J&K ನ ಅನಂತನಾಗ್‌ನಲ್ಲಿ ಉಗ್ರಗಾಮಿಗಳಿಂದ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ
ಶ್ರೀನಗರ ಮೇ 14: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭಾನುವಾರ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಸಂಗಮ್ ಪ್ರದೇಶದ ಅಂದಾನ್‌ನಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಭಾನುವಾರ ಎನ್‌ಕೌಂಟರ್ ನಡೆದಿದೆ.

ಭದ್ರತಾ ಪಡೆಗಳ ಮೇಲೆ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಪೊಲೀಸರ ಪ್ರಕಾರ, ಎರಡೂ ಕಡೆಯಿಂದ ಯಾವುದೇ ಸಾವುನೋವುಗಳ ವರದಿಯಾಗಿಲ್ಲ. ಇನ್ನೂ ಕೂಡ ಕಾರ್ಯಚರಣೆ ನಡೆಯುತ್ತಿದೆ.
#WATCH | J&K: Encounter underway between terrorist and security personnel in Andwan Sagam area of Anantnag
— ANI (@ANI) May 14, 2023
(Visuals deferred by unspecified time) pic.twitter.com/khfjR8KEWB












Click it and Unblock the Notifications