ಪುಲ್ವಾಮದಲ್ಲಿ ಸಿಆರ್‍ಪಿಎಫ್ ಕ್ಯಾಂಪ್ ಮೇಲೆ ಉಗ್ರರ ದಾಳಿ, 4 ಸೈನಿಕರು ಬಲಿ
ಪುಲ್ವಾಮ, ಡಿಸೆಂಬರ್ 31: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿರುವ ಸಿಆರ್‍ಪಿಎಫ್ ಕ್ಯಾಂಪ್ ಮೇಲೆ ಉಗ್ರರು ದಾಳಿ ನಡೆಸಿದ್ದು ಕನಿಷ್ಠ 4 ಯೋಧರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರು ಸೈನಿಕರು ಗಾಯಗೊಂಡಿದ್ದಾರೆ.
ಕೇಂದ್ರೀಯ ಮೀಸಲು ಪಡೆಯ ಬೆಟಾಲಿಯನ್ 185ರ ಮೇಲೆ ಉಗ್ರರು ಇಂದು ಬೆಳಗ್ಗಿನ ಜಾವ 2 ಗಂಟೆಗೆ ಆತ್ಮಾಹುತಿ ದಾಳಿ ನಡೆಸಿದ್ದಾರೆ.

ಈ ವೇಳೆ ಮೂವರು ಉಗ್ರರೂ ಸಾವನ್ನಪ್ಪಿದ್ದಾರೆ. ಗಾಯಗೊಂಡ ಸೈನಿಕರನ್ನು ಹತ್ತಿರದ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಕ್ಯಾಂಪ್ ಸುತ್ತ ಮುತ್ತ ಸಿಆರ್‍ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ನೆರೆದಿದ್ದಾರೆ.
ಕ್ಯಾಂಪ್ ನಲ್ಲಿ ಇನ್ನೂ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.












Click it and Unblock the Notifications