2019ರಲ್ಲಿ ಬಿಜೆಪಿಗೆ 215ಕ್ಕಿಂತ ಕಡಿಮೆ ಸೀಟು: ಕೇಜ್ರಿವಾಲ್ ಅಂದಾಜು
ನವದೆಹಲಿ, ಫೆಬ್ರವರಿ 5: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 215ಕ್ಕಿಂತ ಕಡಿಮೆ ಸ್ಥಾನಗಳು ಸಿಗಲಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕೇಜ್ರಿವಾಲ್, "ಮಧ್ಯಮ ವರ್ಗದವರು ಬಿಜೆಪಿಯಿಂದ 'ಅಸಮಧಾನಗೊಂಡಿದ್ದಾರೆ'. ಮತ್ತು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 215ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆಲ್ಲಲಿದೆ," ಎಂದು ತಿಳಿಸಿದ್ದಾರೆ.
2014ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 282 ಸ್ಥಾನಗಳನ್ನು ಗೆದ್ದಿರುವುದನ್ನು ಇಲ್ಲಿ ಸ್ಮರಿಸಬಹುದು.

"ನಿರುದ್ಯೋಗ ಅತೀ ದೊಡ್ಡ ಸಮಸ್ಯೆ. ಯುವಜನರು ಅವರ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಮಧ್ಯಮ ವರ್ಗದವರು ಬಿಜೆಪಿ ಬಗ್ಗೆ ಅಸಮಾಧಾನ ಹೊಂದಿದ್ದು ಬಿಜೆಪಿ 215ಕ್ಕಿಂತ ಕಡಿಮೆ ಸ್ಥಾನಗಳನ್ನು ಪಡೆಯಲಿದೆ," ಎಂದು ದೆಹಲಿ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 2014ರ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದರು. ಜತೆಗೆ ವಿಪಕ್ಷಗಳ ಎಲ್ಲಾ ಸವಾಲನ್ನು ಎದುರಿಸಲಾಗುವುದು ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್ ಈ ಟ್ವೀಟ್ ಮಾಡಿದ್ದಾರೆ.
Met several people in last few days.
— Arvind Kejriwal (@ArvindKejriwal) February 5, 2018
Consensus amongst all - BJP getting less than 215 seats, unemployment biggest problem, youth worried abt its future, middle class very disenchanted wid BJP












Click it and Unblock the Notifications