ಅನ್ನಭಾಗ್ಯ ಸಂಘರ್ಷ; ಸ್ಟಾಕ್ ಇದ್ರೂ ಕೂಡ ಅಕ್ಕಿ ಕೊಡಲ್ಲ ಎಂದು ಗೋಯಲ್‌ ಹೇಳಿದ್ದಾರೆ: ಕೆ ಹೆಚ್‌ ಮುನಿಯಪ್ಪ ಕಿಡಿ

ನವದೆಹಲಿ, ಜೂನ್‌ 23: ಕಾಂಗ್ರೆಸ್‌ ನ ಗ್ಯಾರಂಟಿ ಘೋಷಣೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಧ್ಯೆ ಸಂಘರ್ಷ ಶುರುವಾಗಿದೆ. ನೀ ಕೊಡೆ, ನಾ ಬಿಡೆ ಎಂಬಂತೆ ಅಕ್ಕಿಗಾಗಿ ತಿಕ್ಕಾಟ ನಡೆಯುತ್ತಲೇ ಇದೆ. ಅಕ್ಕಿ ಖರೀದಿಗೆ ಸಿದ್ದರಾಮಯ್ಯ ಸರ್ಕಾರ ಸರ್ಕಸ್ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ದ ವಾಕ್ಸಮರ ನಡೆಸುತ್ತಿದ್ದಾರೆ.

ಹೌದು, ಅಕ್ಕಿ ವಿತರಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇಂದು (ಶುಕ್ರವಾರ) ಕರ್ನಾಟಕ ಆಹಾರ ಸಚಿವ ಕೆ ಹೆಚ್‌ ಮುನಿಯಪ್ಪ ಅವರು ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದ್ದು, ಅಕ್ಕಿ ಪೂರೈಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.

Minister KH Muniyappa Today Meeting

ಪಿಯೂಷ್ ಗೋಯೆಲ್ ಭೇಟಿ ಬಳಿಕ ಮಾಧ್ಯಮಗಳ ಜೊತೆಗೆ ಕೆ. ಹೆಚ್. ಮುನಿಯಪ್ಪ ಮಾತನಾಡಿ, ಹೆಚ್ಚುವರಿ ಅಕ್ಕಿ ಪೂರೈಕೆಗೆ ಕೇಂದ್ರ ಸಚಿವರು ನಿರಾಕರಿಸಿದ್ದು, ಹಾರಿಕೆಯ ಉತ್ತರ ನೀಡಿದ್ದಾರೆ. ಭಾರತೀಯ ಆಹಾರ ನಿಗಮ ಬಳಿ ದಾಸ್ತಾನು ಇದ್ದರೂ ಅಕ್ಕಿ ಕೊಡಲು ಆಗುವುದಿಲ್ಲ ಎಂದಿದ್ದಾರೆ. ಇದರಲ್ಲಿ ರಾಜಕೀಯ ದುರುದ್ದೇಶ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ. ನಾವು ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಎಷ್ಟೇ ಕಷ್ಟವಾದರೀೂ ಉಚಿತವಾಗಿ ಅಕ್ಕಿ ಕೊಡುತ್ತೇವೆ, ವಿಳಂಬ ಆದ್ರೂ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಮುನಿಯಪ್ಪ ಹೇಳಿದರು.

ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ ಆದರೆ ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿರುತ್ತಾರೆ. ರಾಜ್ಯ ಸರ್ಕಾರದ ಅನ್ಯ ಭಾಗ್ಯ ಯೋಜನೆಗೆ ಅಕ್ಕಿಯನ್ನು ನೀಡಲು ಮನವಿ ಮಾಡಿದವು. ಆದರೆ ಕೇಂದ್ರ ಸಚಿವರು 300 lakh ton ಇತರೆ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದೆ ಆದ್ದರಿಂದ ರಾಜ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+