• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನೆರೆ ದೇಶಗಳ ಮುಸ್ಲಿಮೇತರ ನಿರಾಶ್ರಿತರಿಂದ ಪೌರತ್ವ ಅರ್ಜಿ ಆಹ್ವಾನ

|
Google Oneindia Kannada News

ನವದೆಹಲಿ, ಮೇ 29: ಕೇಂದ್ರ ಸರ್ಕಾರವು ಗುಜರಾತ್, ಛತ್ತೀಸ್‌ಗಢ, ಹರ್ಯಾಣ ಮತ್ತು ಪಂಜಾಬ್‌ ಸೇರಿದಂತೆ 13 ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಮುಸ್ಲಿಮೇತರ ನಿರಾಶ್ರಿತರಿಂದ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಆಹ್ವಾನಿಸಿದೆ.

13 ಜಿಲ್ಲೆಗಳಲ್ಲಿ ನೆಲೆಸಿರುವ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್, ಜೈನರು ಮತ್ತು ಬೌದ್ಧರಂತಹ ಮುಸ್ಲಿಮೇತರರಿಗೆ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಕೇಂದ್ರ ಸರ್ಕಾರ ಆಹ್ವಾನಿಸಿದೆ.

ಸಿಎಎ ಅಡಿಯಲ್ಲಿ ಸರ್ಕಾರ ಇನ್ನೂ ನಿಯಮಗಳನ್ನು ರೂಪಿಸಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕಾರ 2015 ಕ್ಕಿಂತ ಮೊದಲು ನೆರೆಯ ರಾಷ್ಟ್ರಗಳಾದ ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಧಾರ್ಮಿಕ ವಿಚಾರಕ್ಕೆ ಕಿರುಕುಳಕ್ಕೊಳಗಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ನಿರಾಶ್ರಿತರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. ದೇಶಾದ್ಯಂತ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೂ 2020 ಡಿಸೆಂಬರ್‌ನಲ್ಲಿ ಸಿಎಎ ಅಂಗೀಕರಿಸಲ್ಪಟ್ಟಿತು.

1955ರ ಪೌರತ್ವ ಕಾಯ್ದೆ ಅಡಿಯಲ್ಲಿ ಹಾಗೂ 2009 ರಲ್ಲಿ ಕಾನೂನಿನಡಿಯಲ್ಲಿ ರೂಪಿಸಲಾದ ನಿಯಮಗಳಡಿಯಲ್ಲಿ ತ್ವರಿತವಾಗಿ ಈ ಆದೇಶವನ್ನು ಅನುಷ್ಠಾನಗೊಳಿಸಲು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಆದರೆ ಈ ಆದೇಶವು 2019 ರಲ್ಲಿ ಜಾರಿಗೆ ಬಂದ ಪೌರತ್ವ ತಿದ್ದುಪಡಿ ಕಾಯ್ದೆಗೆ (ಸಿಎಎ) ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಪ್ರಸ್ತುತ ಮೊರ್ಬಿ, ರಾಜ್ ಕೋಟ್, ಪಠಾಣ್, ವಡೋದರಾ, ದುರ್ಗ್ ,ಛತ್ತೀಸ್ ಗಢದ ಬಾಲೋಡಬಜಾರ್, ಜಾಲೊರ್, ಉದಯ್ ಪುರ, ಪಾಲಿ,ಬರ್ಮೆರ್, ಮತ್ತು ರಾಜಸ್ಥಾನದ ಶಿರೊಹಿ, ಹರಿಯಾಣದ ಪರಿದಾಬಾದ್, ಪಂಜಾಬ್ ನ ಜಲಂಧರ್ ಜಿಲ್ಲೆಯಲ್ಲಿ ವಾಸಿಸುತ್ತಿರುವ ನಿರಾಶ್ರಿತರು ಭಾರತೀಯ ಪೌರತ್ವ ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಇದೀಗ 1955ರ ಪೌರತ್ವ ಕಾಯ್ದೆ ಅಡಿಯಲ್ಲಿ ಗುಜರಾತ್​ನ ಮೊರ್ಬಿ, ರಾಜ್‌ಕೋಟ್, ಪಟಾನ್ ಮತ್ತು ವಡೋದರಾ, ಛತ್ತೀಸ್‌ಗಢದ ದುರ್ಗ್ ಮತ್ತು ಬಲೋದಬಜಾರ್, ರಾಜಸ್ಥಾನದ ಜಲೋರ್, ಉದಯಪುರ, ಪಾಲಿ, ಬಾರ್ಮರ್, ಸಿರೋಹಿ, ಹರಿಯಾಣದ ಫರಿದಾಬಾದ್ ಹಾಗೂ ಪಂಜಾಬ್​ನ ಜಲಂಧರ್ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ನಿರಾಶ್ರಿತರಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

English summary
The Centre on Friday invited non-Muslims like Hindus, Sikhs, Jains and Buddhists belonging to Afghanistan, Bangladesh and Pakistan and residing in 13 districts of Gujarat, Rajasthan, Chhattisgarh, Haryana and Punjab to apply for Indian citizenship.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X