ಮೇಕೆದಾಟುವಿಗೆ ವಿಜಯ್ ಜೊತೆ ಮಾತನಾಡುತ್ತೇನೆಂದ ಡಿಕೆಶಿ, ಏನೇ ಆದ್ರೂ ಸಮ್ಮತಿ ಇಲ್ಲವೆಂದ ತಮಿಳುನಾಡು
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ವಿರುದ್ಧ ತಮಿಳುನಾಡು ಸರ್ಕಾರ ಪ್ರತ್ಯೇಕ ನಿರ್ಣಯವೊಂದನ್ನು ಅಂಗೀಕರಿಸಿದ್ದು, ಯಾವುದೇ ಕಾರಣಕ್ಕೂ ಈ ಯೋಜನೆಗೆ ಸಮ್ಮತಿಸುವದಿಲ್ಲವೆಂದು ಸ್ಪಷ್ಟವಾಗಿ ಹೇಳಿದೆ. ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಪ್ರಸ್ತಾವಕ್ಕೆ, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಈ ನಿರ್ಣಯವನ್ನು ಮಂಡಿಸಿದ್ದು, ವಿಷಯದ ಮೇಲಿನ ಚರ್ಚೆಗೆ ಸರ್ವಾನುಮತದ ಬೆಂಬಲ ವ್ಯಕ್ತವಾಗಿದೆ.
ಪ್ರತ್ಯೇಕ ನ್ಯಾಯಮಂಡಳಿ ರಚನೆಗೆ ಉದಯನಿಧಿ ಸ್ಟಾಲಿನ್ ಆಗ್ರಹ
ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್, ಮೇಕೆದಾಟು ಅಣೆಕಟ್ಟು ವಿವಾದವನ್ನು ಪರಿಹರಿಸಲು ಪ್ರತ್ಯೇಕ ನ್ಯಾಯಮಂಡಳಿ (ಟ್ರಿಬ್ಯುನಲ್) ರಚನೆಗಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಮನವಿಗೆ ಉತ್ತಿರಿಸಿದ ಮುಖ್ಯಮಂತ್ರಿ ವಿಜಯ್ ಅವರು, "ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ನ್ಯಾಯಮಂಡಳಿ ರಚಿಸುವ ಸಾಧ್ಯತೆ ಕುರಿತು ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚಿಸಿದ್ದೇನೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಆದ್ದರಿಂದ, ವಿಪಕ್ಷ ನಾಯಕರು ನೀಡಿರುವ ಈ ಸಲಹೆಯನ್ನು ನಿರ್ಣಯದಲ್ಲಿ ಸೇರಿಸುವಂತೆ ವಿನಂತಿಸುತ್ತೇನೆ,' ಎಂದರು.
ಮುಖ್ಯಮಂತ್ರಿಗಳ ಈ ಘೋಷಣೆಯ ನಂತರ, ವಿಧಾನಸಭೆಯು ಆ ಪ್ರಸ್ತಾಪಿತ ತಿದ್ದುಪಡಿಯನ್ನು ನಿರ್ಣಯದಲ್ಲಿ ಸೇರಿಸಿತು. ಬಳಿಕ ಆ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಮೇಕೆದಾಟುವಿಗಾಗಿ ವಿಜಯ್ ಜೊತೆ ಮತಾನಾಡುತ್ತೇನೆಂದಿದ್ದ ಡಿಕೆಶಿ
ತಮಿಳುನಾಡು ಸರ್ಕಾರ ಹೃದಯಕ್ಕೆ ಹತ್ತಿರವಾದ ಮೇಕೆದಾಟು ಯೋಜನೆ ತಡೆಯಲು ಕಾನೂನು ಅವಕಾಶ ಹುಡುಕುತ್ತಿದೆ. ಮೇಕೆದಾಟು ಕೇವಲ ನನ್ನ ಹೃದಯಕ್ಕೆ ಮಾತ್ರ ಹತಿರವಾಗಿದ್ದಲ್ಲ. ಈ ಯೋಜನೆ ಕರ್ನಾಟಕ ರಾಜ್ಯಕ್ಕಿಂತ ತಮಿಳುನಾಡಿಗೆ ಹೆಚ್ಚು ಸಹಕಾರಿಯಾಗಲಿದೆ. ತಮಿಳುನಾಡು ಪಾಲಿನ 177 ಟಿಎಂಸಿ ನೀರನ್ನು ಬಿಡಲು ಸುಪ್ರೀಂ ಕೋರ್ಟ್ ಆದೇಶದಿಂದೆ ಕರ್ನಾಟಕ ಸಿದ್ಧ. ಆದರೆ, ಈ ಯೋಜನೆ ತೀರ್ಮಾನವನ್ನು ಕೇಂದ್ರ ಜಲ ಆಯೋಗ ಮಾಡಬೇಕು ಎಂದು ಕೋರ್ಟ್ ತಿಳಿಸಿದೆ. ಮೇಕೆದಾಟು ಯೋಜನೆಯಿಂದ ಒಂದೇ ಒಂದೂ ಹನಿ ನೀರನ್ನೂ ನೀರಾವರಿಗೆ ಬಳಸುವುದಿಲ್ಲ. ಬದಲಿಗೆ ಬೆಂಗಳೂರಿಗರ ಕುಡಿಯುವ ನೀರಿಗಾಗಿ ಮಾತ್ರ ಬಳಸಲಾಗುತ್ತದೆ, ಎಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೂನ್ 18ರಂದು ಹೇಳಿದ್ದರು.
