Menstrual leave: ಕೇರಳದಲ್ಲಿ ವಿದ್ಯಾರ್ಥಿನಿಯರಿಗೆ ಬಿಗ್ ರಿಲೀಫ್!
ಕೇರಳ ಸರ್ಕಾರ ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಮಯದಲ್ಲಿ ಎರಡು ದಿನ ರಜೆ ಪಡೆಯಲು ಅವಕಾಶವನ್ನು ನೀಡಿದೆ. ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಎಲ್ಲಾ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಪಿರಿಯಡ್ಸ್ ಸಮಯದಲ್ಲಿ ಎರಡು ದಿನ ರಜೆಯನ್ನು ನೀಡುವುದಾಗಿ ಕೇರಳ ಸರ್ಕಾರ ಘೋಷಣೆ ಮಾಡಿದೆ.
ರಾಜ್ಯದ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಗುರುವಾರ (28 ನವೆಂಬರ್) ಈ ಆದೇಶ ಹೊರಡಿಸಿದ್ದಾರೆ. ಅವರು ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ, "ಮುಟ್ಟಿನ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮುಟ್ಟಿನ ರಜೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು" ಎಂದು ಹೇಳಿದ್ದಾರೆ. ಕೊಚ್ಚಿನ್ ವಿಶ್ವವಿದ್ಯಾನಿಲಯವು ಇತ್ತೀಚೆಗೆ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಅವರು, ಕೇರಳದಲ್ಲಿ ಶಿಕ್ಷಣ ಕೇಂದ್ರವೊಂದು ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿರುವುದು ಇದೇ ಮೊದಲು ಎಂದು ಹೇಳಿದ್ದಾರೆ.

CUSAT ಸ್ವಾಯತ್ತ ವಿಶ್ವವಿದ್ಯಾನಿಲಯವು ವಿವಿಧ ಸ್ಟ್ರೀಮ್‌ಗಳಲ್ಲಿ 8000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದೆ. ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಹುಡುಗಿಯರು ಇದ್ದಾರೆ. ಆದರೆ ಇತ್ತೀಚೆಗೆ ಕೇರಳದ ಪ್ರಸಿದ್ಧ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (CUSAT)ದ ಪ್ರತಿ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿನಿಯರ ಹಾಜರಾತಿ ಕೊರತೆಯಾಗುತ್ತಿತ್ತು.
ಹೀಗಾಗಿ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿ (ಐಟಿಐ) ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೇರಳ ರಾಜ್ಯ ಕೈಗಾರಿಕಾ ತರಬೇತಿ ಮಂಡಳಿಯು ರಾಜ್ಯ ಸರ್ಕಾರದ ಮುಂದೆ ಪ್ರಸ್ತಾಪಿಸಿತು. ಇದರ ನಂತರ ತರಬೇತಿ ನಿರ್ದೇಶಕರು ಈ ಕಳವಳಗಳನ್ನು ಅಧ್ಯಯನ ಮಾಡಲು ಸಮಿತಿಯನ್ನು ನೇಮಿಸಿದರು.
ತರಬೇತಿ ಕೈಪಿಡಿಯ ಕಲಂ 02.10.2(v) ಅನುಸಾರವಾಗಿ ಮಹಿಳಾ ವಿದ್ಯಾರ್ಥಿಗಳಿಗೆ ಋತುಚಕ್ರದ ದಿನಗಳಲ್ಲಿ ರಜೆ ಪಡೆಯಲು ಅವಕಾಶ ನೀಡಬೇಕೆಂದು ಸಮಿತಿಯು ಶಿಫಾರಸು ಮಾಡಿದೆ. ಈ ಬೇಡಿಕೆಯನ್ನು ಬೆಂಬಲಿಸಿ ಎಸ್‌ಎಫ್‌ಐ ಕೂಡ ಮನವಿ ಸಲ್ಲಿಸಿದೆ. ಹೀಗಾಗಿ ಕೇರಳ ಸರ್ಕಾರವು ಎಲ್ಲಾ ವಿಶ್ವವಿದ್ಯಾಲಯಗಳಿಗೆ ವಿದ್ಯಾರ್ಥಿನಿಯರಿಗೆ ಎರಡು ದಿನ ಋತುಚಕ್ರದ ರಜೆ ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.

ಕೇರಳದ ನೂರಕ್ಕೂ ಹೆಚ್ಚು ಐಟಿಐ ಕಾಲೇಜುಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಲಿದ್ದಾರೆ. ಜೊತೆಗೆ ರಜೆಯೊಂದಿಗೆ ತರಬೇತಿ ಸಮಯವನ್ನಯ ಸರಿದೂಗಿಸಲು, ಐಟಿಐ ಶಿಫ್ಟ್ಗಳನ್ನು ಮರುಹೊಂದಿಸಲಾಗುತ್ತದೆ. ಮೊದಲ ಪಾಳಿಯು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 3ರವರೆಗೆ ಮತ್ತು ಎರಡನೇ ಶಿಫ್ಟ್ ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ ಇರುತ್ತದೆ. ಹೆಚ್ಚುವರಿಯಾಗಿ, ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಐಟಿಐ ತರಬೇತಿ ಪಡೆಯುವವರಿಗೆ ಎಲ್ಲಾ ಶನಿವಾರಗಳನ್ನು ರಜೆ ಎಂದು ಘೋಷಿಸಿದೆ.












Click it and Unblock the Notifications