2 ಡೋಸ್ ಕೊರೊನಾ ಲಸಿಕೆ ಪಡೆದವರಿಗೆ RTPCR ಪರೀಕ್ಷೆ ಬೇಡ: ಕೇಂದ್ರ

ನವದೆಹಲಿ, ಆಗಸ್ಟ್ 13: ಎರಡು ಡೋಸ್ ಕೊರೊನಾ ಲಸಿಕೆ ಪಡೆದವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಬೇಡ ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.

ಪಶ್ಚಿಮ ಬಂಗಾಳ, ಕರ್ನಾಟಕ, ಗೋವಾ ಹಾಗೂ ಛತ್ತೀಸ್‌ಗಢದಲ್ಲಿ ಪುಣೆ, ಮುಂಬೈ, ಚೆನ್ನೈನಿಂದ ಬರುವವರಿಗೆ ಲಸಿಕೆಯ ಎರಡು ಡೋಸ್ ಪಡೆದ ಪ್ರವಾಸಿಗರೂ ಆರ್‌ಟಿಪಿಸಿಆರ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿತ್ತು.

ಈ ಕುರಿತು ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ. ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಪ್ರವಾಸೋದ್ಯಮ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಭಾರತೀಯ ಪ್ರವಾಸೋದ್ಯಮ ಹಾಗೂ ಆತಿಥ್ಯ ಸಂಘಟನೆಗಳ ಒಕ್ಕೂಟದ ಜತೆ ಕೇಂದ್ರ ಪ್ರವಾಸೋದ್ಯಮ ಕಾರ್ಯದರ್ಶಿಗಳು ಆಗಸ್ಟ್ 5ರಂದು ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

 Ministry Of Tourism Urges States To Drop Mandatory RT-PCR Clause For Fully Vaccinated Tourists

ಸದ್ಯ ಮಹಾರಾಷ್ಟ್ರ, ಸಿಕ್ಕಿಂ ರಾಜ್ಯಗಳು ಮಾತ್ರ ಲಸಿಕೆಯ ಎರಡೂ ಡೋಸ್‌ ಪಡೆದ ಪ್ರವಾಸಿಗರ ಪ್ರವೇಶಕ್ಕೆ ಆರ್‌ಟಿಪಿಸಿಆರ್ ವರದಿ ಇಲ್ಲದೆ ಅನುಮತಿ ನೀಡುತ್ತಿವೆ.

ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರಿಗೆ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ. ಕೊರೊನಾ ಲಸಿಕೆಯ ಕನಿಷ್ಠ ಒಂದು ಡೋಸ್ ಪಡೆದರೆ ಸಾಕು ಕೇರಳ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರಯಾಣಿಸಬಹುದಾಗಿದೆ.

ಕೊರೊನಾ ಲಸಿಕೆ ಪಡೆದಿರುವ ಸರ್ಟಿಫಿಕೇಟ್ ಹೊಂದಿದರೆ ಕೇರಳ ಹಾಗೂ ಮಹಾರಾಷ್ಟ್ರದಿಂದ ಪ್ರಯಾಣಿಕರು ಕರ್ನಾಟಕಕ್ಕೆ ಆಗಮಿಸಬಹುದು ಎಂದು ಸರ್ಕಾರ ಹೇಳಿದೆ.

ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರು 72 ಗಂಟೆಗಳ ಮುಂಚೆ ಪಡೆದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಕೊರೊನಾ ಲಸಿಕೆಯ ಎರಡೂ ಡೋಸ್ ಪಡೆದ ಪ್ರಮಾಣಪತ್ರವನ್ನು ತೋರಿಸಬೇಕು.

ಲಸಿಕೆಯ ಎರಡು ಡೋಸ್ ಪಡೆದವರು ಪ್ರಮಾಣಪತ್ರವನ್ನು ಹೊಂದಿದ್ದರೆ ಸಾಕು ಅವರು ಆರ್‌ಟಿಪಿಸಿಆರ್ ವರದಿ ನೀಡಬೇಕೆಂದೇನಿಲ್ಲ. ಮಹಾರಾಷ್ಟ್ರ ಗಡಿ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರದಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ. ವಿದ್ಯಾರ್ಥಿಗಳು ರಾಜ್ಯರಾಜ್ಯಗಳ ನಡುವೆ ಪದೇ ಪದೇ ಪ್ರಯಾಣ ಮಾಡುತ್ತಿದ್ದರೆ ಎರಡು ವಾರಕ್ಕೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಲೇಬೇಕು.

ಆರೋಗ್ಯ ಕಾರ್ಯಕರ್ತರು, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಯಾರದ್ದೋ ಸಾವಿನ ಸಂದರ್ಭ/ವೈದ್ಯಕೀಯ ಎಮರ್ಜೆನ್ಸಿ ಸಮಯದಲ್ಲಿ ಅನುವು ಮಾಡಿಕೊಡಲಾಗುತ್ತದೆ.

ಭಾರತದಲ್ಲಿ ಕೊರೊನಾ ಏರಿಳಿಕೆ ಎಂದಿನಂತೆ ಮುಂದುವರೆದಿದ್ದು, ದೇಶದಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 40,120 ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 585 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಶುಕ್ರವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,21,17,826ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,30,254ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3,85,227ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 42,295 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,13,02,345ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 15,11,313 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 48,94,70,779 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+