ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಕಸಭೆಯಲ್ಲಿ ಮೇಕೆದಾಟು ಕ್ಯಾತೆ, ಎಐಎಡಿಎಂಕೆ ಸಂಸದರು ಅಮಾನತು

|
Google Oneindia Kannada News

ನವದೆಹಲಿ, ಜನವರಿ 02 : ಮೇಕೆದಾಟು ಯೋಜನೆಗೆ ತಮಿಳುನಾಡು ಮತ್ತೆ ವಿರೋಧ ವ್ಯಕ್ತಪಡಿಸಿದೆ. ಯೋಜನೆ ವಿಚಾರ ಮುಂದಿಟ್ಟುಕೊಂಡು ಲೋಕಸಭೆ ಕಲಾಪಕ್ಕೆ ಅಡ್ಡಿ ಪಡಿಸಿದ 26 ಎಐಎಡಿಎಂಕೆ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ.

ಕರ್ನಾಟಕದ ಮೇಕೆದಾಟು ಯೋಜನೆಯ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ಸಲ್ಲಿಸಲು ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿದೆ. ಈ ವಿಚಾರ ಮುಂದಿಟ್ಟುಕೊಂಡು ಎಐಎಡಿಎಂಕೆ ಸಂಸದರು ಲೋಕಸಭೆಯಲ್ಲಿ ಬುಧವಾರ ಗದ್ದಲ ಎಬ್ಬಿಸಿದರು.

ಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ

ನಿರಂತರವಾಗಿ ಕಲಾಪಕ್ಕೆ ಸಂಸದರು ಅಡ್ಡಿ ಪಡಿಸಿದ ಕಾರಣದಿಂದಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು 26 ಸಂಸದರನ್ನು ಅಮಾನತು ಮಾಡಿದರು. ಐದು ಕಲಾಪಗಳಲ್ಲಿ ಅವರು ಭಾಗವಹಿಸಿದಂತೆ ಅಮಾನತುಗೊಳಿಸಲಾಗಿದೆ.

ಮೇಕೆದಾಟು ಯೋಜನೆ : ಪಕ್ಷಾತೀತ ಹೋರಾಟಕ್ಕೆ ಸಂಸದರ ನಿರ್ಧಾರಮೇಕೆದಾಟು ಯೋಜನೆ : ಪಕ್ಷಾತೀತ ಹೋರಾಟಕ್ಕೆ ಸಂಸದರ ನಿರ್ಧಾರ

Mekedatu project : 26 AIADMK MPs suspended by Lok Sabha

ಲೋಕಸಭೆಯಲ್ಲಿ ಮಾತನಾಡಿದ ಎಂ.ತಂಬಿದುರೈ ಅವರು, 'ಈಗ ಚುನಾವಣೆ ಸಮೀಪಿಸುತ್ತಿದೆ. ಬಿಜೆಪಿ ಕರ್ನಾಟದಲ್ಲಿ ಹಲವು ಕ್ಷೇತ್ರಗಳನ್ನು ಗೆಲ್ಲುವ ಯೋಜನೆ ಹಾಕಿಕೊಂಡಿದೆ. ಆದ್ದರಿಂದ, ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿದೆ' ಎಂದು ಆರೋಪಿಸಿದರು.

ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?

ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯಸಭೆಯಲ್ಲಿಯೂ ಗದ್ದಲ ನಡೆಯಿತು. ಪ್ರತಿಭಟನೆ ನಡೆಸುತ್ತಿದ್ದಂತೆ ಎಐಎಡಿಎಂಕೆ ಮತ್ತು ಡಿಎಂಕೆ ಪಕ್ಷದ ಸಂಸದರನ್ನು ಸದನದಿಂದ ಹೊರಹೋಗುವಂತೆ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅವರು ಸೂಚಿಸಿದರು.

ಕೇಂದ್ರ ಜಲ ಆಯೋಗ ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಡಿಪಿಆರ್ ಸಲ್ಲಿಸಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ತಮಿಳುನಾಡು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಸುಪ್ರೀಂಕೋರ್ಟ್‌ಗೂ ಅರ್ಜಿ ಸಲ್ಲಿಸಿದೆ.

English summary
26 AIADMK MPs have been suspended by Lok Sabha speaker Sumitra Mahajan for continuously coming to the well of the house and obstructing house proceedings with the issue of Mekedatu project. Central Water Commission directed Karnataka Government to submit Detailed Project Report (DPR) of project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X