Get Updates
Get notified of breaking news, exclusive insights, and must-see stories!

ಡೆಹ್ರಾಡೂನ್‌ನಲ್ಲಿ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸಹಸ್ತ್ರ ತಾಳ-ಮಯಾಲಿ ಮಾರ್ಗದ ಮೂಲಕ ಗರ್ವಾಲ್ ಪರ್ವತ ಶ್ರೇಣಿಗಳಲ್ಲಿ ಸಿಲುಕಿರುವ ಬೆಂಗಳೂರಿನ ಸುಮಾರು 20 ಚಾರಣಿಗರ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡಲು ಉತ್ತರಾಖಂಡಕ್ಕೆ ತೆರಳಿದ್ದು ಚಾರಣಿಗರನ್ನು ಭೇಟಿ ಮಾಡಿದ್ದಾರೆ.

"ನಾನು ಬದುಕುಳಿದವರಲ್ಲಿ ಒಬ್ಬರೊಂದಿಗೆ ವೈಯಕ್ತಿಕವಾಗಿ ಮಾತನಾಡಿದ್ದೇನೆ. ಇಲ್ಲಿಯವರೆಗೆ ಚಾರಣಕ್ಕೆ ತೆರಳಿದ್ದ 20 ಮಂದಿಯಲ್ಲಿ 11 ಮಂದಿಯನ್ನು ಲೆಕ್ಕ ಹಾಕಲಾಗಿದೆ. ರಕ್ಷಣಾ ಕಾರ್ಯಾಚರಣೆಯನ್ನು ಸಂಘಟಿಸಲು ನಾನು ಶೀಘ್ರದಲ್ಲೇ ಡೆಹ್ರಾಡೂನ್ ತಲುಪುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

Minister Krishna Byre Gowda Expains rescue operations of trekkers in Garhwal from Karnataka

ಜೂನ್ 3 ರಂದು ಇಬ್ಬರು ಚಾರಣಿಗರು ಮುಖ್ಯ ತಂಡದಿಂದ ಬೇರ್ಪಟ್ಟು ಚಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅದೇ ದಿನ ಬೆಳಿಗ್ಗೆ 20 ಚಾರಣಿಗರು ಮತ್ತು ಆ ತಂಡದ ಮಾರ್ಗದರ್ಶಿಯನ್ನೊಳಗೊಂಡ ತಂಡ ಲ್ಯಾಂಬ್ಟಾಲ್ ಕ್ಯಾಂಪ್ ಸೈಟ್‌ನಿಂದ ಸಹಸ್ರತಾಲ್‌ಗೆ ತೆರಳಿದೆ.

ಚಾರಣದ ಗಮ್ಯ ತಲುಪಿ ವಾಪಸ್‌ ಶಿಬಿರಕ್ಕೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ, ಅವರು ಶಿಬಿರದಿಂದ ಸುಮಾರು ಒಂದೂವರೆ ಅಥವಾ ಎರಡು ಗಂಟೆಗಳ ದೂರದಲ್ಲಿದ್ದಾಗ, ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹಿಮಪಾತವು ಪ್ರಾರಂಭವಾಗಿದೆ. ಸಂಜೆ 4 ಗಂಟೆಯ ಹೊತ್ತಿಗೆ ಹಿಮಪಾತವು ತೀವ್ರಗೊಂಡಿದೆ. ಸಂಜೆ 6 ಗಂಟೆ ವೇಳೆಗೆ ಇಬ್ಬರು ಚಾರಣಿಗರು ಹವಾಮಾನ ವೈಪರೀತ್ಯಕ್ಕೆ ಬಲಿಯಾಗಿದ್ದಾರೆ. ಹಿಮ ಮತ್ತು ಹಿಮಗಾಳಿಯು ಚಾರಣಿಗರು ವಾಪಸ್‌ ಶಿಬಿರಕ್ಕೆ ಹಿಂದಿರುಗುವುದಕ್ಕೆ ಅಡ್ಡಿಯಾಗಿದೆ. ಏನೂ ಕಾಣಿಸದ ಪರಿಸ್ಥಿತಿ ಉಂಟಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆ ರಾತ್ರಿ ಎಲ್ಲರೂ ಒಟ್ಟಿಗೆ ಕಳೆದಿದ್ದಾರೆ. ಆದರೆ, ಈ ವೇಳೆ ಹಿಮಗಾಳಿಯ ತೀವ್ರತೆಗೆ ಕೆಲವರು ಅದೇ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಜೂನ್ 4 ರ ಬೆಳಿಗ್ಗೆ, ಮೊಬೈಲ್ ಸಂಪರ್ಕ ಸಿಗಬಹುದಾದ ಸ್ಥಳಕ್ಕೆ ತಂಡದ ಮಾರ್ಗದರ್ಶಕ ತಲುಪಿದ್ದಾನೆ. ಈ ನಡುವೆ ಶಿಬಿರಕ್ಕೆ ಹಿಂತಿರುಗುವ ಸ್ಥಿತಿಯಲ್ಲಿದ್ದ ಕೆಲವು ಚಾರಣಿಗರು ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಬಿರದ ಕಡೆಗೆ ಹೊರಟಿದ್ದಾರೆ. ಮಾರ್ಗದರ್ಶಕ ಶಿಬಿರಕ್ಕೆ ಬಂದು ಸಿಕ್ಕಿಬಿದ್ದ ಚಾರಣಿಗರನ್ನು ಕಾಪಾಡಲು ಬೇಕಾದ ಸಾಮಗ್ರಿಗಳೊಂದಿಗೆ ಮತ್ತೆ ಹಿಂತಿರುಗಿದ್ದಾರೆ.

ಜೂನ್ 4 ರ ಸಂಜೆ ವೇಳೆಗೆ ಮಾರ್ಗದರ್ಶಿಯು ಫೋನ್ ಸಿಗ್ನಲ್ ಲಭ್ಯವಿರುವ ಸ್ಥಳವನ್ನು ತಲುಪಿಕೊಂಡಿದ್ದು, ಪರಿಸ್ಥಿತಿಯ ಬಗ್ಗೆ ಕರ್ನಾಟಕ ಪರ್ವತಾರೋಹಣ ಸಂಸ್ಥೆ ಮತ್ತು ಭಾರತೀಯ ಪರ್ವತಾರೋಹಣ ಒಕ್ಕೂಟ ಸಂಸ್ಥೆಗಳಿಗೆ ದುರ್ಘಟನೆಯ ಬಗ್ಗೆ ಮಾಹಿತಿ ನೀಡಿ ಎಚ್ಚರಿಸಿದ್ದಾರೆ.

ಕರ್ನಾಟಕ ಮತ್ತು ಉತ್ತರಾಖಂಡ ಸರ್ಕಾರಗಳು ಜೂನ್ 4 ರ ರಾತ್ರಿ ವೇಳೆಗೆ ರಕ್ಷಣಾ ಕಾರ್ಯಾಚರಣೆಗಳ ಸಿದ್ಧತೆಗಳನ್ನು ಪ್ರಾರಂಭಿಸಿತ್ತು. ಭೂ ಸೇನೆ, ವಾಯುಪಡೆ, ಎಸ್‌ಡಿಆರ್‌ಎಫ್ ಮತ್ತು ವಿವಿಧ ಸರ್ಕಾರಿ-ಸರ್ಕಾರೇತರ ಸಂಸ್ಥೆಗಳು ಜೂನ್ 5 ರ ಬೆಳಿಗ್ಗೆ 5 ಗಂಟೆ ವೇಳೆಗೆ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+