• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೇಂದ್ರ ಕೋವಿಡ್ 19 ಮಾರ್ಗಸೂಚಿ ಮಾರ್ಚ್ 31ರವರೆಗೆ ವಿಸ್ತರಣೆ

|

ನವದೆಹಲಿ,ಫೆಬ್ರವರಿ 26ಕೋವಿಡ್-19 ಸಾಂಕ್ರಾಮಿಕ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾರ್ಗಸೂಚಿಗಳನ್ನು ಮಾರ್ಚ್ 31ರವರೆಗೆ ವಿಸ್ತರಣೆ ಮಾಡಿದೆ.

ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲ, ಕೋವಿಡ್-19 ಸಾಂಕ್ರಾಮಿಕವನ್ನು ಸಂಪೂರ್ಣವಾಗಿ ನಿಗ್ರಹಿಸಲು ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆಗೊಂಡ ಬಳಿಕ ದೇಶದಲ್ಲಿ ಕೇಂದ್ರ ಗೃಹ ಸಚಿವಾಲಯವು ಅನ್ ಲಾಕ್ ಮಾರ್ಗಸೂಚಿ ಜಾರಿಗೊಳಿಸಿತ್ತು. ಇಂತಹ ಕೋವಿಡ್ ಮಾರ್ಗಸೂಚಿಗಳನ್ನು ಮಾರ್ಚ್ 31ರವರೆಗೆ ಕೇಂದ್ರ ಗೃಹ ಸಚಿವಾಲಯ(MHA) ವಿಸ್ತರಿಸಿದೆ.

ಕರ್ನಾಟಕದಲ್ಲಿ ಹೊಸ ಕೊರೊನಾ ಪ್ರಕರಣಗಳಲ್ಲಿ ಕೊಂಚ ಏರಿಕೆ

ದೇಶದಲ್ಲಿ ಒಂದೇ ದಿನದಲ್ಲಿ 16,577 ಕೊರೊನಾ ಸೋಂಕಿತರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿ ವಿಸ್ತರಿಸಲಾಗಿದೆ. ಹಾಗೆಯೇ ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಸಂಚಾರವನ್ನು ಕೂಡ ಮಾರ್ಚ್ 31ರವರೆಗೆ ನಿಷೇಧಸಿಲಾಗಿದೆ.

ದೇಶದಲ್ಲಿ ಕೊರೊನಾ ಸೋಂಕು ವಿತರಣೆಯನ್ನು ಚುರುಕುಗೊಳಿಸಬೇಕು, ಕಂಟೈನ್ಮೆಂಟ್ ಜೋನ್‌ಗಳಲ್ಲಿ ತೀವ್ರ ನಿಗಾ ಮುಂದುವರೆಯಲಿ ಎಂದು ಹೇಳಿದೆ.

ಚಿತ್ರಮಂದಿರಗಳು, ಸ್ವಿಮಿಂಗ್ ಪೂಲ್ ತೆರೆದಿರಬಹುದು, ಅಂತಾರಾಜ್ಯ ಅಥವಾ ಅಂತರ್ ಜಿಲ್ಲಾ ಸಂಚಾರಕ್ಕೆ ಯಾವುದೇ ನಿಷೇಧವಿಲ್ಲ.

ಭಾರತದಲ್ಲಿ ಒಟ್ಟು 1,10,63,491 ಕೊರೊನಾ ಸೋಂಕಿತರಿದ್ದಾರೆ. 24 ಗಂಟೆಯಲ್ಲಿ 120 ಮಂದಿ ಸಾವನ್ನಪ್ಪಿದ್ದಾರೆ.ಇನ್ನು ಒಂದೇ ದಿನ ಮಹಾಮಾರಿ ವೈರಸ್ 120 ಮಂದಿನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,56,825ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,10,63,491 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 12,179 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,07,50,680ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,55,986 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಇನ್ನು ಭಾರತದಲ್ಲಿ ಒಂದೇ ದಿನ 8,31,807 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 21,46,61,465 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

English summary
In view of rising Covid-19 cases, the Central Government on Friday extended the coronavirus containment guidelines it had issued earlier to 31 March this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X