ಶಾಲೆ, ಸರ್ಕಾರಿ ಕಾರ್ಯಕ್ರಮಗಳಲ್ಲಿ 'ರಾಷ್ಟ್ರಗೀತೆ' ಮೊದಲು ಮೊಳಗುತ್ತೆ 'ವಂದೇ ಮಾತರಂ' ಗೀತೆ: ಕೇಂದ್ರದಿಂದ ಮಾರ್ಗಸೂಚಿ
ನವದೆಹಲಿ: ಐತಿಹಾಸಿಕ 'ವಂದೇ ಮಾತರಂ' ಗೀತೆಗೆ 150 ಪೂರ್ಣಗೊಂಡು ಅರ್ಥಪೂರ್ಣ ಆಚರಣೆ ಬೆನ್ನಲ್ಲೆ ಕೇಂಧ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ ಕಾರ್ಯಕ್ರಮಗಳು, ಶಾಲೆಗಳಲ್ಲಿ ರಾಷ್ಟ್ರಗೀತೆಗೂ ಮುನ್ನ ರಾಷ್ಟ್ರೀಯ ಗೀತೆಯಾದ 'ವಂದೇ ಮಾತರಂ ಗೀತೆ'ಯನ್ನು ನುಡಿಸಬೇಕು ಅಥವಾ ಹಾಡಬೇಕು ಎಂದು ಸೂಚಿಸಿ ಇಂದು ಬುಧವಾರ (ಫೆಬ್ರವರಿ 11) ಕೇಂದ್ರ ಮಾರ್ಗಸೂಚಿ ಹೊರಡಿಸಿದೆ.
ರಾಷ್ಟ್ರಗೀತೆ ಮೊದಲು 'ವಂದೇ ಮಾತರಂ' ನುಡಿಸಬೇಕೆಂದು ಸೂಚಿಸಿರುವ ಕೇಂದ್ರ ಗೃಹ ಸಚಿವಾಲಯ ಹೊಸ ನಿಯಮ ಜಾರಿಗೆ ತಂದಿರುವುದಾಗಿ ತಿಳಿಸಿದೆ. ಈ ಹೊಸ ನಿಯಮಗಳ ಪ್ರಕಾರ 'ವಂದೇ ಮಾತರಂ' ನುಡಿಸುವಾಗ ಎಲ್ಲರೂ ಎದ್ದು ನಿಲ್ಲಬೇಕು. ರಾಷ್ಟ್ರಗೀತೆಯಾದ 'ಜನ ಗಣ ಮನ'ಕ್ಕೆ ಸಮಾನವಾದ ಗೌರವವು ಈ 'ವಂದೇ ಮಾತರಂ'ಗೂ (ರಾಷ್ಟ್ರೀಯ ಗೀತೆ) ನೀಡುವ ಉದ್ದೇಶದಿಂದ ಈ ಹೊಸ ಮಾರ್ಗಸೂಚಿ ನೀಡಿರುವುದಾಗಿ ತಿಳಿಸಿದೆ.

ಶಾಲೆ, ಕಾಲೇಜುಗಳು, ಸರ್ಕಾರ ಕಾರ್ಯಕ್ರಮಗಳು, ಪದ್ಮ ಪ್ರಶಸ್ತಿಗಳಂತಹ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಮತ್ತು ರಾಷ್ಟ್ರಪತಿಗಳು ಭಾಗವಹಿಸುವ ಎಲ್ಲಾ ಇತರ ಕಾರ್ಯಕ್ರಮಗಳಲ್ಲಿ ಹಾಗೂ ಆಗಮನ ಮತ್ತು ನಿರ್ಗಮನದ ಸಂದರ್ಭಗಳಲ್ಲಿ ರಾಷ್ಟ್ರೀಯ ಗೀತೆಯನ್ನು ನುಡಿಸಬೇಕು. ಈ ಸಂದರ್ಭದಲ್ಲಿ ಎದ್ದು ನಿಲ್ಲುವುದು ಕಡ್ಡಾಯವಲ್ಲದಿದ್ದರೂ, ಸಿನಿಮಾ ಮಂದಿರಗಳಂತಹ ಸಾರ್ವಜನಿಕ ಸ್ಥಳಗಳಲ್ಲಿಯೂ ಇದನ್ನು ನುಡಿಸಬೇಕು.
1937 ರಲ್ಲಿ ಕಾಂಗ್ರೆಸ್ ತೆಗೆದು ಹಾಕಿದ ನಾಲ್ಕು ಸೇರಿದಂತೆ ಎಲ್ಲಾ ಆರು ಚರಣಗಳು ಸೇರಿಸಿ ವಂದೇ ಮಾತರಂ ಹಾಡಲಾಗುತ್ತದೆ. ಕಾನೂನಿನಡಿಯಲ್ಲಿ, ರಾಷ್ಟ್ರಗೀತೆಯನ್ನು (ಮತ್ತು ಈಗಿನ ರಾಷ್ಟ್ರೀಯ ಗೀತೆ) ಅಡ್ಡಿಪಡಿಸುವ ಅಥವಾ ಇತರರು ಗೌರವಿಸುವುದನ್ನು ತಡೆದರೆ ಅಂತಹ ವ್ಯಕ್ತಿ ಯಾರೇ ಆಗಿದ್ದರು ಸರಿ ಗರಿಷ್ಠ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು ಎಂದು ಹೊಸ ನಿಯಮಗಳಲ್ಲಿ ತಿಳಿಸಲಾಗಿದೆ.
ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ
ವಂದೇ ಮಾತರಂ ಗೀತೆಯನ್ನು ಹಾಡುವುದು ಕಡ್ಡಾಯ ಮಾಡಿ ಹೊರಡಿಸಿರುವ ಮಾರ್ಗಸೂಚಿ/ ನಿರ್ದೇಶನವನ್ನು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು, ಸಚಿವಾಲಯಗಳು ಮತ್ತು ಸಾಂವಿಧಾನಿಕ ಸಂಸ್ಥೆಗಳಿಗೆ ರವಾನಿಸಿದೆ.
ವಂದೇ ಮಾತರಂ ಹಾಡಲು ಇವತ್ತಿನ ವರೆಗೆ ಯಾವುದೇ ಅಧಿಕೃತ ಶಿಷ್ಟಾಚಾರ ಇರಲಿಲ್ಲ. ಆದರೆ ಜನ ಗಣ ಮನ ಗೀತೆಗೆ ರಾಗ, ಸಮಯ ಮತ್ತು ಗಾಯನದ ಬಗ್ಗೆ ಸ್ಪಷ್ಟ ನಿಯಮಗಳು ಇದ್ದವು. ಅದರ ಸಮಯ ಕುರಿತು ಇತ್ತೀಚೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಹಾಡಿನ ವಿಸ್ಕೃತ, ಆರು-ಚರಣಗಳ ಆವೃತ್ತಿಯನ್ನ ಇಲ್ಲಿಯವರೆಗೆ ಅಧಿಕೃತ ಕಾರ್ಯಕ್ರಮಗಳಲ್ಲಿ ಹಾಡಿರಲಿಲ್ಲ, ಆದರೆ ಈಗ ಅದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications