Mekedatu Project: ಮೇಕೆದಾಟು ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: ತಮಿಳುನಾಡಿಗೆ ಮುಖಭಂಗ, ಕಾಂಗ್ರೆಸ್‌ಗೆ ಬಿಸಿತುಪ್ಪ!
Mekedatu Project: ಹಲವು ವರ್ಷಗಳಿಂದ ಕಗ್ಗಂಟಾಗಿರುವ ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಕೊನೆಗೂ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಗ್ಗಂಟಾಗಿ ಉಳಿದಿರುವ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಹತ್ವದ ಅಪ್ಡೇಟ್ಸ್ ನೀಡಿದೆ. ಈ ಮೂಲಕ ಕನ್ನಡಿಗರಿಗೆ ಗುಡ್‌ನ್ಯೂಸ್ ಕೊಟ್ಟಿದೆ.
ಆದರೆ ಇದರ ನಿಜವಾದ ಸವಾಲು ಕಾಂಗ್ರೆಸ್ ಪಕ್ಷಕ್ಕೆ ಎದುರಾಗಲಿದೆ. ಅಲ್ಲದೆ ಕೇಂದ್ರ ಸರ್ಕಾರವು ಮೇಕೆದಾಟು ಯೋಜನೆಗೆ ಇದೀಗ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅಲ್ಲದೆ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನೆರೆಯ ರಾಜ್ಯದ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ ಎಂದೂ ಹೇಳಿದೆ. ಮೇಕೆದಾಟು ಯೋಜನೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೇಳಿದ್ದೇನು ಇದರಿಂದ ಕರ್ನಾಟಕ್ಕೆ ಹೇಗೆ ಲಾಭವಾಗಲಿದೆ ಎನ್ನುವ ಸಂಪೂರ್ಣ ವಿವರ ಈ ಲೇಖನದಲ್ಲಿದೆ.

ಮೇಕೆದಾಟು ಯೋಜನೆಗೆ ಬೇರೆ ರಾಜ್ಯಗಳ ಅನುಮತಿ ಪಡೆಯಬೇಕಾದ ಅವಶ್ಯಕತೆಯೇ ಇಲ್ಲ ಎಂದು ಕೇಂದ್ರ ಸರ್ಕಾರವು ಹೇಳಿದೆ. ಇಷ್ಟು ವರ್ಷಗಳ ಕಾಂಗ್ರೆಸ್ ಪಕ್ಷವು ಕೇಂದ್ರ ಹಾಗೂ ನೆರೆದತ್ತ ಈ ವಿಚಾರದಲ್ಲಿ ಬೊಟ್ಟು ಮಾಡುತ್ತಿತ್ತು. ಕೇಂದ್ರ ಸರ್ಕಾರ ಅನುಮತಿ ಬಾಕಿ ಇದೆ.
ಅಲ್ಲದೆ ತಮಿಳುನಾಡಿನಿಂದ ಕೇಂದ್ರ ಬಿಜೆಪಿ ನಾಯಕರು ಹಾಗೂ ಸಂಸದರು ಕೊಡಿಸಲಿ ಎಂದು ಕರ್ನಾಟಕ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರು. ಇದೀಗ ಈ ವಿಚಾರದಲ್ಲಿ ಕೊನೆಗೂ ಕೇಂದ್ರ ಸರ್ಕಾರವು ಮೌನ ಮುರಿದಿದೆ. ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಿದಂತೆ ತಮಿಳುನಾಡು ಸರ್ಕಾರವು ತಕರಾರು ತೆಗೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರವು ಉತ್ತರ ನೀಡಿದೆ.
ಕರ್ನಾಟಕವು ಕಾವೇರಿ ನದಿಗೆ ಮೇಕೆದಾಟುವಿನಲ್ಲಿ ಅಣೆಕಟ್ಟೆ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಯಾವುದೇ ರಾಜ್ಯದ ಅನುಮತಿ ಪಡೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದೆ. ಈ ಮೂಲಕ ಮೇಕೆದಾಟು ಯೋಜನೆ ನಿರ್ಮಾಣಕ್ಕೆ ತಮಿಳುನಾಡಿನಿಂದ ಯಾವುದೇ ಅನುಮತಿ ಪಡೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಮೂಲಕ ಕರ್ನಾಟಕ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗೆ ಭಾರೀ ಮುನ್ನಡೆ ಸಿಕ್ಕಂತಾಗಿದೆ. ಇದೇ ಸಂದರ್ಭದಲ್ಲಿ ಮೇಕೆದಾಟು ಯೋಜನೆಗೆ ಅಡ್ಡಿಪಡಿಸುತ್ತಿದ್ದ ತಮಿಳುನಾಡಿಗೆ ತೀವ್ರ ಮುಖಭಂಗವಾಗಿದೆ.
ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ತಮಿಳುನಾಡು ಸಿಎಂ ಜೋಸೆಫ್ ವಿಜಯ್
ಇನ್ನು ಮೇಕೆದಾಟು ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಅಲ್ಲದೆ ಮೇಕೆದಾಟು ಯೋಜನೆ ಜಾರಿಗೆ ಯಾವುದೇ ಕಾರಣಕ್ಕೂ ಕೇಂದ್ರ ಸರ್ಕಾರ ಅನುಮತಿ ನೀಡಬಾರದು ಎಂದು ತಮಿಳುನಾಡು ಸರ್ಕಾರ ಪಟ್ಟು ಹಿಡಿದಿತ್ತು. ಅಲ್ಲದೆ ಯೋಜನೆಯನ್ನು ನಿಲ್ಲಿಸುವಂತೆಯೂ ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದರು.
ಮೇಕೆದಾಟು ಯೋಜನೆ ಜಾರಿ ಯಾಕೆ ?
ಇನ್ನು ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆಯನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ನಿರ್ಮಿಸಲು ನಿರ್ಧಿರಿಸಿದೆ. ಬೆಂಗಳೂರಿಗೆ ಕುಡಿಯುವ ನೀರು, ವಿದ್ಯುತ್ ಯೋಜನೆಯ ಕಾರಣಕ್ಕೆ ಜಾರಿ ಮಾಡುವುದಕ್ಕೆ ಮುಂದಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ತಮಿಳುನಾಡಿಗೆ ಸಮೀಪದಲ್ಲೇ ಇದೆ. ಒಂದೊಮ್ಮೆ ಈ ಯೋಜನೆ ಜಾರಿಯಾದರೆ ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಲಿದೆ ಎನ್ನುವುದು ತಮಿಳುನಾಡಿನ ವಾದವಾಗಿದೆ.














Click it and Unblock the Notifications