Metro: ಮೆಟ್ರೋದಲ್ಲಿ ಸೀಟಿಗಾಗಿ ಬಡಿದಾಡಿಕೊಂಡ ಇಬ್ಬರು ವ್ಯಕ್ತಿಗಳು, ಮುಂದಾಗಿದ್ದೇನು?

ನವದೆಹಲಿ, ಡಿಸೆಂಬರ್‌, 07: ಮೆಟ್ರೋಗಳಲ್ಲಿ ಕೆಲವೊಂದು ವಿಚಿತ್ರ ಘಟನೆಗಳು ನಡೆದಿರುವ ಉದಾಹರಣೆಗಳಿವೆ. ಪ್ರೇಮಿಗಳು ಕಿಸ್‌ ಮಾಡುವುದು, ರೀಲ್ಸ್‌ ಮಾಡುವುದು ಸೇರಿದಂತೆ ಇನ್ನಿತರ ಘಟನೆಗಳು ನಡೆದಿವೆ. ಅಲ್ಲದೆ ಇತ್ತೀಚೆಗಷ್ಟೇ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಭಿಕ್ಷೆ ಬೇಡಿದ ಹಾಗೂ ರೀಲ್ಸ್‌ ಮಾಡಿ ಪೇಚಿಗೆ ಸಿಲುಕಿದ್ದು, ನಂತರ ಅವರ ವಿರುದ್ಧ ಬಿಎಂಆರ್‌ಸಿಎಲ್‌ ಕ್ರಮ ಜರುಗಿಸಿತ್ತು. ಇದೀಗ ಮೆಟ್ರೋದಲ್ಲಿ ಇಬ್ಬರು ಪುರುಷರು ಸೀಟಿಗಾಗಿ ಹೊಡೆದಾಡಿಕೊಂಡ ಘಟನೆ ನವದೆಹಲಿಯಲ್ಲಿ ನಡೆದಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೆಟ್ರೋ ಹಲವು ವಿಚಾರಗಳಿಗೆ ದೇಶದ ಜನತೆಯ ಗಮನ ಸೆಳೆಯುತ್ತಿದ್ದು, ಇದೀಗ ಮೆಟ್ರೋದಲ್ಲಿ ಸೀಟಿಗಾಗಿ ಇಬ್ಬರು ವ್ಯಕ್ತಿಗಳ ನಡುವಿನ ಹೊಡೆದಾಟದ ವಿಡಿಯೋ ಭಾರೀ ವೈರಲ್‌ ಆಗಿದೆ. ಈ ವಿಡಿಯೋ ನೋಡಿದ ಜನರು ಕಾಮೆಂಟ್‌ಗಳ ಮೂಲಕ ಇಬ್ಬರು ವ್ಯಕ್ತಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

Metro: Fight between two people for seat in metro, video viral

ವೈರಲ್​ ಆಗಿರುವ ವಿಡಿಯೋದಲ್ಲಿ ವ್ಯಕ್ತಿಗಳಿಬ್ಬರ ನಡುವೆ ಕಳಿತುಕೊಳ್ಳುವ ಆಸನದ ವಿಚಾರಕ್ಕೆ ಗಲಾಟೆ ಶುರುವಾಗಿದ್ದು, ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಬಳಿಕ ಇಬ್ಬರು ವ್ಯಕ್ತಿಗಳು ಹೊಡೆದಾಡಿಕೊಂಡಿದ್ದು, ಈ ವೇಳೆ ಕೆಲವರು ಗಲಾಟೆಯನ್ನು ಬಿಡಿಸಲು ಮುಂದಾದರೆ, ಇನ್ನು ಕೆಲವರು ಮಾನವೀಯತೆ ಮರೆತು ಇದನ್ನು ತಮಾಷೆ ನೋಡುತ್ತಾ ತಮ್ಮ ತಮ್ಮ ಮೊಬೈಲ್‌ಗಳಲ್ಲಿ ವಿಡಿಯೋ ಮಾಡುತ್ತಿರುವ ದೃಶ್ಯವೂ ಕೂಡ ಚರ್ಚೆಗೆ ಗ್ರಾಸವಾಗಿದೆ.

ರೀಲ್ಸ್‌ ಮಾಡಲು ಹೋಗಿ ಪಜೀತಿಗೆ ಸಿಲುಕಿದ ಯುವಕ

ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಇತ್ತೀಚೆಗಷ್ಟೇ ನಿಯಮ ಮೀರಿ ಗೋಬಿ ಸೇವೆನೆ ಮಾಡಿದ್ದ ವ್ಯಕ್ತಿಯೊಬ್ಬನಿಗೆ ಬಿಎಂಆರ್‌ಸಿಎಲ್‌ 500 ರೂಪಾಯು ದಂಡ ವಿಧಿಸಿತ್ತು. ಮತ್ತೇ ಕೆಲವು ದಿನಗಳ ಬಳಿಕ ಯುವಕನೊಬ್ಬ ಮೂರ್ಚೆ ರೋಗ ಬಂದಂತೆ ನಟಿಸಿ ರೀಲ್ಸ್‌ ಮಾಡಲು ಹೋಗಿ ಪಜೀತಿಗೆ ಸಿಲುಕಿರುವ ಘಟನೆ ನಡೆದಿತ್ತು.

ವಿಜಯನಗರದಿಂದ ಮೆಜೆಸ್ಟಿಕ್​ ಕಡೆಗೆ ಬರುವ ನೇರಳೆ ಬಣ್ಣದ ಮೆಟ್ರೋ ರೈಲಿನಲ್ಲಿ ಯೂಟ್ಯೂಬರ್ ಹುಚ್ಚಾಟಕ್ಕೆ ಪ್ರಯಾಣಿಕರು ಗಾಬರಿಗೊಂಡಿದ್ದರು. ಅಲ್ಲದೆ ಎಸ್ಕಲೇಟರ್ ಮೇಲೆಯೂ ಮೂರ್ಚೆ ರೋಗ ಬಂದಂತೆ ನಟಿಸಿದ್ದ. ಹುಚ್ಚಾಟದ ಈ ವೀಡಿಯೋ ಬಗ್ಗೆ ಸಾಮಾಜಿಕ ಜಾಲಾತಣದಲ್ಲಿ ಆಕ್ರೋಶಗಳು ಭುಗಿಲೆದ್ದಿದ್ದವು. ಇನ್ನು ಪ್ರಾಂಕ್ ಮಾಡಿದ ಯುವಕನ ವಿಳಾಸವನ್ನು ಪತ್ತೆ ಹಚ್ಚಿದ BMRCL ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಾಂಕ್ ಪ್ರಜ್ಜು ಮೇಲೆ ದೂರು ದಾಖಲಿಸಿ 500 ರೂಪಾಯಿ ದಂಡ ವಿಧಿಸಿದೆ ಎನ್ನುವ ಮಾಹಿತಿ ತಿಳಿದುಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+