Wayanad Landslide: ವಯನಾಡು ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತೆರಳಿದ ಸಚಿವ ಸಂತೋಷ್ ಲಾಡ್
ದೆಹಲಿ, ಜುಲೈ 31: ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಸಿಲುಕಿ ಮೃತಪಟ್ಟವರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಕೋಳಿಕ್ಕೋಡ್ನಲ್ಲಿ 9 ಬಾರಿ ಭೂಕುಸಿತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಗುದ್ದ ಕುಸಿತದಲ್ಲಿ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಕೇರಳ ಸಿಎಂ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ
ಭೂ ಕುಸಿತದಿಂತ ತತ್ತರಿಸಿರುವ ಕೇರಳಕ್ಕೆ ಅಗತ್ಯ ನೆರವು ಒದಗಿಸುವುದಾಗಿ ಆ ರಾಜ್ಯದ ಮುಖ್ಯಮಂತ್ರಿಗಳಿಗೆ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ದೂರವಾಣಿ ಮೂಲಕ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ದುರಂತದ ಬಗ್ಗೆ ಆಘಾತ ವ್ಯಕ್ತಪಡಿಸಿದರು. ಪರಿಹಾರ ಕಾರ್ಯದಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಕೈ ಜೋಡಿಸಲಿದೆ. ಅಗತ್ಯ ನೆರವು ಒದಗಿಸಲು ಸಿದ್ಧವಾಗಿದೆ. ರಕ್ಷಣಾ ತಂಡಗಳು ಮತ್ತು ಸಾಮಗ್ರಿಗಳನ್ನು ಕಳುಹಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications