ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ರಾಜ್ಯಗಳಲ್ಲಿ ಇನ್ನೂ ಎರಡು ದಿನ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಮೇ 23: ಇನ್ನೆರಡು ದಿನ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುವ್ಯ ಮತ್ತು ಪೂರ್ವ ಭಾರತದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಸೋಮವಾರ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿರುವ ಹವಾಮಾನ ಇಲಾಖೆ, ರಾಯಲಸೀಮೆ ಮತ್ತು ನೆರೆಯ ಪ್ರದೇಶಗಳಲ್ಲಿ ಚಂಡಮಾರುತದ ಪರಿಚಲನೆ ಇರುವುದರಿಂದ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಕೇರಳ, ಮೇಘಾಲಯ ಮತ್ತು ತ್ರಿಪುರಾದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

Breaking; ಬೆಂಗಳೂರು ಮಳೆ, ಸಮಸ್ಯೆ ಎದುರಿಸಲು ಸಚಿವರ ತಂಡ ರಚನೆ Breaking; ಬೆಂಗಳೂರು ಮಳೆ, ಸಮಸ್ಯೆ ಎದುರಿಸಲು ಸಚಿವರ ತಂಡ ರಚನೆ

ಅರುಣಾಚಲ ಪ್ರದೇಶ, ಅಸ್ಸಾಂ-ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

India Meteorological Department Rain Alert For These States

ದಕ್ಷಿಣ ಭಾರತದ ಕೇರಳ, ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ತಮಿಳುನಾಡುವಿನಲ್ಲಿ ಮಿಂಚು, ಗಾಳಿ ಸಹಿತ ಚದುರಿದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಕಲಬುರಗಿ; ಭಾರೀ ಮಳೆ, ಬಾಳೆ ಬೆಳೆ ನಾಶಕಲಬುರಗಿ; ಭಾರೀ ಮಳೆ, ಬಾಳೆ ಬೆಳೆ ನಾಶ

ಜಮ್ಮು-ಕಾಶ್ಮೀರದಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದ್ದು, ಹಿಮಾಚಲ ಪ್ರದೇಶ, ಉತ್ತಾರಖಂಡ, ಉತ್ತರ ಪಂಜಾಬ್‌ ಭಾಗಗಳಲ್ಲೂ ಸಾಧಾರಣ ಮಳೆಯಾಗುವ ಸೂಚನೆ ಇದೆ.

ಪಶ್ಚಿಮ ರಾಜಸ್ಥಾನದಲ್ಲಿ ಮೇ 24ರವರೆಗೆ ಧೂಳಿನ ಬಿರುಗಾಳಿ ಬೀಸುವ ಎಚ್ಚರಿಕೆ ನೀಡಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಬಿಹಾರ, ಜಾರ್ಖಂಡ್, ಗಂಗಾನದಿ, ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

India Meteorological Department Rain Alert For These States

ಕರ್ನಾಟಕದಲ್ಲಿ ಹವಾಮಾನ; ಬೆಂಗಳೂರು ಸೇರಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಸೋಮವಾರ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಹಲವು ಭಾಗಗಳಲ್ಲಿ ಮಧ್ಯಾಹ್ನ ಉತ್ತಮ ಬಿಸಿಲು ಕಾಣಿಸಿಕೊಂಡರು, ಸಂಜೆ ವೇಳೆ ಮೋಡ ಕವಿದ ವಾತಾವರಣ ಇರಲಿದೆ.

ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಎರಡು ದಿನ ಕರ್ನಾಟಕದ ಕರಾವಳಿ ಸೇರಿದಂತೆ ಅನೇಕ ಭಾಗದಲ್ಲಿ ಮಳೆಯಾಗಲಿದೆ. ಕೊಡಗು, ಹಾಸನ ಚಿಕ್ಕಮಗಳೂರು, ಮಂಡ್ಯದಲ್ಲಿ ದಾವಣಗೆರೆಯಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ.

Recommended Video

RCB ತಂಡಕ್ಕೆ ಮುಂಬೈ ಮೇಲೆ ಫುಲ್ ಲವ್! | #Cricket | Oneindia Kannada

English summary
India Meteorological Department (IMD) said that a wet spell is likely to continue over the northwest and east India for the next 2 days. The intensity of the rain is likely to peak on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X