ, ಕಾಶ್ಮೀರದ ರಾಜಕೀಯ ಚಿತ್ರಣ ಬದಲಾಗಿತ್ತು. ಬಿಜೆಪಿ ಮತ್ತು ಪಿಡಿಪಿ ಮೈತ್ರಿಕೂಟದ ಸರ್ಕಾರ ಮುಂದುವರೆಯುವ ಬಗ್ಗೆ ಗೊಂದಲ ಉಂಟಾಗಿತ್ತು.

ಮುಖ್ಯಮಂತ್ರಿಯಾದ ಬಳಿಕ ಮೆಹಬೂಬಾ ಮುಫ್ತಿ ಅವರಿಗೆ ಪಕ್ಷದ ಒಳಗಿನಿಂದಲೇ ಸವಾಲು ಎದುರಾಗಿದೆ. ಹಿರಿಯ ಪಿಡಿಪಿ ನಾಯಕ ಮತ್ತು ಶಾಸಕ ತಾರಿಕ್‌ ಕರ್ರಾ ಅವರು ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದ್ದಾರೆ. ಹೊಸ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿರುವ ಕೆಲವು ಸಚಿವರ ಆಯ್ಕೆಯ ಬಗ್ಗೆಯೂ ತಾರಿಕ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

Read in English: Mehbooba sworn-in as J&K CM
English summary
Peoples Democratic Party (PDP) leader Mehbooba Mufti was sworn-in as the first chief minister of Jammu and Kashmir on Monday, April 4, 2016. Governor N.N.Vohra administered the oath taking ceremony.
Please Wait while comments are loading...