ತಮಿಳುನಾಡು ಜೊತೆ ಚರ್ಚೆ ಮಾಡುತ್ತೀರಾ ಎಂದು ಪತ್ರಕರ್ತರು ಕೇಳಿದಾಗ, ಯಾವಾಗ ಬೇಕಾದರೂ ಅವರ ಜೊತೆ ಮಾತನಾಡಲು ಸಿದ್ಧನಿದ್ದೇನೆ, ತಮಿಳುನಾಡು, ಕರ್ನಾಟಕದವರು ಕಾವೇರಿ ನೀರು ಕುಡಿಯಬೇಕು. ತಮಿಳುನಾಡಿನಿಂದ ಇಲ್ಲಿಗೆ ಬಂದು ವೃತ್ತಿ ಮಾಡುತ್ತಿರುವ ಅನೇಕರಿದ್ದಾರೆ. ಇಲ್ಲಿಂದ ಹೋಗಿ ಅಲ್ಲಿ ಕೆಲಸ ಮಾಡುತ್ತಿರುವವರೂ ಇದ್ದಾರೆ. ನಾವು ಅವರನ್ನು ಪ್ರತ್ಯೇಕಿಸುವುದಿಲ್ಲ. ಸಮತೋಲಿತ ಜಲಾನಯನ ನಿರ್ಮಾಣದಿಂದ ಕಷ್ಟ ಕಾಲದಲ್ಲಿ ತಮಿಳುನಾಡಿನ ಪಾಲಿನ ನೀರನ್ನು ಹರಿಸಲು ನೆರವಾಗುತ್ತದೆ. ಅತಿ ಕಡಿಮೆ ವೆಚ್ಚದಲ್ಲಿ ಮೇಕೆದಾಟು ಯೋಜನೆ ಆಗಲಿದೆ, ಎಂದೂ ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದ್ದರು.
ಈ ಸಮತೋಲಿತ ಜಲಾನಯದಿಂದ ತಮಿಳುನಾಡಿನ ರೈತರ ಹಿತವನ್ನೂ ಕಾಪಾಡಬೇಕು. ಈ ಯೋಜನೆ ರದ್ದುಗೊಳಿಸಲು ಪ್ರಧಾನಿ ಮೋದಿ ಅವರಿಗೆ ವಿಜಯ್ ಈಗಾಗಲೇ ಮನವಿ ಮಾಡಿರುವ ಬಗ್ಗೆ ಡಿಕೆಶಿ ಪ್ರತಿಕ್ರಿಯೆ ನೀಡಿ, ತಮಿಳುನಾಡಿನವರು ಕಳೆದ 40 ವರ್ಷಗಳಿಂದಲೂ ರಾಜಕೀಯ ಅಜೆಂಡಾ ಇಟ್ಟುಕೊಂಡಿದ್ದಾರೆ. ಅವರ ರಾಜಕೀಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಈ ವಿಚಾರದ ಬಗ್ಗೆ ನ್ಯಾಯಾಲಯ ನಿರ್ದೇಶಿಸಿದೆ.
ಕಳೆದ ವರ್ಷ 400ಕ್ಕೂ ಹೆಚ್ಚು ಟಿಎಂಸಿ ಹೆಚ್ಚುವರಿ ನೀರು ಸಮುದ್ರ ಸೇರಿದೆ. ಅವರು ಕೆಳ ಹಂತದಲ್ಲಿ ಸಾಕಷ್ಟು ಅಣೆಕಟ್ಟು ನಿರ್ಮಾಣ ಮಾಡುತ್ತಿದ್ದು, ನಾವು ಯಾವುದಕ್ಕೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಅವರ ನೆಲದಲ್ಲಿ ಅವರು ನಿರ್ಮಿಸಿಕೊಳ್ಳುತ್ತಿದ್ದಾರೆ. ಇದೇ ವಿಚಾರ ಸುಪ್ರೀಂ ಕೋರ್ಟಿನಲ್ಲೂ ಚರ್ಚೆಯಾಗಿದೆ. ಈ ಯೋಜನೆಗೆ ನಾವು ಯಾವುದೇ ಆರ್ಥಿಕ ನೆರವಾಗಲಿ ಇತರೆ ವಿಚಾರವನ್ನು ಕೇಳುತ್ತಿಲ್ಲ. ಈ ಯೋಜನೆಯಿಂದ 400 ಮೆ.ವ್ಯಾಟ್ ವಿದ್ಯುತ್ ಉತ್ಪಾದಿಸಿದರೆ ಇಂಧನ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಅನುಕೂಲ ಮಾಡಿಕೊಡಲಿದೆ, ಎಂದು ಶಿವಕುಮಾರ್ ಹೇಳಿದ್ದರು.














Click it and Unblock the Notifications