Mettur Dam Inflow: ಭರ್ತಿಯಾಗುತ್ತಿದೆ ಕಬಿನಿ; ಮೆಟ್ಟೂರು ಜಲಾಶಯದ ಒಳಹರಿವು ಹೆಚ್ಚಳ
ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ರಾಜ್ಯದ ಪ್ರಮುಖ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಕಾವೇರಿ ನದಿ ಪಾತ್ರದಲ್ಲಿ ಕೂಡ ವ್ಯಾಪಕ ಮಳೆಯಾಗುತ್ತಿದ್ದು, ಜಲಾಶಯಗಳು ನಿಧಾನವಾಗಿ ಭರ್ತಿಯಾಗುತ್ತಿವೆ.
ಕಾವೇರಿ ನದಿಯ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೂ ಒಳಹರಿವು ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಮಳೆಯಾಗುತ್ತಿದ್ದು ಮೆಟ್ಟೂರು ಜಲಾಶಯಕ್ಕೆ ಮುಂದಿನ ದಿನಗಳಲ್ಲಿ ಒಳಹರಿವು ಮತ್ತಷ್ಟು ಹೆಚ್ಚಲಿದೆ.

ಗುರುವಾರ ಮೆಟ್ಟೂರು ಜಲಾಶಯದ ಒಳಹರಿವು 1223 ಕ್ಯೂಸೆಕ್ಸ್ ಇದೆ. ಬುಧವಾರ 876 ಕ್ಯುಸೆಕ್ಸ್ ಇದ್ದ ಒಳಹರಿವು ಇಂದು 1223 ಕ್ಯೂಸೆಕ್ಸ್‌ಗೆ ಹೆಚ್ಚಾಗಿದೆ. 39.67 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 11.92 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಶೀಘ್ರದಲ್ಲೇ ಒಳಹರಿವು ಹೆಚ್ಚಳ
ಕರ್ನಾಟಕದ ಕೊಡಗು, ಕೇರಳದ ವಯನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ, ಕಬಿನಿ ಜಲಾಶಯದ ಒಳಹರಿವು ಹೆಚ್ಚಾಗಿದೆ. ಕಬಿನಿ ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 2284 ಅಡಿಗಳಾಗಿದ್ದು, ಸದ್ಯ 2280.35 ಅಡಿ ನೀರು ಸಂಗ್ರಹದಲ್ಲಿದೆ. 19.52 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗ 17.25 ಟಿಎಂಸಿ ನೀರಿದೆ. 7300 ಕ್ಯೂಸೆಕ್ಸ್ ಒಳಹರಿವು ಇದ್ದು, 1333 ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.
ಕಬಿನಿ ಜಲಾಶಯ ಭರ್ತಿಯಾಗಲು ಇನ್ನು ಕೇವಲ 4 ಅಡಿಗಳು ಬಾಕಿ ಇದೆ. ಅದಾದ ಬಳಿಕ ಹೊರಹರಿವು ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ಮೆಟ್ಟೂರು ಜಲಾಶಯಕ್ಕೆ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯಲಿದೆ.
100 ಅಡಿ ಸನಿಹದಲ್ಲಿ ಕೆಆರ್ ಎಸ್
ಕೆಆರ್ ಎಸ್ ಜಲಾಶಯದ ಒಳಹರಿವು 8700 ಕ್ಯೂಸೆಕ್ಸ್ ಇದ್ದು, 99.50 ಅಡಿ ನೀರು ಸಂಗ್ರಹವಾಗಿದೆ. 100 ಅಡಿ ಆಗುತ್ತಿದ್ದಂತೆ ಜಲಾಶಯದಿಂದ ರೈತರ ಬೆಳೆಗಳಿಗೆ ನೀರು ಬಿಡಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ. ಶುಕ್ರವಾರದ ವೇಳೆಗೆ ಕೆಆರ್ ಎಸ್ ನೀರಿನ ಮಟ್ಟ 100 ಅಡಿ ದಾಟುವ ನಿರೀಕ್ಷೆ ಇದೆ.
ಜುಲೈನಲ್ಲಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಈ ತಿಂಗಳು ಕಳೆಯುವ ವೇಳೆಗೆ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾದರೆ ಸಾಕಪ್ಪಾ ಎನ್ನುವಂತಾಗಿದೆ. ಕಳೆದ ವರ್ಷ ಮಳೆ ಕೊರತೆಯಿಂದ ರಾಜ್ಯದ ರೈತರು ಸಾಕಷ್ಟು ಸಂಕಷ್ಟಗಳನ್ನು ಕಂಡಿದ್ದಾರೆ, ಬೆಳೆ ಬೆಳೆಯಲಾಗದೆ ತೊಂದರೆ ಅನುಭವಿಸಿದ್ದಾರೆ. ಈ ಬಾರಿ ಮೊದಲೇ ಜಲಾಶಯಗಳು ಭರ್ತಿಯಾಗಿ ಕೆರೆ ಕಟ್ಟೆಗಳನ್ನು ತುಂಬಿಸಿಕೊಂಡು, ತಮಿಳುನಾಡಿನ ಪಾಲಿನ ನೀರನ್ನು ಬಿಡುವಂತಾದರೆ, ರಾಜ್ಯದ ರೈತರು ನೆಮ್ಮದಿಯಾಗಿ ಬೆಳೆ ಬೆಳೆದುಕೊಳ್ಳಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications