ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್-ಪಿಡಿಪಿ ಮೈತ್ರಿ ವದಂತಿ: ಮುಫ್ತಿ ಏನಂತಾರೆ?

|
Google Oneindia Kannada News

ಶ್ರೀನಗರ, ಜುಲೈ 02: ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಮಾತು ಸುಳ್ಳು ಎಂದು ಪಿಡಿಪಿ ಮುಖ್ಯಸ್ಥೆ, ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್-ಪಿಡಿಪಿ ಮೈತ್ರಿ ಸರ್ಕಾರ?ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್-ಪಿಡಿಪಿ ಮೈತ್ರಿ ಸರ್ಕಾರ?

'ಜಮ್ಮು-ಕಾಶ್ಮೀರದಲ್ಲಿ ಪಿಡಿಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲಿವೆ ಎಂಬ ವದಂತಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದುನ್ನು ನೋಡಿ ಅಚ್ಚರಿಯಾಗಿದೆ. ಅಷ್ಟೇ ಅಲ್ಲ, ಈ ಕುರಿತು ನಾನು ಮತ್ತು ಸೋನಿಯಾಗಾಂಧಿ ನಡುವೆ ಸಭೆ ಸಹ ನಡೆದಿದೆ ಎಂದೂ ಹೇಳಲಾಗಿದೆ. ಇದು ಸಂಪೂರ್ಣ ಸುಳ್ಳು. ಫೇಕ್ ನ್ಯೂಸಿಗೆ ಇದು ಅತ್ಯಂತ ತಾಜಾ ಉದಾಹರಣೆ' ಎಂದು ಮುಫ್ತಿ ಟ್ವೀಟ್ ಮಾಡಿದ್ದಾರೆ.

ಸದ್ಯಕ್ಕೆ ರಾಜ್ಯಪಾಲರ ಆಳ್ವಿಕೆಯಲ್ಲಿರುವ ಜಮ್ಮು-ಕಾಶ್ಮೀರದಲ್ಲಿ ಪಿಡಿಪಿಯ ಕೈ ಹಿಡಿದು ಕಾಂಗ್ರೆಸ್ ಸರ್ಕಾರ ರಚಿಸಲು ಅನುವು ಮಾಡಿಕೊಡುತ್ತದೆ ಎಂಬ ವದಂತಿ ಎರಡು ದಿನಗಳಿಂದ ಹಬ್ಬಿದೆ. 'ಈಗಲೇ ಆಗಲಿ, ಭವಿಷ್ಯದಲ್ಲೇ ಆಗಲಿ ಪಿಡಿಪಿ(ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷ) ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಮೇಯವೇ ಇಲ್ಲ' ಕಾಂಗ್ರೆಸ್ ಸ್ಪಷ್ಟಪಡಿಸಿದ್ದರೂ ನಿನ್ನೆ(ಜುಲೈ 02) ದೆಹಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿವಾಸದಲ್ಲಿ ಸೋನಿಯಾ ಗಾಂಧಿ ಸೇರಿದಂತೆ ವರಿಷ್ಠರು ಭೇಟಿ ಮಾಡಿ ಸಭೆ ನಡೆಸಿದ್ದು, ಪಿಡಿಪಿ-ಕಾಂಗ್ರೆಸ್ ಮೈತ್ರಿಯ ಬಗ್ಗೆ ಚರ್ಚಿಸುವುದಕ್ಕೆ ಎಂದು ಊಹಿಸಲಾಗಿತ್ತು.

Mehbooba rubbishes reports of PDP-Cong alliance

ಒಟ್ಟು 87 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಪಿಡಿಪಿ 28, ಬಿಜೆಪಿ 25, ನ್ಯಾಶ್ನಲ್ ಕಾನ್ಪರೆನ್ಸ್ 15, ಕಾಂಗ್ರೆಸ್ 12 ಮತ್ತು 7 ಸ್ಥಾನಗಳನ್ನು ಇತರರು ಗೆದ್ದಿದ್ದರು. ಪಿಡಿಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ಬಿಜೆಪಿ, ಇತ್ತೀಚೆಗೆ ತನ್ನ ಬೆಂಬಲ ವಾಪಸ್ ಪಡೆದಿದ್ದರಿಂದ ಈ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಹೇರಲಾಗಿದೆ.

English summary
Former Jammu and Kashmir Chief Minister Mehbooba Mufti on Monday rubbished rumors of PDP-Congress alliance in Jammu and Kashmir. Mufti took to Twitter to clear the air about the possibility of an alliance between the Congress and the PDP in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X