ಉಚಿತ ಸ್ಯಾನಿಟರಿ ಪ್ಯಾಡ್, ಶೌಚಾಲಯ ವ್ಯವಸ್ಥೆ ಕಡ್ಡಾಯ: ಋತುಚಕ್ರ ನೈರ್ಮಲ್ಯ ಮೂಲಭೂತ ಹಕ್ಕು ಎಂದ ಸುಪ್ರೀಂಕೋರ್ಟ್
ನವದೆಹಲಿ: ಮಹಿಳೆಯರು ಹಾಗೂ ಬಾಲಕಿಯರ ಆರೋಗ್ಯ ಮತ್ತು ಗೌರವಕ್ಕೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಐತಿಹಾಸಿಕ ತೀರ್ಪು ನೀಡಿದೆ. ಹೆಣ್ಣುಮಕ್ಕಳ ಋತುಚಕ್ರ ನೈರ್ಮಲ್ಯ ಮೂಲಭೂತ ಹಕ್ಕು ಹಾಗೂ ಗೌಪ್ಯತೆಯ ಹಕ್ಕಿನ ಅವಿಭಾಜ್ಯ ಅಂಗ (menstrual hygiene fundamental right) ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ಈ ಆದೇಶ ಹೊರಡಿಸಿದೆ.
ಮಹಿಳೆಯರು ಮತ್ತು ಬಾಲಕಿಯರು ಮಾಸಿಕ ಋತುಚಕ್ರದ ಅವಧಿಯಲ್ಲಿ ಅನುಭವಿಸುವ ಶಾರೀರಿಕ ಹಾಗೂ ಮಾನಸಿಕ ಸಂಕಷ್ಟಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಶಾಲಾ ಬಾಲಕಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ಗಳ ವ್ಯವಸ್ಥೆ ಹಾಗೂ ಸಮರ್ಪಕ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಬಳಿಕ ಸುಪ್ರೀಂ ಕೋರ್ಟ್ ಈ ತೀರ್ಪು ಪ್ರಕಟಿಸಿದೆ.

ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆ ಕುರಿತು ಶುಕ್ರವಾರ ಮಹತ್ವದ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ಋತುಚಕ್ರ ನೈರ್ಮಲ್ಯವು ಮೂಲಭೂತ ಹಕ್ಕು. ಸ್ಯಾನಿಟರಿ ಪ್ಯಾಡ್ ಉಚಿತವಾಗಿ ನೀಡುವುದು ಮತ್ತು ಪ್ರತ್ಯೇಕ ಶೌಚಾಲಯ ಕಲ್ಪಿಸುವುದು ಸರ್ಕಾರಗಳ ಕರ್ತವ್ಯ ಎಂದು ಹೇಳಿದೆ.
ಮಹಿಳೆಯರು ಹಾಗೂ ಬಾಲಕಿಯರ ಆರೋಗ್ಯ ಮತ್ತು ಗೌರವಕ್ಕೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಐತಿಹಾಸಿಕ ತೀರ್ಪು ನೀಡಿದೆ. ಹೆಣ್ಣುಮಕ್ಕಳ ಋತುಸ್ರಾವ ನೈರ್ಮಲ್ಯ ಮೂಲಭೂತ ಹಕ್ಕು ಹಾಗೂ ಗೌಪ್ಯತೆಯ ಹಕ್ಕಿನ ಅವಿಭಾಜ್ಯ ಅಂಗ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಹಾಗೂ ಆರ್.ಮಹಾದೇವನ್ ಅವರನ್ನೊಳಗೊಂಡ ಪೀಠ ಈ ಆದೇಶ ಹೊರಡಿಸಿದೆ.
ಮಹಿಳೆಯರು ಮತ್ತು ಬಾಲಕಿಯರು ಮಾಸಿಕ ಋತುಚಕ್ರದ ಅವಧಿಯಲ್ಲಿ ಅನುಭವಿಸುವ ಶಾರೀರಿಕ ಹಾಗೂ ಮಾನಸಿಕ ಸಂಕಷ್ಟಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ. ಶಾಲಾ ಬಾಲಕಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ಗಳ ವ್ಯವಸ್ಥೆ ಹಾಗೂ ಸಮರ್ಪಕ ಶೌಚಾಲಯ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಬಳಿಕ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ಪ್ರಕಟಿಸಿದೆ.
ಹೆಣ್ಣುಮಕ್ಕಳು ಮತ್ತು ಮಹಿಳೆಯರ ಘನತೆ, ಆರೋಗ್ಯ ಮತ್ತು ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಶಾಲೆಗಳಿಗೆ ಸರಣಿ ನಿರ್ದೇಶನಗಳನ್ನು ನೀಡಿದೆ. ಭಾರತದ ನಗರ ಮತ್ತು ಗ್ರಾಮೀಣ ಭಾಗದ ಖಾಸಗಿ ಅಥವಾ ಸರ್ಕಾರಿ ಎಂಬ ಭೇದವಿಲ್ಲದೆ ಎಲ್ಲಾ ಶಾಲೆಗಳು ಹೆಣ್ಣುಮಕ್ಕಳಿಗೆ ಅತ್ಯುನ್ನತ ಸುರಕ್ಷತೆ ಮತ್ತು ನೈರ್ಮಲ್ಯದ ಗುಣಮಟ್ಟ ಹೊಂದಿರುವ ಪರಿಸರ ಸ್ನೇಹಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಉಚಿತವಾಗಿ ನೀಡಬೇಕೆಂದು ಎಂದು ಕೋರ್ಟ್ ನಿರ್ದೇಶಿಸಿದೆ.
