ಮೇಕೆದಾಟು ಯೋಜನೆ; ಕೇಂದ್ರಕ್ಕೆ ತಮಿಳುನಾಡು ಪತ್ರ
ನವದೆಹಲಿ, ಅಕ್ಟೋಬರ್ 10 : ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಮತ್ತೆ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕ ಸರ್ಕಾರ ಯೋಜನೆ ಕುರಿತು ಸಲ್ಲಿಸಿರುವ ಡಿಪಿಆರ್ ತಿರಸ್ಕಾರ ಮಾಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್‌ಗೆ ಪತ್ರ ಬರೆದಿದ್ದಾರೆ. 10/7/2019ರಂದು ಸರ್ಕಾರ ಬರೆದಿರುವ ಪತ್ರದಲ್ಲಿ ಮನವಿಯನ್ನು ಪುರಸ್ಕರಿಸಬೇಕು. ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಉಲ್ಲೇಖಿಸಿದ್ದಾರೆ.
ಮೇಕೆದಾಟು ಯೋಜನೆ ಕಾವೇರಿ ನ್ಯಾಯಾಧೀಕರಣ ಮತ್ತು ಸುಪ್ರೀಂಕೋರ್ಟ್ 16/2/2018ರಂದು ನೀಡಿದ ತೀರ್ಪಿನ ಉಲ್ಲಂಘನೆಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಕೇರಳ ಸರ್ಕಾರ ಸಹ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಿದೆ. ಅರ್ಜಿಯ ವಿಚಾರಣೆ ಇನ್ನೂ ಬಾಕಿ ಇದೆ. ಆದ್ದರಿಂದ, ಕರ್ನಾಟಕ ಸರ್ಕಾರ ಸಲ್ಲಿಸಿರುವ ಡಿಪಿಆರ್ ತಿರಸ್ಕರಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಡಿಪಿಆರ್ ಸಲ್ಲಿಕೆ ಮಾಡಲಾಗಿದೆ
ಮೇಕೆದಾಟುವಿನಲ್ಲಿ ಕುಡಿಯುವ ನೀರಿಗಾಗಿ ಜಲಾಶಯ ನಿರ್ಮಾಣ ಮಾಡುವ ಕುರಿತು ವಿವರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಜಲ ಆಯೋಗ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿತ್ತು. ಸರ್ಕಾರ ಡಿಪಿಆರ್ ತಯಾರಿಸಿ ಸಲ್ಲಿಕೆ ಮಾಡಿದೆ.

ಯೋಜನೆಗೆ ಅನುಮತಿ ನೀಡಿಲ್ಲ
ಮೇಕೆದಾಟು ಯೋಜನೆಗೆ ಅನುಮತಿ ನೀಡಬಾರದು ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರ್ಜಿಯ ವಿಚಾರಣೆ ವೇಳೆ ಡಿಪಿಆರ್ ತಯಾರು ಮಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದೆ.

5 ಸಾವಿರ ಕೋಟಿ ವೆಚ್ಚದ ಯೋಜನೆ
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಿದ್ಧಪಡಿಸಿದೆ. ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 67.16 ಟಿಎಂಸಿ ಅಡಿ. ಯೋಜನೆ ಪೂರ್ಣಗೊಂಡರೆ 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು ಎಂದು ಸರ್ಕಾರ ಹೇಳಿದೆ. ಮೇಕೆದಾಟು ಯೋಜನೆಯ ಒಟ್ಟು ವೆಚ್ಚ 5912 ಕೋಟಿ ರೂ. ಗಳು.

ಕಾವೇರಿ ಕೊಳ್ಳದ ರಾಜ್ಯಗಳ ವಿರೋಧ
ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಬಗ್ಗೆ 2013ರಲ್ಲಿ ಪ್ರಸ್ತಾವನೆ ಸಿದ್ಧಪಡಿಸಿತ್ತು. ಯೋಜನೆಗೆ ತಮಿಳುನಾಡು, ಪುದುಚೇರಿ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಯೋಜನೆ ಜಾರಿಯಾದರೆ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣ ಕಡಿಮೆಯಾಗಲಿದೆ ಎಂಬುದು ತಮಿಳುನಾಡು ಸರ್ಕಾರದ ವಾದವಾಗಿದೆ.
-
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ












Click it and Unblock the Notifications