ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆಗೂ ಸಿಕ್ಕ ಅನುಮತಿ- ಕಾರಣವೇನು?

ಬೆಂಗಳೂರು, ಜನವರಿ 12: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಿ ಕೇಂದ್ರ ರಕ್ಷಣಾ ಇಲಾಖೆ ಆದೇಶ ಹೊರಡಿಸಿದೆ. ಕಳೆದ ವಾರ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಅವಕಾಶ ನೀಡಿರಲಿಲ್ಲ. ಆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿದ್ದವು.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಿರಿಧಾನ್ಯಗಳ ವೈವಿಧ್ಯತೆಯನ್ನು ಪ್ರದರ್ಶಿಸುವ ಕರ್ನಾಟಕದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿತ್ತು. ಸತತ 13 ವರ್ಷಗಳ ಕಾಲ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕೇಂದ್ರದ ಈ ನಿರ್ಧಾರಕ್ಕೇ ಭಾರೀ ವಿರೋಧಗಳು ವ್ಯಕ್ತವಾಗಿದ್ದವು. ಅದರಲ್ಲೂ ಕರ್ನಾಟಕ ಚುನಾವಣೆಗೆ ಇನ್ನೇನು ನಾಲ್ಕೈದು ತಿಂಗಳು ಬಾಕಿ ಇರುವಾಗ ಈ ನಿರ್ಧಾರವು ಬಿಜೆಪಿಗೆ ಹಿನ್ನೆಡೆ ಉಂಟು ಮಾಡುವ ಲಕ್ಷಣಗಳು ಕಂಡುಬಂದಿದ್ದವು. ಈ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಈಗ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ನಡೆದಿರುವ ಪರೇಡ್‌ನಲ್ಲಿ ಕರ್ನಾಟಕವು ತನ್ನ ಸ್ತಬ್ಧಚಿತ್ರಕ್ಕಾಗಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ಸೃಜನಶೀಲತೆ ಮತ್ತು ವರ್ಣರಂಜಿತ ಪ್ರಸ್ತುತಿಗಾಗಿ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಕಳೆದ ವರ್ಷ ನಡೆದ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವು ಸಾಂಪ್ರದಾಯಿಕ ಕರಕುಶಲ ವಸ್ತುಗಳನ್ನು ಪ್ರದರ್ಶಿಸಿತ್ತು. ಇದು ಎರಡನೇ ಅತ್ಯುತ್ತಮ ಸ್ತಬ್ಧಚಿತ್ರವೆಂದು ಮನ್ನಣೆ ಗಳಿಸಿತ್ತು. ರಾಜ್ಯದ ಶ್ರೀಮಂತ ಜಾನಪದ, ಜೀವವೈವಿಧ್ಯ, ಕರಕುಶಲ ಮತ್ತು ಸಾಂಸ್ಕೃತಿಕ ಪರಂಪರೆಯ ಸುತ್ತ ಕರ್ನಾಟಕದ ಸ್ತಬ್ಧಚಿತ್ರಗಳು ಹೆಚ್ಚಾಗಿ ಕೇಂದ್ರೀಕೃತವಾಗಿವೆ.

Ministry of Defence says Karnatakas Republic Day 2023 tableaux has been shortlisted

ಕಳೆದು ವರ್ಷವೂ ಸ್ತಬ್ಧಚಿತ್ರದ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ತೆಲಂಗಾಣ ಹಾಗೂ ಕೇರಳದ ಸ್ತಬ್ಧಚಿತ್ರಗಳನ್ನು ನಿರಾಕರಿಸಿದ್ದ ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.

'ಸರದಿಯ ಪ್ರಕಾರ ಪ್ರತ್ಯೇಕ ರಾಜ್ಯದ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡುವುದಕ್ಕಿಂತ ಭಿನ್ನವಾಗಿ ಈ ಬಾರಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದಲ್ಲಿ ವಲಯಗಳೆಂದು ವಿಂಘಡಿಸಲಾಗಿದೆ. ಪ್ರತಿ ವಲಯದಿಂದ 2ರಿಂದ 3 ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ' ಎಂದು ಕ್ರೇಂದ್ರ ರಕ್ಷಣಾ ಸಚಿವಾಲಯದ ಮೂಲವೊಂದು ತಿಳಿಸಿದೆ.

ಸ್ತಬ್ಧಚಿತ್ರ ಆಯ್ಕೆ ಪ್ರಕ್ರಿಯೆಯು ಬಹಳ ಸಮಯ ತೆಗೆದುಕೊಳ್ಳುತ್ತದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಉತ್ತಮ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲು ವಿವಿಧ ಕ್ಷೇತ್ರಗಳಿಂದ ಬಂದ ತಜ್ಞರ ಸಮಿತಿಯನ್ನು ರಚಿಸಲಾಗುತ್ತದೆ.

Ministry of Defence says Karnatakas Republic Day 2023 tableaux has been shortlisted

ಈ ಬಾರಿ ದೇಶದಲ್ಲಿ ಆರು ವಲಯಗಳನ್ನು ರಚಿಸಲಾಗಿದೆ. 4 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಿರುವ ದಕ್ಷಿಣ ವಲಯದಲ್ಲಿ ಕರ್ನಾಟಕವನ್ನು ಸೇರಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+