ಎಲ್ಲಾ ಶಾಲೆಗಳಲ್ಲಿ ಓದುತ್ತಿರುವ ಹೆಣ್ಣುಮಕ್ಕಳಿಗೆ ಪರಿಸರ ಸ್ನೇಹಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಉಚಿತವಾಗಿ ನೀಡುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಆದೇಶಿಸಿದೆ. ಪ್ರತಿಯೊಂದು ಶಾಲೆಯಲ್ಲಿಯೂ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ಇರಬೇಕು ಹಾಗೂ ಅಂಗವಿಕಲ ಸ್ನೇಹಿ ಶೌಚಾಲಯಗಳ ವ್ಯವಸ್ಥೆ ಇರಬೇಕು ಎಂದು ಕೋರ್ಟ್ ಹೇಳಿದೆ.
ಈ ನಿಯಮಗಳು ಸರ್ಕಾರಿ ಮತ್ತು ಖಾಸಗಿ ಶಾಲೆಗಳೆರಡಕ್ಕೂ ಕಡ್ಡಾಯ. ಪ್ರತ್ಯೇಕ ಶೌಚಾಲಯ ಅಥವಾ ಉಚಿತ ಪ್ಯಾಡ್‌ಗಳನ್ನು ನೀಡದ ಖಾಸಗಿ ಶಾಲೆಗಳ ಮಾನ್ಯತೆ ರದ್ದುಗೊಳಿಸುವ ಎಚ್ಚರಿಕೆಯನ್ನೂ ನೀಡಲಾಗಿದೆ. "ಋತುಚಕ್ರದ ನೈರ್ಮಲ್ಯವು ದಾನ ಅಥವಾ ನೀತಿಯ ವಿವೇಚನೆಯ ವಿಷಯವಲ್ಲ, ಬದಲಿಗೆ ಘನತೆಯಿಂದ ಬದುಕುವ ಸಾಂವಿಧಾನಿಕ ಹಕ್ಕು" ಎಂದು ಪೀಠವು ಸ್ಪಷ್ಟಪಡಿಸಿದೆ
ನ್ಯಾಯಮೂರ್ತಿಗಳು ಹೇಳಿದ್ದೇನು?: ತೀರ್ಪು ಪ್ರಕಟಿಸುವ ವೇಳೆ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಅವರು, "ಈ ತೀರ್ಪು ಕೇವಲ ಕಾನೂನು ವ್ಯವಸ್ಥೆಗೆ ಸಂಬಂಧಿಸಿದ್ದಲ್ಲ. ಇದು ಸಹಾಯ ಕೇಳಲು ಹಿಂಜರಿಯುವ ತರಗತಿಯ ಹೆಣ್ಣುಮಕ್ಕಳಿಗೆ ಮತ್ತು ಸಂಪನ್ಮೂಲಗಳ ಕೊರತೆಯಿಂದ ಸಹಾಯ ಮಾಡಲಾಗದ ಶಿಕ್ಷಕರಿಗೆ ಮೀಸಲಾಗಿದೆ. ಸಮಾಜದ ದುರ್ಬಲರನ್ನು ನಾವು ಹೇಗೆ ರಕ್ಷಿಸುತ್ತೇವೆ ಎಂಬುದರ ಮೇಲೆ ನಮ್ಮ ಪ್ರಗತಿ ಅಳೆಯಲಾಗುತ್ತದೆ," ಎಂದು ಹೇಳಿದರು.
ಗಂಭೀರವಾಗಿ ಪರಿಗಣಿಸಿದ್ದ ಕೋರ್ಟ್: ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾನಿಲಯದಲ್ಲಿ ಮೂವರು ಮಹಿಳಾ ಪೌರಕಾರ್ಮಿಕರು ತಾವು ಋತುಚಕ್ರದಲ್ಲಿದ್ದೇವೆ ಎಂದು ಸಾಬೀತುಪಡಿಸಲು ತಮ್ಮ ಸ್ಯಾನಿಟರಿ ಪ್ಯಾಡ್‌ಗಳ ಫೋಟೋಗಳನ್ನು ಕಳುಹಿಸುವಂತೆ ಒತ್ತಾಯಿಸಲಾದ ಘಟನೆಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿ ಈ ತನಿಖೆ ನಡೆಸಿತ್ತು. ಇಂತಹ "ಪೀರಿಯಡ್ ಶೇಮಿಂಗ್" ಘಟನೆಗಳು ಮಹಿಳೆಯರ ಘನತೆಗೆ ಧಕ್ಕೆ ತರುತ್ತವೆ ಎಂದು ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
Delhi | In a landmark decision, the Supreme Court has ruled that the right to menstrual health and hygiene is part of the Right to Life guaranteed by Article 21 and the Right to Free and Compulsory Education guaranteed by Article 21 A of the Constitution.
— ANI (@ANI) January 30, 2026
Thus, it has directed… pic.twitter.com/kjXHBXrkIC
ಮಹಿಳಾ ಕಾರ್ಮಿಕರಿಗೆ ಋತುಚಕ್ರದ ನೋವಿನ ಕಾರಣ ಭಾರೀ ಕೆಲಸ ಮಾಡಲು ಸಾಧ್ಯವಾಗದಿದ್ದರೆ, ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕೇ ಹೊರತು ಅವರನ್ನು ಅವಮಾನಿಸಬಾರದು. ಸರ್ಕಾರಗಳು ಈ ನಿಯಮಗಳನ್ನು ಜಾರಿಗೆ ತರಲು ವಿಫಲ ಆದ್ರೆ, ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications