ಸೆಪ್ಟೆಂಬರ್ 1ರಿಂದ ಮೆಟ್ರೋ ರೈಲು ಸಂಚಾರಕ್ಕೆ ಅವಕಾಶ?
ಬೆಂಗಳೂರು, ಆಗಸ್ಟ್ 25: ಅನ್‌ಲಾಕ್ 4.0 ಮಾರ್ಗಸೂಚಿಯಲ್ಲಿ ಮೆಟ್ರೋ ರೈಲುಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೆ. ಈಗಾಗಲೇ ದೆಹಲಿ ಸರ್ಕಾರ ಮೆಟ್ರೋ ರೈಲು ಸಂಚಾರಕ್ಕೆ ಅನುಮತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
Recommended Video
ಸೆಪ್ಟೆಂಬರ್ 1 ರಿಂದ ಹೊಸ ಮಾರ್ಗಸೂಚಿ ಜಾರಿಗೆ ಬರಲಿದೆ. ಆಗ ಮೆಟ್ರೋ ರೈಲಿನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ. ವಿವಿಧ ರಾಜ್ಯಗಳ ಜೊತೆ ಚರ್ಚಿಸಿದ ಬಳಿಕ ಈ ಕುರಿತು ಕೇಂದ್ರ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ.
ಮಾರ್ಚ್‌ನಲ್ಲಿ ಕೋವಿಡ್ ಹರಡುವಿಕೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಮೆಟ್ರೋ ರೈಲುಗಳ ಸಂಚಾರ ರದ್ದಾಗಿದೆ. ಯಾವುದೇ ರಾಜ್ಯದಲ್ಲಿಯೂ ಇನ್ನೂ ರೈಲುಗಳ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ನೀಡಿಲ್ಲ.

ಮೆಟ್ರೋ ರೈಲಿನ ಸಂಚಾರ ಕಡಿಮೆ ಅವಧಿಯದ್ದೂ ಆಗಿರುತ್ತದೆ. ಹೆಚ್ಚು ಜನರು ಸೇರದಂತೆ ಎಚ್ಚರಿಕೆ ಕೈಗೊಂಡು ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂಬುದು ವಿವಿಧ ರಾಜ್ಯಗಳ ಬೇಡಿಕೆಯಾಗಿದೆ. ಸಂಚಾರಕ್ಕೆ ಅವಕಾಶ ನೀಡಿದರೆ ಬೆಂಗಳೂರಿನಲ್ಲಿಯೂ ನಮ್ಮ ಮೆಟ್ರೋ ಸಂಚಾರ ಆರಂಭವಾಗಲಿದೆ.
3.0 ಮಾರ್ಗಸೂಚಿ ಆಗಸ್ಟ್ 31ರ ತನಕ ದೇಶದಲ್ಲಿ ಜಾರಿಯಲ್ಲಿರುತ್ತದೆ. ಈ ಮಾರ್ಗಸೂಚಿ ಅನ್ವಯ ಜಿಮ್‌ಗಳನ್ನು ತೆರೆಯಲು ಅವಕಾಶ ಕೊಡಲಾಗಿದೆ. ರಾತ್ರಿ ಕರ್ಫ್ಯೂವನ್ನು ತೆಗೆದುಹಾಕಲಾಗಿದೆ. ಮೆಟ್ರೋ ರೈಲುಗಳ ಸಂಚಾರಕ್ಕೆ ಅವಕಾಶ ನೀಡಿದರೆ ನಗರ ಪ್ರದೇಶದಲ್ಲಿ ಸಂಚಾರ ಸಮಸ್ಯೆಗೆ ಪರಿಹಾರ ಸಿಗಲಿದೆ.
ಆಗಸ್ಟ್ 8ರ ಬಳಿಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳ ಅವಧಿಯಲ್ಲಿ ಪ್ರತಿದಿನ ಸುಮಾರು 70 ಸಾವಿರ ಪ್ರಕರಣಗಳು ಪ್ರತಿದಿನ ವರದಿಯಾಗುತ್ತಿವೆ.
ಬೆಂಗಳೂರು ನಗರದಲ್ಲಿ ಸೋಮವಾರ 1918 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿದೆ. ನಗರದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 109793ಕ್ಕೆ ಏರಿಕೆಯಾಗಿದೆ.












Click it and Unblock the Notifications