ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋನಿಯಾ ಗಾಂಧಿ ನೇತೃತ್ವದ ''ಗಾಂಧಿ'' ಟ್ರಸ್ಟಿಗಳ ಅವ್ಯವಹಾರ ತನಿಖೆಗೆ

|
Google Oneindia Kannada News

ನವದೆಹಲಿ, ಜುಲೈ 9: ಚೀನಾದಿಂದ ರಾಜೀವ್ ಗಾಂಧಿ ಫೌಂಡೇಷನ್ ಗೆ ದೇಣಿಗೆ ಸಿಗುತ್ತಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕುಟುಂಬಕ್ಕೆ ಸಂಬಂಧಿಸಿದ ಮೂರು ಟ್ರಸ್ಟ್ ಗಳ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಮುಂದಾಗಿದೆ.

Recommended Video

Bengaluru has no more ICU beds , patients cry | Oneindia Kannada

ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್, ಇಂದಿರಾಗಾಂಧಿ ಟ್ರಸ್ಟ್, ರಾಜೀವ್ ಗಾಂಧಿ ಫೌಂಡೇಶನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದ್ದು, ಕೇಂದ್ರ ಸರ್ಕಾರದ ಆದೇಶದಂತೆ ಗೃಹ ಸಚಿವಾಲಯದ ಆಂತರಿಕ ಸಮಿತಿಯಿಂದ ತನಿಖೆ ನಡೆಯಲಿದೆ. ಜಾರಿ ನಿರ್ದೇಶನಾಲಯದ ವಿಶೇಷ ನಿರ್ದೇಶಕರು ಸಮಿತಿಯ ನೇತೃತ್ವ ವಹಿಸಲಿದ್ದಾರೆ.

ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್, ರಾಜೀವ್ ಗಾಂಧಿ ಪ್ರತಿಷ್ಠಾನ, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಗಳಿಗೆ ವಿವಿಧ ಮೂಲಗಳಿಂದ ದೇಣಿಗೆ ಹರಿದು ಬಂದಿದ್ದು, ಮನಿಲಾಂಡ್ರಿಂಗ್ ನಿಯಂತ್ರಣ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಎಫ್ ಸಿಆರ್ ಎ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ.

Mha Sets Up Panel To Probe Gandhi Family Trusts

ಚೀನಾದ ರಾಯಭಾರ ಕಚೇರಿಯಿಂದ ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೆ 90 ಲಕ್ಷ ರು ದೇಣಿಗೆ ಬಂದಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಆರೋಪಿಸಿದ್ದರು. ಚೀನಾ-ಭಾರತ ನಡುವೆ ಮುಕ್ತ ವಾಣಿಜ್ಯ ಒಪ್ಪಂದಕ್ಕೆ ಕಾಂಗ್ರೆಸ್ ಉತ್ತೇಜನ ನೀಡಿತ್ತು ಇದರಿಂದ ದೇಶದ ಆರ್ಥಿಕತೆಗೆ ಭಾರಿ ಹೊಡೆತ ಬಿದ್ದಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದರು. 2008ರಲ್ಲಿ ಚೀನಾದ ಕಮ್ಯೂನಿಸ್ಟ್ ಪಕ್ಷದ ಜೊತೆ ಕಾಂಗ್ರೆಸ್ ಒಪ್ಪಂದ ಮಾಡಿಕೊಂಡಿದೆ ಎಂಬುದರ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.

English summary
The Ministry of Home Affairs has set up an inter-ministerial committee to conduct investigations on the Rajiv Gandhi Foundation, Rajiv Gandhi Charitable Trust and Indira Gandhi Memorial Trust.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X