Narendra Modi: ಮಧ್ಯಪ್ರಾಚ್ಯ ಸಂಕಷ್ಟ: ಇಸ್ರೇಲ್ - ಯುಎಇ ಅಧ್ಯಕ್ಷರಿಗೆ ಮೋದಿ ಕರೆ, ಯುದ್ಧದ ಬಗ್ಗೆ ಹೇಳಿದ್ದೇನು
Narendra Modi: ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ವಿಷಮವಾಗುತ್ತಿದೆ. ಇರಾನ್‌ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯ ನಂತರ ಇರಾನ್ ಪ್ರತೀಕಾರ ತೀರಿಸಿಕೊಳ್ಳುವ ತವಕದಲ್ಲಿದೆ. ಅಮೆರಿಕವನ್ನು ಗುರಿಯಾಗಿಸಿಕೊಂಡು ವಿವಿಧ ದೇಶಗಳಲ್ಲಿರುವ ಅಮೆರಿಕದ ವಾಯು, ಸೇನಾ ನೆಲೆಗಳ ಮೇಲೆ ಇರಾನ್ ದಾಳಿ ಮಾಡುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದು, ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಯುಎಇ ಮೇಲಿನ ದಾಳಿಯನ್ನೂ ಸಹ ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ.
ಯುದ್ಧ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ದೂರವಾಣಿ ಸಂಭಾಷಣೆಯು ಮಹತ್ವ ಪಡೆದುಕೊಂಡಿದೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ವಿಷಯದಲ್ಲಿ ಭಾರತ ಮಧ್ಯಪ್ರವೇಶ ಮಾಡಬೇಕು ಎನ್ನುವ ಆಗ್ರಹವೂ ಕೇಳಿ ಬರುತ್ತಿದೆ. ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ ವಿಚಾರದಲ್ಲಿ ಮೌನವಾಗಿ ಇರಬೇಡಿ ಎಂದು ಭಾರತವನ್ನು ಇರಾನ್ ಒತ್ತಾಯಿಸಿತ್ತು. ಅಲ್ಲದೇ ದುಬೈನ ಮೇಲೆ ನಡೆಯುತ್ತಿರುವ ದಾಳಿಯನ್ನು ತಡೆಯಬೇಕು. ಈ ಭಾಗಗಳಲ್ಲಿ ಭಾರತದ ಕೋಟ್ಯಾಂತರ ಜನ ಇದ್ದಾರೆ ಎನ್ನುವ ಒತ್ತಡವೂ ಬರುತ್ತಿದೆ. ಗಲ್ಫ್ ದೇಶಗಳಲ್ಲಿ ಭಾರತದ 10 ಮಿಲಿಯನ್ ಜನರಿದ್ದಾರೆ. ಹೀಗಾಗಿ, ಭಾರತವು ಮಧ್ಯಪ್ರವೇಶ ಮಾಡಬೇಕು ಒತ್ತಡ ಹೇರಬೇಕು ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಭಾರತವು ಸಹ ಈ ವಿಷಯದಲ್ಲಿ ತನ್ನ ನಿಲುವನ್ನು ಬಹಿರಂಗಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ಪ್ರಸ್ತುತ ಪ್ರಾದೇಶಿಕ ಪರಿಸ್ಥಿತಿ ಕುರಿತು ಚರ್ಚಿಸಲು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದೆ. ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಆತಂಕವನ್ನು ತಿಳಿಸಿ, ನಾಗರಿಕರ ಸುರಕ್ಷತೆ ಅತ್ಯಂತ ಮುಖ್ಯವೆಂದು ಒತ್ತಿ ಹೇಳಿದ್ದೇನೆ. ಶತ್ರುತ್ವದ ಕ್ರಮಗಳು ಶೀಘ್ರದಲ್ಲೇ ನಿಲ್ಲಬೇಕು ಎಂಬ ಭಾರತದ ನಿಲುವನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದೇನೆ ಎಂದೂ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
Had a telephone call with PM Benjamin Netanyahu to discuss the current regional situation. Conveyed India's concerns over recent developments and emphasised the safety of civilians as a priority. India reiterates the need for an early cessation of hostilities.@netanyahu
— Narendra Modi (@narendramodi) March 1, 2026
ಯುಎಇ ಅಧ್ಯಕ್ಷರೊಂದಿಗೆ ಮಾತನಾಡಿದ ನರೇಂದ್ರ ಮೋದಿ
ಇನ್ನು ಯುಎಇ ಅಧ್ಯಕ್ಷರೊಂದಿಗೆ ಮಾತನಾಡಿರುವುದಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಯುಎಇ ಅಧ್ಯಕ್ಷರಾದ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತನಾಡಿದೆ. ಯುಎಇ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸಿದೆ ಮತ್ತು ಈ ದಾಳಿಯಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದೆ. ಈ ಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಒಗ್ಗಟ್ಟಿನಿಂದ ನಿಲ್ಲಲಿದೆ. ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯದ ಸುರಕ್ಷತೆಯ ದೃಷ್ಟಿಯಿಂದ ತೆಗೆದುಕೊಂಡಿರುವ ನಿರ್ಧಾರಗಳ ಬಗ್ಗೆ ಅವರಿಗೆ ಧನ್ಯವಾದ ಅರ್ಪಿಸಿದೆ. ನಾವು ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದಾರೆ.












Click it and Unblock the Notifications